AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ಯಲ್ಲಿ ಮಹೇಶ್ ಜೊತೆ ನಟಿಸಿದ್ದಾರೆ ಹಾಲಿವುಡ್ ನಟಿ: ಯಾರದು?

ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ವಿಲನ್ ಆಗಿ ಪೃಥ್ವಿರಾಜ್ ಸುಕುಮಾರನ್ ನಟನೆ ಮಾಡಿದ್ದಾರೆ. ಸಿನಿಮಾದ ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಭಾರತೀಯ ನಟಿಯಾದರೂ ಈಗ ಹೆಚ್ಚು ಸಕ್ರಿಯರಾಗಿರುವುದು ಹಾಲಿವುಡ್​​ನಲ್ಲಿ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಜೊತೆಗೆ ಮತ್ತೊಬ್ಬ ಹಾಲಿವುಡ್ ನಟಿಯೂ ಸಹ ಈ ಸಿನಿಮಾನಲ್ಲಿ ನಟಿಸಿದ್ದಾರಂತೆ.

‘ವಾರಣಾಸಿ’ಯಲ್ಲಿ ಮಹೇಶ್ ಜೊತೆ ನಟಿಸಿದ್ದಾರೆ ಹಾಲಿವುಡ್ ನಟಿ: ಯಾರದು?
Varanasi
ಮಂಜುನಾಥ ಸಿ.
|

Updated on:Oct 04, 2026 | 8:33 PM

Share

ಮುಖ್ಯಾಂಶಗಳು

  • ‘ವಾರಣಾಸಿ’ ಸಿನಿಮಾನಲ್ಲಿ ಹಾಲಿವುಡ್ ನಟಿ
  • ಪ್ರಿಯಾಂಕಾ ಚೋಪ್ರಾ ಜೊತೆಗೆ ಮತ್ತೊಬ್ಬ ನಟಿ
  • ಬ್ರಿಟೀಷ್ ನಟಿ ಡೈಸಿ ಸಹ ನಟಿಸಲಿದ್ದಾರೆ.

ರಾಜಮೌಳಿ ನಿರ್ದೇಶಿಸಿ, ಮಹೇಶ್ ಬಾಬು ನಟನೆ ಮಾಡಿರುವ ‘ವಾರಣಾಸಿ’ ಸಿನಿಮಾ ಭಾರತದ ಮಾತ್ರವಲ್ಲ ವಿಶ್ವದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ವಿಲನ್ ಆಗಿ ಪೃಥ್ವಿರಾಜ್ ಸುಕುಮಾರನ್ ನಟನೆ ಮಾಡಿದ್ದಾರೆ. ಸಿನಿಮಾದ ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಭಾರತೀಯ ನಟಿಯಾದರೂ ಈಗ ಹೆಚ್ಚು ಸಕ್ರಿಯರಾಗಿರುವುದು ಹಾಲಿವುಡ್​​ನಲ್ಲಿ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಜೊತೆಗೆ ಮತ್ತೊಬ್ಬ ಹಾಲಿವುಡ್ ನಟಿಯೂ ಸಹ ಈ ಸಿನಿಮಾನಲ್ಲಿ ನಟಿಸಿದ್ದಾರಂತೆ.

ಯಾರದು ವಿದೇಶಿ ನಟಿ?

ಬ್ರಿಟಿಷ್ ನಟಿ ಡೈಸಿ ಜೆಸ್ಸಿಕಾ ಎಡ್ಗರ್ ಜೋನ್ಸ್ ‘ವಾರಣಾಸಿ’ ಚಿತ್ರದ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ ಎಂಬ ಮಾತು ಟಾಲಿವುಡ್ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಮಹೇಶ್ ಬಾಬು ಮತ್ತು ಡೈಸಿ ನಡುವೆ ಕೆಲವು ಪ್ರಣಯ ದೃಶ್ಯಗಳಿವೆ, ಇವರಿಬ್ಬರ ಕೆಮಿಸ್ಟ್ರಿ ಚಿತ್ರದ ಪ್ರಮುಖ ಆಕರ್ಷಣೆಯಾಗಲಿದೆ ಎಂದೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.

ವಿಶ್ವಮಟ್ಟದಲ್ಲಿ ಯಶಸ್ವಿಯಾದ ‘ಆರ್‌ಆರ್‌ಆರ್’ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಎದುರಿನ ಬ್ರಿಟೀಷ್ ಯುವತಿ ಪಾತ್ರವಾದ ‘ಜೆನ್ನಿ’ ಪಾತ್ರಕ್ಕೆ ಮೊದಲು ಆಯ್ಕೆಯಾಗಿದ್ದವರು ಇದೇ ಡೈಸಿ. ಆದರೆ ವೈಯಕ್ತಿಕ ಕಾರಣಗಳು ಮತ್ತು ಡೇಟ್ಸ್ ಹೊಂದಾಣಿಕೆಯ ತೊಡಕಿನಿಂದ ಅವರು ಆ ಯೋಜನೆಯಿಂದ ಹೊರನಡೆದಿದ್ದರು. ಈಗ ರಾಜಮೌಳಿ ಮತ್ತೆ ಅವರನ್ನೇ ಕರೆತಂದಿದ್ದಾರೆ ಎಂಬ ಸುದ್ದಿ ನಿಜವಾದರೆ, ‘ವಾರಣಾಸಿ’ ಮೂಲಕ ಡೈಸಿ ಭಾರತೀಯ ಸಿನಿಮಾ ಪ್ರವೇಶಿಸಿದಂತಾಗುತ್ತದೆ.

ಅಂಟಾರ್ಕ್ಟಿಕಾದಲ್ಲಿ ಚಿತ್ರೀಕರಣದ ದಾಖಲೆ

ಈ ಚಿತ್ರ ಅಂಟಾರ್ಕ್ಟಿಕಾದಲ್ಲಿ ಚಿತ್ರೀಕರಣ ನಡೆಸಿದ ಮೊದಲ ಭಾರತೀಯ ಸಿನಿಮಾ ಎನಿಸಿಕೊಳ್ಳಲಿದೆ. ಅತಿ ಕಠಿಣ ಹವಾಮಾನ ಹಾಗೂ ಬಿಗಿಯಾದ ನಿಯಮಗಳ ಕಾರಣ ವಿಶ್ವದಲ್ಲೇ ಬೆರಳೆಣಿಕೆಯ ಚಿತ್ರತಂಡಗಳಷ್ಟೇ ಅಲ್ಲಿ ಚಿತ್ರೀಕರಣ ಮಾಡಲು ಸಾಧ್ಯವಾಗಿದೆ. ಭಾರತೀಯ ಚಿತ್ರರಂಗದ ಪಾಲಿಗೆ ಇದೊಂದು ಐತಿಹಾಸಿಕ ಮೈಲಿಗಲ್ಲು ಎನ್ನಬಹುದು.

ಅತ್ಯುನ್ನತ ತಂತ್ರಜ್ಞಾನ, ಅದ್ದೂರಿ ದೃಶ್ಯವೈಭವಕ್ಕೆ ಹೆಸರಾದ ರಾಜಮೌಳಿ ಈ ಚಿತ್ರವನ್ನು ಸುಮಾರು 1,300 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಭಾರತದ ಅತ್ಯಂತ ದುಬಾರಿ ಚಿತ್ರಗಳ ಸಾಲಿನಲ್ಲಿ ಇದಕ್ಕೆ ಎರಡನೇ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ. ಮಹೇಶ್ ಬಾಬು ಅವರ ಎದುರು ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರೆ, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Sun, 4 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್