
ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಅಲ್ಲಿ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದೆ. ಶೀಘ್ರವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಕೋರಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದರು. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಇದ್ದರೆ ಪಾರ್ಶವಾಯು ಆಗುವ ಸಾಧ್ಯತೆ ಇದೆ ಎಂದು ವೈದ್ಯರು ಆತಂಕ ಹೊರಹಾಕಿದ ರಿಪೋರ್ಟ್ ನೀಡಿ ಜಾಮೀನು ಪಡೆಯಲಾಗಿತ್ತು. ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.
ಒಂದು ಕಡೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಅವರಿಗೆ ಜಾಮೀನು ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ವಾದ-ವಿವಾದ ನಡೆಯುತ್ತಿದೆ. ಹೀಗಿರುವಾಗಲೇ ಅವರ ಮಧ್ಯಂತರ ಜಾಮೀನು ರದ್ದತಿ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಶುಕ್ರವಾರ (ಡಿಸೆಂಬರ್ 6) ಅಥವಾ ಸೋಮವಾರ (ಡಿಸೆಂಬರ್ 9) ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ.
ದರ್ಶನ್ ಅವರಿಗೆ ತೀವ್ರ ರಕ್ತದೊತ್ತಡ ಇರುವ ಕಾರಣದಿಂದ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ ಎಂದು ದರ್ಶನ್ ಪರ ವಕೀಲರು ಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಅವರನ್ನು ಚಿಕಿತ್ಸೆಗೆ ಸಿದ್ಧಮಾಡುತ್ತಿರುವುದಾಗಿ ಕೋರ್ಟ್ನಲ್ಲಿ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: ದರ್ಶನ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 6ಕ್ಕೆ ಮುಂದೂಡಿಕೆ
ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ ರೇಣುಕಾ ಸ್ವಾಮಿ ಮೇಲೆ ಇದೆ. ಈ ಕಾರಣಕ್ಕೆ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆದುಕೊಂಡು ಬಂದು ಕೊಲೆ ಮಾಡಿದ ಆರೋಪ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.