‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ಗಮನ ಸೆಳೆಯುವಂತಿದೆ. ಸುತ್ತಲೂ ಹೆಣಗಳ ರಾಶಿ ಇದೆ. ಅದರ ಮಧ್ಯೆ ಧನುಶ್ ನಿಂತಿದ್ದಾರೆ. ಅವರ ಕೈಯಲ್ಲಿ ಗನ್ ಇದೆ.

‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ
ಧನುಶ್
Follow us
ರಾಜೇಶ್ ದುಗ್ಗುಮನೆ
|

Updated on: Jul 01, 2023 | 9:00 AM

ಕಾಲಿವುಡ್ ನಟ ಧನುಶ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಸೀಮಿತರಾದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ ಭಿನ್ನ ಕಥೆ ಇರುವ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ. ಅವರ ಪಾತ್ರಗಳು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇರುತ್ತದೆ. ಈಗ ಅವರು ‘ಕ್ಯಾಪ್ಟನ್ ಮಿಲ್ಲರ್’ (Captain Miller)ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಸಿನಿಮಾ ಹೊಂದಿರಲಿದೆ. ಈ ಚಿತ್ರದ ಫಸ್ಟ್​ ಲುಕ್ ರಿವೀಲ್ ಆಗಿದ್ದು, ಈ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿ ಧನುಶ್ ಬಗ್ಗೆ ಶಿವಣ್ಣ ಮೆಚ್ಚುಗೆ ಸೂಚಿಸಿದ್ದಾರೆ.

‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ಗಮನ ಸೆಳೆಯುವಂತಿದೆ. ಸುತ್ತಲೂ ಹೆಣಗಳ ರಾಶಿ ಇದೆ. ಅದರ ಮಧ್ಯೆ ಧನುಶ್ ನಿಂತಿದ್ದಾರೆ. ಅವರ ಕೈಯಲ್ಲಿ ಗನ್ ಇದೆ. ಆ ಗನ್ ನೋಡಿದರೆ ಇದು ರೆಟ್ರೋ ಕಾಲದ ಕಥೆ ಎಂಬುದು ಸ್ಪಷ್ಟವಾಗುತ್ತದೆ. ಹಿಂಭಾಗದಲ್ಲಿ ಒಂದಷ್ಟು ವಾಹನಗಳು ಇವೆ. ‘ಗೌರವವೇ ಸ್ವಾತಂತ್ರ್ಯ’ ಎಂದು ಈ ಪೋಸ್ಟರ್​ಗೆ ಧನುಶ್ ಕ್ಯಾಪ್ಶನ್ ನೀಡಿದ್ದಾರೆ. ಈ ಲುಕ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಿವಣ್ಣ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ಧನುಶ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಧನುಶ್​ ಜೊತೆ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಶಿವಣ್ಣ ಈಗ ಪರಭಾಷೆಗಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ. ಅವರು ಧನುಶ್ ಚಿತ್ರದಲ್ಲಿ ನಟಿಸುತ್ತಾರೆ ಎಂದಾಗಲೇ ಕುತೂಹಲ ಹೆಚ್ಚಿತ್ತು. ಅವರ ಪಾತ್ರ ಹೇಗೆ ಇರಲಿದೆ ಎಂಬ ತಿಳಿದುಕೊಳ್ಳುವ ಕಾತುರ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಧನುಶ್, ಮಾಧವನ್ ಬಳಿಕ ವಿಜಯ್​ಗೆ ಸಿಗುತ್ತಿದೆ ಮಹತ್ವದ ಗೌರವ

ಈ ವರ್ಷದ ಆರಂಭದಲ್ಲಿ ಧನುಶ್​ ನಟನೆಯ ‘ವಾತಿ’ ಸಿನಿಮಾ ರಿಲೀಸ್ ಆಗಿ ಸೂಪರ್​ ಹಿಟ್ ಎನಿಸಿಕೊಂಡಿತು. ಈ ಬೆನ್ನಲ್ಲೇ ಅವರು ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಸೆಂಚುರಿ ಸ್ಟಾರ್​’ ನಟಿಸಿರುವುದರಿಂದ ಈ ಸಿನಿಮಾ ಬಗ್ಗೆ ಕನ್ನಡಿಗರಿಗೂ ನಿರೀಕ್ಷೆ ಇದೆ. ಇಬ್ಬರ ಕಾಂಬಿನೇಷನ್​ ಹೇಗೆ ಮೂಡಿಬರಲಿದೆ ಎಂಬ ಕೌತುಕ ಅಭಿಮಾನಿಗಳದ್ದು. ಈ ಚಿತ್ರವನ್ನು ಅರುಣ್ ಮಾದೇಶ್ವರನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್