AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಕಿಚ್ಚಿಗೆ ‘ಜನ ನಾಯಗನ್’ ತತ್ತರ; ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಹಲವು ಪ್ರದರ್ಶನ ರದ್ದು

Cauvery Water Dispute: ಕರ್ನಾಟಕದಲ್ಲಿ ಕಾವೇರಿ ನದಿ ನೀರಿನ ವಿವಾದದ ಕಾವು ಜೋರಾಗಿದ್ದು, ತಮಿಳಿನ 'ಜನನಾಯಗನ್' ಸಿನಿಮಾಗೆ ಭಾರಿ ಹಿನ್ನಡೆಯಾಗಿದೆ. ಕನ್ನಡ ಪರ ಸಂಘಟನೆಗಳ ಎಚ್ಚರಿಕೆಯ ಬೆನ್ನಲ್ಲೇ ಬೆಂಗಳೂರಿನ ಅಂಜನ್ ಥಿಯೇಟರ್ ಸೇರಿದಂತೆ ರಾಜ್ಯದಾದ್ಯಂತ ಚಿತ್ರಮಂದಿರಗಳಿಂದ ತಮಿಳು ಸಿನಿಮಾವನ್ನು ಎತ್ತಂಗಡಿ ಮಾಡಲಾಗುತ್ತಿದ್ದು, ಶೋಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ.

ಕಾವೇರಿ ಕಿಚ್ಚಿಗೆ ‘ಜನ ನಾಯಗನ್’ ತತ್ತರ; ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಹಲವು ಪ್ರದರ್ಶನ ರದ್ದು
ವಿಜಯ್
ಮಂಗಳ ರಾಜಗೋಪಾಲ್​
| Edited By: |

Updated on: Aug 01, 2026 | 11:50 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ತಮಿಳು ಸಿನಿಮಾ 'ಜನನಾಯಗನ್' ಶೋಗಳು ಬಂದ್
  • 500 ರಷ್ಟಿದ್ದ ಶೋಗಳನ್ನು 100 ಕ್ಕೆ ಇಳಿಸಿದ ಥಿಯೇಟರ್ ಮಾಲೀಕರು
  • ಅಂಜನ್ ಚಿತ್ರಮಂದಿರಕ್ಕೆ ಕಾವಲು ಕಾಯ್ದ ಪೊಲೀಸರು 

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರಿನ ವಿವಾದದ ಕಾವು ಈಗ ಚಿತ್ರರಂಗಕ್ಕೂ ತಟ್ಟಿದೆ. ತಮಿಳಿನ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾಗೆ (Jana Nayagan Movie) ಕಾವೇರಿ ವಿವಾದದ ಬಿಸಿ ಜೋರಾಗಿಯೇ ತಟ್ಟಿದ್ದು, ರಾಜ್ಯದ ಹಲವು ಥಿಯೇಟರ್‌ಗಳಿಂದ ಸಿನಿಮಾ ಎತ್ತಂಗಡಿಯಾಗುತ್ತಿದೆ. ಬೆಂಗಳೂರಿನಲ್ಲಿ ಶೋಗಳ ಸಂಖ್ಯೆ ತೀವ್ರ ಕುಸಿತ ಕಂಡಿದೆ. ಏಕಪರದೆ ಚಿತ್ರಮಂದಿರಗಳಲ್ಲಿ ಹೆಚ್ಚಿನ ಶೋ ತೆಗೆಯಲಾಗುತ್ತಿದೆ.

ಅಂಜನ್ ಥಿಯೇಟರ್‌ನಿಂದ ಸಿನಿಮಾ ಎತ್ತಂಗಡಿ

ಕನ್ನಡ ಪರ ಸಂಘಟನೆಗಳು ಹಾಗೂ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಮಿಳು ಸಿನಿಮಾ ಪ್ರದರ್ಶನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸುತ್ತಿದ್ದಾರೆ. ನಿನ್ನೆವರೆಗೂ ಬೆಂಗಳೂರಿನ ಪ್ರಸಿದ್ಧ ಅಂಜನ್ ಥಿಯೇಟರ್‌ನಲ್ಲಿ ‘ಜನನಾಯಗನ್’ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿತ್ತು. ಆದರೆ ರಕ್ಷಣಾ ವೇದಿಕೆಯ ಎಚ್ಚರಿಕೆಯ ಬೆನ್ನಲ್ಲೇ ಥಿಯೇಟರ್‌ನಲ್ಲಿದ್ದ ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ. ಇಂದು ಚಿತ್ರದ ಪ್ರದರ್ಶನವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಈ ಗಲಾಟೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಜನ್ ಥಿಯೇಟರ್‌ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

500ರಿಂದ 100ಕ್ಕೆ ಕುಸಿದ ಶೋಗಳು

ತಮಿಳು ಸಿನಿಮಾದ ಪ್ರದರ್ಶನವನ್ನು ರದ್ದುಗೊಳಿಸಿರುವ ಚಿತ್ರಮಂದಿರಗಳು ಈಗ ಪರ್ಯಾಯ ಮಾರ್ಗವನ್ನು ಕಂಡುಕೊಂಡಿವೆ. ಅಂಜನ್ ಥಿಯೇಟರ್ ಸೇರಿದಂತೆ ಹಲವು ಚಿತ್ರಮಂದಿರಗಳಲ್ಲಿ ಇಂದು ‘ಜನನಾಯಗನ್’ ಬದಲಿಗೆ ಇಂಗ್ಲಿಷ್ ಹಾಗೂ ತೆಲುಗು ಸಿನಿಮಾಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ನಿನ್ನೆ ಬೆಂಗಳೂರು ನಗರದ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ‘ಜನ ನಾಯಗನ್’ ಚಿತ್ರದ 500ಕ್ಕೂ ಹೆಚ್ಚು ಶೋಗಳು ಪ್ರದರ್ಶನಗೊಳ್ಳುತ್ತಿದ್ದವು. ಆದರೆ ಕಾವೇರಿ ಪ್ರತಿಭಟನೆಯ ತೀವ್ರತೆಯಿಂದಾಗಿ ಇಂದು ಶೋಗಳ ಸಂಖ್ಯೆ ಕೇವಲ 100ಕ್ಕೆ ಇಳಿದಿದೆ. ಎಲ್ಲಾ ಚಿತ್ರಮಂದಿರಗಳಿಂದಲೂ ಸದ್ದಿಲ್ಲದೆ ತಮಿಳು ಸಿನಿಮಾದ ಶೋಗಳನ್ನು ತೆಗೆದುಹಾಕಲಾಗುತ್ತಿದೆ.

ಇದನ್ನೂ ಓದಿ: ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ

ಕಾವೇರಿ ನದಿ ನೀರಿನ ವಿವಾದವೇ ಪ್ರಮುಖ ಕಾರಣ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಈ ಹಿನ್ನೆಲೆಯಲ್ಲಿ ತಮಿಳು ಭಾಷೆಯ ಸಿನಿಮಾಗಳನ್ನು ಕರ್ನಾಟಕದಲ್ಲಿ ಪ್ರದರ್ಶಿಸಬಾರದು ಎಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿವೆ. ಕಾವೇರಿ ಕಿಚ್ಚು ಹೆಚ್ಚಾಗುತ್ತಿರುವುದರಿಂದ ಚಿತ್ರಮಂದಿರಗಳ ಮೇಲೆ ದಾಳಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಮಾಲೀಕರು ಸ್ವಯಂಪ್ರೇರಿತರಾಗಿ ತಮಿಳು ಚಿತ್ರದ ಪ್ರದರ್ಶನವನ್ನು ನಿಲ್ಲಿಸುತ್ತಿದ್ದಾರೆ. ಇದಲ್ಲದೆ ಕಾವೇರಿ ಕೊಳ್ಳದ ಭಾಗದಲ್ಲೂ ‘ಜನ ನಾಯಗನ್’ ಸಿನಿಮಾ ಪ್ರದರ್ಶನ ರದ್ದು ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ