AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆನ್ಸಾರ್​ ಮಂಡಳಿಯಿಂದ ಬಿಗಿ ನಿಯಮ; ಈ ತಪ್ಪು ಮಾಡಿದ್ರೆ ಕೊಡಲ್ಲ ಸೆನ್ಸಾರ್

ಸಿನಿಮಾ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಕೊನೆ ಕ್ಷಣದಲ್ಲಿ ಬರುವ ಮನವಿಗಳಿಗೆ ಸಿಬಿಎಫ್‌ಸಿ ಬ್ರೇಕ್ ಹಾಕಿದೆ. ಇನ್ಮುಂದೆ ಸಂಪೂರ್ಣವಾಗಿ ಸಿದ್ಧಗೊಂಡ ಸಿನಿಮಾಗಳನ್ನು ಮಾತ್ರ ಪರಿಶೀಲಿಸಲಾಗುತ್ತದೆ. ರಫ್ ಕಟ್ ಅಥವಾ ಅರ್ಧಂಬರ್ಧ ಕೆಲಸದ ಸಿನಿಮಾಗಳನ್ನು ಬೋರ್ಡ್ ಸ್ವೀಕರಿಸುವುದಿಲ್ಲ. ಇದರಿಂದಾಗಿ ದೊಡ್ಡ ಬಜೆಟ್ ಸಿನಿಮಾಗಳ ತಂಡಗಳು ಇನ್ಮುಂದೆ ತಮ್ಮ ಕೆಲಸವನ್ನು ನಿಗದಿತ ಸಮಯಕ್ಕಿಂತ ಬೇಗ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಸೆನ್ಸಾರ್​ ಮಂಡಳಿಯಿಂದ ಬಿಗಿ ನಿಯಮ; ಈ ತಪ್ಪು ಮಾಡಿದ್ರೆ ಕೊಡಲ್ಲ ಸೆನ್ಸಾರ್
ಚಿತ್ರಮಂದಿರ (ಸಾಂದರ್ಭಿಕ ಚಿತ್ರ)
ರಾಜೇಶ್ ದುಗ್ಗುಮನೆ
|

Updated on: Nov 02, 2026 | 3:09 PM

Share

ಮುಖ್ಯಾಂಶಗಳು

  • ಅರ್ಧಂಬರ್ಧ ಸಿನಿಮಾಗಳಿಗೆ ಸೆಂಸಾರ್‌ ಇಲ್ಲ
  • ರಿಲೀಸ್ ಡೇಟ್ ನೆಪಕ್ಕೆ ಸಿಗಲ್ಲ ವಿನಾಯಿತಿ
  • ದೊಡ್ಡ ಬಜೆಟ್ ಸಿನಿಮಾಗಳಿಗೆ ಹೆಚ್ಚಾಯ್ತು ತಲೆನೋವು

ಸಿನಿಮಾ ತಂಡಗಳಿಗೂ ಸೆನ್ಸಾರ್ ಮಂಡಳಿ ನಡುವೆ ಕಿತ್ತಾಟ ಇದ್ದೇ ಇದೆ. ಸೆನ್ಸಾರ್ ಮಂಡಳಿ ಮಾಡವು ತಪ್ಪುಗಳಿಗೆ ಸಿನಿಮಾ ತಂಡಗಳು ತೊಂದರೆ ಅನುಭವಿಸಬೇಕಾಗುತ್ತಿವೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈಗ ಈ ಸಮಸ್ಯೆ ಮತ್ತಷ್ಟು ಉಲ್ಬಣವಾಗಬಹುದು. ಇದಕ್ಕೆ ಕಾರಣವೂ ಇದೆ. ಸೆನ್ಸಾರ್ ಮಂಡಳಿ ತನ್ನ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದು, ಇದು ಸಿನಿಮಾ ತಂಡಕ್ಕ ದೊಡ್ಡ ಶಾಕ್ ಕೊಟ್ಟಿದೆ.

ಸಿನಿಮಾ ಪ್ರಮಾಣಪತ್ರಕ್ಕಾಗಿ ಕೊನೆ ಕ್ಷಣದಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಈಗ ಬ್ರೇಕ್ ಬಿದ್ದಿದೆ. ಸಿನಿಮಾದ ರಿಲೀಸ್ ಡೇಟ್ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಇನ್ಮುಂದೆ ಯಾರಿಗೂ ಯಾವುದೇ ವಿನಾಯಿತಿ ಸಿಗುವುದಿಲ್ಲ ಎಂದು ಹೊಸ ನಿಯಮದಲ್ಲಿ ಹೇಳಲಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ತೆಗೆದುಕೊಂಡಿರುವ ಈ ಕಟ್ಟುನಿಟ್ಟಿನ ನಿರ್ಧಾರದಿಂದಾಗಿ ಇನ್ಮುಂದೆ ಚಿತ್ರತಂಡಗಳು ಶಿಸ್ತಿನಿಂದ ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ.

ಸಿಬಿಎಫ್‌ಸಿ ಸಿಇಒ ರಾಜೇಂದ್ರ ಸಿಂಗ್ ಅವರು ಈ ಹೊಸ ಆದೇಶಕ್ಕೆ ಸಹಿ ಹಾಕಿದ್ದಾರೆ. ಇನ್ಮುಂದೆ ಸಿನಿಮಾದ ಸಂಪೂರ್ಣ ಕೆಲಸಗಳು ಮುಗಿದ ನಂತರವೇ ಸೆನ್ಸಾರ್‌ಗೆ ಅರ್ಜಿ ಸಲ್ಲಿಸಬೇಕು. ಅರ್ಧ ಸಂಕಲನವಾದ ಅಥವಾ ರಫ್ ಕಟ್ ಸಿನಿಮಾಗಳನ್ನು ಬೋರ್ಡ್ ಸ್ವೀಕರಿಸುವುದಿಲ್ಲ. ಚಿತ್ರದ ಪೂರ್ಣ ಆವೃತ್ತಿಯನ್ನು ಮಾತ್ರ ಪರಿಶೀಲನೆಗೆ ತರಬೇಕು ಎಂದು ಸೂಚಿಸಲಾಗಿದೆ.

ಸಿನಿಮಾದ ಹಿನ್ನೆಲೆ ಸಂಗೀತ ಮತ್ತು ಧ್ವನಿ ಸಂಪೂರ್ಣವಾಗಿ ಮುಗಿದಿರಬೇಕು. ಗ್ರಾಫಿಕ್ಸ್ ಮತ್ತು ವಿಶುವಲ್ ಎಫೆಕ್ಟ್ಸ್ ಕೆಲಸಗಳು ಪೂರ್ಣಗೊಂಡಿರಬೇಕು. ಸಿನಿಮಾದ ಸಬ್‌ಟೈಟಲ್ಸ್ ಸಹ ಸಿದ್ಧವಾಗಿರಬೇಕು. ತಾತ್ಕಾಲಿಕ ಮ್ಯೂಸಿಕ್ ಇರುವ ಸಿನಿಮಾಗಳನ್ನು ಸೆನ್ಸಾರ್ ಮಂಡಳಿ ನೇರವಾಗಿ ತಿರಸ್ಕರಿಸಲಿದೆ.

ಮೊದಲೇ ರಿಲೀಸ್ ಡೇಟ್ ಘೋಷಣೆ ಮಾಡಿದ್ದೇವೆ ಎಂದು ಚಿತ್ರತಂಡಗಳು ವಿಶೇಷ ಸವಲತ್ತು ಕೇಳುವಂತಿಲ್ಲ. ಪ್ರಚಾರದ ಕೆಲಸಗಳು ಅಥವಾ ಪ್ರೀಮಿಯರ್ ಶೋ ನೆಪ ಒಡ್ಡಿ ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಮುಗಿಸಲು ಸಾಧ್ಯವಿಲ್ಲ. ಬೋರ್ಡ್ ಅಧಿಕೃತವಾಗಿ ಅನುಮೋದನೆ ಕೊಟ್ಟ ಬಳಿಕವೇ ಸಿನಿಮಾದ ಟೈಟಲ್ ಅಧಿಕೃತ ಎಂದು ಪರಿಗಣಿಸಲು ಸೂಚಿಸಲಾಗಿದೆ. ಯಾವುದಾದರೂ ವಿವಾದಾತ್ಮಕ ಟೈಟಲ್ ಇದ್ದರೆ ಅದನ್ನು ಬದಲಿಸುವಂತೆ ಬೋರ್ಡ್ ಸೂಚಿಸಬಹುದು.

ಇದನ್ನೂ ಓದಿ: ‘ಟಾಕ್ಸಿಕ್ ಚಿತ್ರದಲ್ಲಿ ಅತಿಯಾದ ಹಿಂಸೆ’; ಸೆನ್ಸಾರ್ ಮಂಡಳಿ ವಿರುದ್ಧ ಅಣ್ಣಾಮಲೈ ಕಿಡಿ

ದೊಡ್ಡ ಬಜೆಟ್ ಸಿನಿಮಾಗಳಿಗೆ ಈ ಹೊಸ ನಿಯಮದಿಂದ ದೊಡ್ಡ ಮಟ್ಟದ ಸವಾಲು ಎದುರಾಗಲಿದೆ. ರಿಲೀಸ್ ದಿನ ಹತ್ತಿರ ಬಂದರೂ ಸಿಜಿಐ ಮತ್ತು ಕಲರಿಂಗ್ ಕೆಲಸಗಳನ್ನು ಮಾಡುತ್ತಿರುತ್ತಾರೆ. ಇನ್ಮುಂದೆ ಅಂತಹ ಚಿತ್ರತಂಡಗಳು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಬಹಳ ಬೇಗನೆ ಮುಗಿಸಬೇಕಾಗುತ್ತದೆ. ಇದರಿಂದ ಚಿತ್ರಮಂದಿರಗಳ ಮಾಲೀಕರಿಗೆ ಮತ್ತು ಪ್ರೇಕ್ಷಕರಿಗೆ ಪ್ರದರ್ಶನ ರದ್ದಾಗುವ ಚಿಂತೆ ಇನ್ಮುಂದೆ ತಪ್ಪಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ