AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರವರೆಗೂ ನಡೆಯಲಿದೆ. ಪ್ಯಾಲೆಸ್ತೀನ್ ಸಿನಿಮಾಗಳನ್ನು ಪ್ರದರ್ಶನ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಆ ನಿಲುವನ್ನು ಪ್ರತಿರೋಧಿಸಲು ಅವರು ವೇದಿಕೆಯಲ್ಲಿ ಪ್ಯಾಲೆಸ್ತೀನ್ ಕವನ ವಾಚನ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ
Prakash Raj
ಮದನ್​ ಕುಮಾರ್​
|

Updated on: Jan 29, 2026 | 10:39 PM

Share

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ, ನಿರ್ಮಾಪಕನಾಗಿ, ವಿತರಕನಾಗಿ ಈಗ ಚಲನಚಿತ್ರೋತ್ಸವದ ರಾಯಭಾರಿ ಆಗಿ ನಿಮ್ಮ ಮುಂದೆ ನಿಂತಿದ್ದೇನೆ. ಒಂದು ಅನುಭವ ಹಂಚಿಕೊಳ್ಳುತ್ತೇನೆ’ ಎಂದು ಪ್ರಕಾಶ್ ರಾಜ್ (Prakash Raj) ಅವರು ಮಾತು ಆರಂಭಿಸಿದರು.

‘ಮೊನ್ನೆ ಒಂದು ಅಂತಾರಾಷ್ಟ್ರೀಯ ಸಾಹಿತ್ಯ ಉತ್ಸವಕ್ಕೆ ಹೋಗಿದ್ದೆ. ಅಲ್ಲಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬಂದರು. ಮಕ್ಕಳು, ಯುವಕರು ಅವರನ್ನು ನೋಡುವ ಕಾತರದಲ್ಲಿ ಇದ್ದರು. ಅವರಿಗೆ ಒಂದು ಮಾತು ಕೇಳಿದೆ. ಮೇಲಿಂದ ಈ ಭೂಮಿ ನೋಡಿದರೆ ಏನು ಎನಿಸುತ್ತದೆ ಅಂತ ಕೇಳಿದೆ. ಅಲ್ಲಿಂದ ಭೂಮಿ ಪುಟ್ಟದು ಎನಿಸುತ್ತದೆ. ಅಲ್ಲಿ ಮನುಷ್ಯರ ಜನಸಂಖ್ಯೆ ಕಡಿಮೆ. ಬೇರೆ ಎಲ್ಲ ಪ್ರಾಣಿಗಳದ್ದು ಈ ಭೂಮಿ. ಆದರೆ ಮನುಷ್ಯರು ಯಾಕೆ ಜಗಳ ಆಡುತ್ತಿದ್ದಾರೆ ಎನಿಸಿತು ಅಂತ ಅವರು ಹೇಳಿದರು’ ಎಂದಿದ್ದಾರೆ ಪ್ರಕಾಶ್ ರಾಜ್.

‘ಮಾನವೀಯ ಬಾಂಧವ್ಯ ಬೆಳೆಯಲು ಈ ರೀತಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳು ಕಾರಣ ಆಗುತ್ತವೆ. ಆದರೆ ಇತ್ತೀಚೆಗೆ ಬೆಂಗಳೂರು ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಮಾಡಿದೆ. ಇದರಿಂದ ಪ್ಯಾಲೆಸ್ತೀನ್ ಸಿನಿಮಾಗಳನ್ನು ಪ್ರದರ್ಶನ ಮಾಡಲು ನಮ್ಮ ಕೇಂದ್ರ ಸರ್ಕಾರ ಬಿಡುತ್ತಿಲ್ಲ. ಮುಖ್ಯಮಂತ್ರಿಗಳಾದ ನೀವು ಇದರ ಬಗ್ಗೆ ಒಂದು ದೊಡ್ಡ ನಿಲುವು ತೆಗೆದುಕೊಳ್ಳಬೇಕು ಅಂತ ರಾಯಭಾರಿಯಾಗಿ ನಾನು ಕೇಳಿಕೊಳ್ಳುತ್ತಿದ್ದೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

‘ನಮ್ಮ ಮಣ್ಣಿನ ಕಥೆಯಾದ ಎದೆಯ ಹಣತೆ ಪುಸ್ತಕ ಬೇರೆ ಭಾಷೆಗೆ ತರ್ಜುಮೆ ಆಗಿ ಬೂಕರ್ ಪ್ರಶಸ್ತಿ ಬಂದರೆ ನಾವು ಸಂಭ್ರಮಿಸುತ್ತೇನೆ. ನಮ್ಮ ನೆಲಕ್ಕೆ ಇನ್ನೊಬ್ಬರ ಕಥೆಯನ್ನು ತರೋಕೆ ಆಗಲ್ಲ ಎಂಬುದನ್ನು ಹೇಗೆ ಒಪ್ಪಿಕೊಳ್ಳೋಕೆ ಸಾಧ್ಯ? ಮೊನ್ನೆ ಕೇರಳದ ಸರ್ಕಾರ ಮುಂದೆ ನಿಂತು, ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿದೆ. ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ನಿಮ್ಮ ರಾಜಕೀಯ ಹುನ್ನಾರ ನಡೆಯೋದಿಲ್ಲ ಎಂಬುದನ್ನು ಕರ್ನಾಟಕ ಸರ್ಕಾರ, ಚಲನಚಿತ್ರ ಅಕಾಡೆಮಿ ಪ್ರತಿಭಟಿಸಬೇಕು ಅಂತ ನಾನು ರಾಯಭಾರಿಯಾಗಿ ಒತ್ತಾಯಿಸುತ್ತೇನೆ’ ಎಂದಿದ್ದಾರೆ ಪ್ರಕಾಶ್ ರಾಜ್.

ಇದನ್ನೂ ಓದಿ: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ?

‘ನನ್ನ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ನಮ್ಮ ಕೆನ್ನೆಗೆ ಇದ್ದರೆ ಸಾಲದು. ಇನ್ನೊಬ್ಬರ ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನು ನಮ್ಮ ಕೆನ್ನೆಗಳಿಗೆ ಮಾಡಿಸಿದರೆ ಮಾತ್ರ ನಾವು ಮನುಷ್ಯರು. ನೀವು ಪ್ಯಾಲೆಸ್ತೀನ್ ಸಿನಿಮಾಗಳನ್ನು ಇಲ್ಲಿ ಪ್ರದರ್ಶಿಸೋಕೆ ಬಿಡದೇ ಇದ್ದರೆ ನಾನು ಈ ವೇದಿಕೆಯಲ್ಲಿ ಅಲ್ಲಿನ ನೋವಿನ ಪದ್ಯವನ್ನು ಓದುತ್ತೇನೆ. ಆ ಮೂಲಕ ನನ್ನ ಪ್ರತಿರೋಧ ವ್ಯಕ್ತಪಡಿಸುತ್ತೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!