AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

‘ಹನುಮಾನ್​’ ಚಿತ್ರತಂಡದವರು ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋವನ್ನು ಅನುರಾಗ್​ ಠಾಕೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿರುವ ಅವರು ಇಡೀ ತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ.

‘ಹನುಮಾನ್​’ ಚಿತ್ರವನ್ನು ಮಾಸ್ಟರ್​ಪೀಸ್​ ಎಂದು ಹೊಗಳಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​
ತೇಜ ಸಜ್ಜಾ, ಅನುರಾಗ್​ ಠಾಕೂರ್​, ಹನುಮಾನ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 18, 2024 | 1:10 PM

Share

ಎಲ್ಲ ವರ್ಗದ ಜನರನ್ನು ಹನುಮಾನ್​’ ಸಿನಿಮಾ (Hanuman Movie) ಆಕರ್ಷಿಸುತ್ತಿದೆ. ಈಗ ದೇಶದೆಲ್ಲೆಡೆ ರಾಮ ಮಂದಿರದ ಚರ್ಚೆ ನಡೆಯುತ್ತಿದೆ. ರಾಮ, ಆಂಜನೇಯರ ಪೂಜೆ ಎಲ್ಲೆಲ್ಲೂ ನಡೆಯುತ್ತಿದೆ. ಅದೇ ಸಂದರ್ಭಕ್ಕೆ ಸರಿಯಾಗಿ ತೆಲುಗಿನ ತೇಜ ಸಜ್ಜಾ (Teja Sajja) ಅಭಿನಯದ ‘ಹನುಮಾನ್​’ ಸಿನಿಮಾ ಬಿಡುಗಡೆ ಆಗಿರುವುದು ವಿಶೇಷ. ಇದರಿಂದ ಚಿತ್ರತಂಡಕ್ಕೆ ಅನುಕೂಲ ಆಗಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಕೂಡ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಶಿವರಾಜ್​ಕುಮಾರ್​, ನಂದಮೂರಿ ಬಾಲಕೃಷ್ಣ ಅವರ ಬಳಿಕ ಕೇಂದ್ರ ಸಚಿವ ಅನುರಾಗ್​ ಠಾಕೂರ್​ (Anurag Thakur) ಸಹ ‘ಹನುಮಾನ್​’ ಸಿನಿಮಾದ ಬಗ್ಗೆ ಟ್ವೀಟ್​ ಮಾಡಿದ್ದಾರೆ.

‘ಹನುಮಾನ್​’ ಚಿತ್ರತಂಡದವರು ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋವನ್ನು ಅನುರಾಗ್​ ಠಾಕೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿರುವ ಅವರು ಇಡೀ ತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ‘ಹನುಮಾನ್​’ ಸಿನಿಮಾವನ್ನು ಮಾಸ್ಟರ್​ ಪೀಸ್​ ಎಂದು ಅನುರಾಗ್​ ಠಾಕೂರ್​ ಹೊಗಳಿದ್ದಾರೆ.

‘ನಮ್ಮ ಸನಾತನ ಧರ್ಮದ ಕುರಿತಾಗಿ ಇರುವ ಹನುಮಾನ್​ ಸಿನಿಮಾ ಒಂದು ಮಾಸ್ಟರ್​ಪೀಸ್​. ಸಿನಿಮಾದ ಗ್ರಾಫಿಕ್ಸ್​ ತುಂಬ ಚೆನ್ನಾಗಿದೆ. ಚಿತ್ರತಂಡದ ಶ್ರಮ ಎದ್ದು ಕಾಣುತ್ತಿದೆ. ಈ ತಂಡಕ್ಕೆ ನಾನು ಮೆಚ್ಚುಗೆ ಸೂಚಿಸುತ್ತೇನೆ. ನಿರ್ದೇಶಕ ಪ್ರಶಾಂತ್​ ವರ್ಮಾ, ನಟ ತೇಜ ಸಜ್ಜಾ, ನಿರ್ಮಾಪಕ ನಿರಂಜನ್​ ರೆಡ್ಡಿ ಹಾಗೂ ತಂಡದವರು ಅತ್ಯುತ್ತಮ ಸಿನಿಮಾ ಮಾಡಿದ್ದಾರೆ’ ಎಂದು ಅನುರಾಗ್​ ಠಾಕೂರ್​ ಪೋಸ್ಟ್​ ಮಾಡಿದ್ದಾರೆ. ಇದರ ಜೊತೆ #HanuManEverywhere ಎಂಬ ಹ್ಯಾಶ್​ಟ್ಯಾಗ್​ ಬಳಸಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾ ನೋಡಿ ಭೇಷ್​ ಎಂದ ಬಾಲಯ್ಯ; ಹೆಚ್ಚಿತು ಚಿತ್ರತಂಡದ ಬಲ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಹನುಮಾನ್​’ ಸಿನಿಮಾ ಬಿಡುಗಡೆ ಆಯಿತು. ಆಂಜನೇಯನಿಂದ ಸೂಪರ್​ ಪವರ್​ ಪಡೆಯುವ ಯುವಕನ ಕಥೆ ಈ ಸಿನಿಮಾದಲ್ಲಿ ಇದೆ. ಆ ಪಾತ್ರಕ್ಕೆ ತೇಜ ಸಜ್ಜಾ ಅವರು ಬಣ್ಣ ಹಚ್ಚಿದ್ದಾರೆ. ರಾಜ್​ ದೀಪಕ್​ ಶೆಟ್ಟಿ, ಅಮೃತಾ ಐಯ್ಯರ್​, ವರಲಕ್ಷ್ಮೀ ಶರತ್​ ಕುಮಾರ್​, ವಿನಯ್ ರೈ ಮುಂತಾದವರು ‘ಹನುಮಾನ್​’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್