ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ

ಚೈತ್ರಾ ಕುಂದಾಪುರ ಅವರ ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಶ್ರೀಕಾಂತ್ ಕಶ್ಯಪ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರು ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿಹಿ ಸುದ್ದಿ ತಿಳಿದ ಕೂಡಲೇ ಚೈತ್ರಾ ಕುಂದಾಪುರ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ
Shrikanth Kashyap, Chaithra Kundapura

Updated on: May 08, 2025 | 10:15 PM

ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ (Chaithra Kundapura) ಅವರು ಹಸೆಮಣೆ ಏರಲಿ ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆಗೆ (Chaithra Kundapura Marriage) ತಯಾರಿ ನಡೆದಿದೆ. ಇಷ್ಟು ದಿನಗಳ ಕಾಲ ಚೈತ್ರಾ ಕುಂದಾಪುರ ಅವರು ವರನ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ಹೊಸದೊಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಶ್ರೀಕಾಂತ್ ಕಶ್ಯಪ್ (Shrikanth Kashyap) ಜೊತೆ ಚೈತ್ರಾ ಕುಂದಾಪುರ ಮದುವೆ ನೆರವೇರಲಿದೆ. ಪ್ರೀ-ವೆಡ್ಡಿಂಗ್ ವಿಡಿಯೋವನ್ನು ಚೈತ್ರಾ ಕುಂದಾಪುರ ಅವರ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್ ಮಾಡಿದ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋಗೆ ಬಂದ ಬಳಿಕ ಚೈತ್ರಾ ಕುಂದಾಪುರ ಅವರ ಖ್ಯಾತಿ ಹೆಚ್ಚಿತು. ನಂತರ ಅವರು ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲೂ ಕಾಣಿಸಿಕೊಂಡರು. ಬಿಗ್ ಬಾಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಅವರು ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಈಗ ಚೈತ್ರಾ ಕುಂದಾಪುರ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಇದನ್ನೂ ಓದಿ
‘ನಾನೇನು ಬಿಟ್ಟಿ ಬಿದ್ದಿದೀನಾ?’; ಮತ್ತೆ ರೌದ್ರಾವತಾರ ತೋರಿಸಿದ ಚೈತ್ರಾ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
‘ನನಗೆ ಬಿಗ್ ಬಾಸ್ ಸರಿಯಲ್ಲ, ತಪ್ಪು ನಿರ್ಧಾರ ಮಾಡಿದೆ’: ಚೈತ್ರಾ ಕುಂದಾಪುರ

‘ಇದು ಬಹಿರಂಗಪಡಿಸುವ ಸಮಯ. ಬದುಕಿನ ಸಂಕಷ್ಟದಿಂದ ಸಂಭ್ರಮದವರೆಗೂ ಜೊತೆ ನಿಂತ ಜೀವದೊಂದಿಗೆ ಸಪ್ತಪದಿ ಇಡುವ ಸಮಯ ಬಂದಿದೆ. ನಿಮ್ಮೆಲ್ಲರ ಹಾರೈಕೆ ನಮ್ಮನ್ನು ಕಾಯಲಿ’ ಎಂಬ ಕ್ಯಾಪ್ಷನ್​​ನೊಂದಿಗೆ ಚೈತ್ರಾ ಕುಂದಾಪುರ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಸಂದರ್ಭದಲ್ಲಿ ಮದುವೆ ಬಗ್ಗೆ ಸುದೀಪ್ ಮಾತನಾಡಿದ್ದ ತುಣುಕು ಕೂಡ ಈ ವಿಡಿಯೋದಲ್ಲಿದೆ.

ಬಿಗ್ ಬಾಸ್​​ಗೆ ಬರುವಾಗಲೇ ಚೈತ್ರಾ ಕುಂದಾಪುರ ಅವರ ಮದುವೆ ಮಾತುಕಥೆ ನಡೆದಿತ್ತು. ‘ಈಗಾಗಲೇ ಮದುವೆ ಫಿಕ್ಸ್ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ಹೇಳಿದ್ದರು. ಆದರೆ ಹುಡುಗ ಯಾರು ಎಂಬುದನ್ನು ತಿಳಿಸಿರಲಿಲ್ಲ. ಈಗ ವಿಡಿಯೋ ಮೂಲಕ ಅವರು ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

‘ಯಾವುದಾದರೂ ದೇವಸ್ಥಾನದಲ್ಲಿ ದೇವರಿಗೆ ಅವರನ್ನು ಸಮರ್ಪಣೆ ಮಾಡಿಕೊಂಡ ವ್ಯಕ್ತಿಯನ್ನು ನೀವು ಮದುವೆ ಆಗುವುದು ಉತ್ತಮ. ಯಾಕೆಂದರೆ, ನೀವು ಏನೇ ಮಾಡಿದರೂ ಅವರು ದೇವರೇ ಅಂತ ಕುಳಿತುಕೊಳ್ಳುತ್ತಾರೆ’ ಎಂದು ಸುದೀಪ್ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.