AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಮುಖಿ ಅವತಾರದಲ್ಲಿ ಬಂದ ಕಂಗನಾ ರಣಾವತ್​; ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ

Chandramukhi 2 Movie: ‘ಚಂದ್ರಮುಖಿ 2’ ಸಿನಿಮಾದಲ್ಲಿ ಕಂಗನಾ ರಣಾವತ್​ ಅವರಿಗೆ ಡಿಫರೆಂಟ್​ ಪಾತ್ರ ಇದೆ. ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಚಂದ್ರಮುಖಿ ಅವತಾರದಲ್ಲಿ ಬಂದ ಕಂಗನಾ ರಣಾವತ್​; ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on:Aug 05, 2023 | 3:59 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವುಗಳ ಪೈಕಿ ‘ಚಂದ್ರಮುಖಿ 2’ ಸಿನಿಮಾ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಬಹುದು. ಈ ಚಿತ್ರದಲ್ಲಿ ಅವರು ಚಂದ್ರಮುಖಿಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಂಗನಾ ರಣಾವತ್​ ಅವರ ಗೆಟಪ್​ ಹೇಗಿರಬಹುದು ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಂದ್ರಮುಖಿ 2’ (Chandramukhi 2) ಸಿನಿಮಾದಿಂದ ಅವರ ಪೋಸ್ಟರ್​ ಬಿಡುಗಡೆ ಆಗಿದೆ. ಮಹಾರಾಣಿಯ ರೀತಿಯಲ್ಲಿ ಕಂಗನಾ ಪೋಸ್​ ನೀಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ. ಈ ಸಿನಿಮಾದಲ್ಲಿ ಕಂಗನಾ ರಣಾವತ್​ ಜೊತೆ ರಾಘವ ಲಾರೆನ್ಸ್ (Raghava Lawrence) ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಪಾತ್ರದ ಲುಕ್​ ಕೂಡ ಅನಾವರಣ ಆಗಿತ್ತು.

ಕಂಗನಾ ರಣಾವತ್​ ಅವರು ಪ್ರತಿಭಾವಂತ ಕಲಾವಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಯಾವ ಪಾತ್ರ ಕೊಟ್ಟರೂ ಅವರು ಅದಕ್ಕೆ ನ್ಯಾಯ ಒದಗಿಸುತ್ತಾರೆ. ‘ಮಣಿಕರ್ಣಿಕಾ’ ಸಿನಿಮಾದಲ್ಲಿ ಅವರು ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಕಂಗನಾ ಮಿಂಚಿದ್ದರು. ‘ಧಾಕಡ್​’ ಸಿನಿಮಾದಲ್ಲಿ ಆ್ಯಕ್ಷನ್​ ಕ್ವೀನ್​ ರೀತಿ ಕಾಣಿಸಿಕೊಂಡಿದ್ದರು. ‘ಚಂದ್ರಮುಖಿ 2’ ಸಿನಿಮಾದಲ್ಲಿ ಅವರಿಗೆ ಡಿಫರೆಂಟ್​ ಆದಂತಹ ಪಾತ್ರ ಇದೆ. ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

2005ರಲ್ಲಿ ಚಂದ್ರಮುಖಿ ಸಿನಿಮಾ ಮೂಡಿಬಂದಿತ್ತು. ಅದರಲ್ಲಿ ರಜನಿಕಾಂತ್​ ಮತ್ತು ಜ್ಯೋತಿಕಾ ನಟಿಸಿದ್ದರು. ಈಗ ಆ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದ್ದು, ರಾಘವ ಲಾರೆನ್ಸ್​ ಮತ್ತು ಕಂಗನಾ ರಣಾವತ್​ ಅವರ ಕಾಂಬಿನೇಷನ್​ ಈ ಸಿನಿಮಾದಲ್ಲಿ ಇದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ ಮೂಲಕ ಸುಭಾಷ್ ಕರಣ್ ಅವರು ‘ಚಂದ್ರಮುಖಿ 2’ ನಿರ್ಮಿಸುತ್ತಿದ್ದಾರೆ. ಎಂ.ಎಂ. ಕೀರವಾಣಿ ಅವರ ಸಂಗೀತ, ಆರ್.ಡಿ. ರಾಜಶೇಖರ್ ಅವರ ಛಾಯಾಗ್ರಹಣ, ಅಂಥೋನಿ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಇದನ್ನೂ ಓದಿ: ‘ಆಪನ್​ಹೈಮರ್​ ಚಿತ್ರದಲ್ಲಿ ಭಗವದ್ಗೀತೆ ದೃಶ್ಯವೇ ನನ್ನ ಫೇವರಿಟ್​’: ವಿಮರ್ಶೆ ತಿಳಿಸಿದ ಕಂಗನಾ ರಣಾವತ್​

ಪಿ. ವಾಸು ನಿರ್ದೇಶನದ ‘ಚಂದ್ರಮುಖಿ 2’ ಸಿನಿಮಾದಲ್ಲಿ ರಾಘವ ಲಾರೆನ್ಸ್​, ಕಂಗನಾ ರಣಾವತ್​ ಮಾತ್ರವಲ್ಲದೇ ಲಕ್ಷ್ಮೀ ಮೆನನ್, ವಡಿವೇಲು, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರ ಗಣೇಶ ಹಬ್ಬದ ಸಂದರ್ಭದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೇ, ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಸಿನಿಮಾದ ಮೇಲೂ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ಸಿನಿಮಾ ನವೆಂಬರ್​ 24ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:12 pm, Sat, 5 August 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ