ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್​ ಯಶಸ್ವಿಯಾಗಿ ಕಾಲಿಟ್ಟಿದೆ. ಇಸ್ರೋ ಮಾಡಿದ ಸಾಧನೆಗೆ ಭಾರತೀಯರೆಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಕ್ಷಯ್​ ಕುಮಾರ್​, ಯಶ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಇಸ್ರೋ ವಿಜ್ಞಾನಿಗಳ ಸಾಧನೆಗೆ ಹ್ಯಾಟ್ಸ್​ ಆಫ್​ ಎನ್ನುತ್ತಿದ್ದಾರೆ.

ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?
ವಿಕ್ರಮ್​ ಲ್ಯಾಂಡರ್​, ಯಶ್​, ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on:Aug 23, 2023 | 7:13 PM

ಇಡೀ ದೇಶವೇ ಹೆಮ್ಮೆಯಿಂದ ಚಂದ್ರನತ್ತ ನೋಡುತ್ತಿದೆ. ಭಾರತದ ‘ಚಂದ್ರಯಾನ 3’ (Chandrayaan 3) ಯೋಜನೆ ಯಶಸ್ವಿ ಆಗಿದೆ. ಚಂದ್ರನ ಅಂಗಳದ ಮೇಲೆ ವಿಕ್ರಮ್​ ಲ್ಯಾಂಡರ್​ ಕಾಲಿಟ್ಟಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿಶ್ವದ ಜನರು ಸಾಕ್ಷಿ ಆಗಿದ್ದಾರೆ. ಎಲ್ಲ ಭಾರತೀಯರ ಪಾಲಿಗೆ ಇದು ಹೆಮ್ಮೆಯ ಕ್ಷಣ. ಇಸ್ರೋ ವಿಜ್ಞಾನಿಗಳ (ISRO Scientist) ಈ ಸಾಧನೆಯನ್ನು ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಗಲ್ಲಿ ಗಲ್ಲಿಗಳಲ್ಲಿ ಜನರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ವೇಳೆ ಯಶ್​ (Yash), ಹೃತಿಕ್​ ರೋಷನ್​, ಅಕ್ಷಯ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ದೇಶಪ್ರೇಮ ವ್ಯಕ್ತಪಡಿಸುವಲ್ಲಿ ಅಕ್ಷಯ್​ ಕುಮಾರ್​ ಅವರು ಯಾವಾಗಲೂ ಮುಂದಿರುತ್ತಾರೆ. ‘ಕೋಟ್ಯಂತರ ಹೃದಯಗಳು ಇಸ್ರೋಗೆ ಧನ್ಯವಾದ ತಿಳಿಸುತ್ತಿವೆ. ನಾವು ಹೆಮ್ಮೆ ಪಡುವಂತೆ ನೀವು ಮಾಡಿದ್ದೀರಿ. ಭಾರತ ಇತಿಹಾಸ ನಿರ್ಮಿಸಿದ ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಕ್ಕೆ ನಾನು ಅದೃಷ್ಟವಂತ. ಭಾರತ ಈಗ ಚಂದ್ರನ ಅಂಗಳದಲ್ಲಿದೆ. ನಾವು ಚಂದ್ರನ ಮೇಲಿದ್ದೇವೆ’ ಎಂದು ಅಕ್ಷಯ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್:

ಅದೇ ರೀತಿ ಹೃತಿಕ್​ ರೋಷನ್​ ಕೂಡ ಹಿರಿಹಿರಿ ಹಿಗ್ಗಿದ್ದಾರೆ. ‘ಇಂದು ನನ್ನ ಹೃದಯ ಇನ್ನೂ ಹೆಚ್ಚಿನ ಹೆಮ್ಮೆಯ ಭಾವದಿಂದ ತುಂಬಿ ಬಂದಿದೆ. ಚಂದ್ರಯಾನ 3 ಯೋಜನೆಯ ಹಿಂದಿರುವ ಎಲ್ಲರಿಗೂ ನನ್ನ ಅಭಿನಂದನೆ ಮತ್ತು ಧನ್ಯವಾದಗಳು’ ಎಂದು ಹೃತಿಕ್​ ರೋಷನ್​ ಅವರು ಟ್ವೀಟ್​ ಮಾಡಿದ್ದಾರೆ.

ಹೃತಿಕ್​ ರೋಷನ್​ ಟ್ವೀಟ್​:

ಇಸ್ರೋ ಸಾಧನೆಗೆ ನಟ ಯಶ್​ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ‘ಪ್ರಯತ್ನಿಸುವವರಿಗೆ ಯಾವುದೂ ಅಸಾಧ್ಯವಿಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಮಾಡಿದ್ದಕ್ಕಾಗಿ ಇಸ್ರೋಗೆ ಅಭಿನಂದನೆಗಳು. ನೀವು ಇತಿಹಾಸ ನಿರ್ಮಿಸಿದ್ದೀರಿ. ಎಲ್ಲ ಭಾರತೀಯರಿಗೂ ಹೆಮ್ಮೆ ತಂದಿದ್ದೀರಿ. ಮುಂದಿನ ಪೀಳಿಗೆಗೆ ಸ್ಫೂರ್ತಿ ಆಗಿದ್ದೀರಿ’ ಎಂದು ರಾಕಿಂಗ್​ ಸ್ಟಾರ್​ ಟ್ವೀಟ್​ ಮಾಡಿದ್ದಾರೆ.

ನಟ ಯಶ್ ಟ್ವೀಟ್​:

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:11 pm, Wed, 23 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು