Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ನಟಿ ಪವಿತ್ರಾ ಜಯರಾಮ್​ ಜೊತೆ ಆಪ್ತವಾಗಿದ್ದ ನಟ ಚಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಗೆಳತಿ ಪವಿತ್ರಾ ಜಯರಾಮ್​ ಸಾವಿನ ನಂತರ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿರುವುದು ದುರಂತ. ಪವಿತ್ರಾ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ತೀವ್ರ ಭಾವುಕವಾಗಿ ಅವರು ಮಾತನಾಡಿದ್ದರು.

Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ
ಚಂದು

Updated on: May 17, 2024 | 11:06 PM

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ (Pavithra Jayaram) ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು (Chandu) ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ (Chandu Suicide) ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಇದನ್ನೂ ಓದಿ: ದರ್ಶನ್ ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಸ್ನೇಹಿತೆ ಪವಿತ್ರಾ ಜಯರಾಮ್​ ನಿಧನಕ್ಕೆ ಕಣ್ಣೀರು ಹಾಕಿದ ನಟ ಚಂದು ಗೌಡ

ಜನಪ್ರಿಯ ‘ತ್ರಿನಯನಿ’ ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್​ ಅವರು ಒಟ್ಟಿಗೆ ನಟಿಸುತ್ತಿದ್ದರು. ಪವಿತ್ರಾ ನಿಧನದ ಬಳಿಕ ಈ ಧಾರಾವಾಹಿ ತಂಡದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು. ಈಗ ಚಂದು ಕೂಡ ನಿಧನರಾಗಿರುವುದರಿಂದ ಎಲ್ಲರಿಗೂ ಆಘಾತ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:55 pm, Fri, 17 May 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us