Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ
ಶಾರುಖ್ ಖಾನ್Image Credit source: Prabhat Khabar
Follow us
ನಯನಾ ರಾಜೀವ್
|

Updated on: Nov 12, 2024 | 10:18 AM

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲವಾದ ನಂತರ ಅವರನ್ನು ಬಂಧಿಸಲಾಯಿತು. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್​ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿತ್ತು, ಇದಾದ ಬಳಿಕ ಶಾರುಖ್​ಗೆ ವೈಪ್ಲಸ್ ಭದ್ರತೆ ಕಲ್ಪಿಸಲಾಗತ್ತು. ಕಳೆದ ವಾರ, ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ನಂತರ ರಾಜಸ್ಥಾನದ 32 ವರ್ಷದ ವ್ಯಕ್ತಿಯನ್ನು ಕರ್ನಾಟಕದಲ್ಲಿ ಬಂಧಿಸಲಾಯಿತು.

ಮತ್ತಷ್ಟು ಓದಿ: Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ

ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದ ಬೆದರಿಕೆಯನ್ನು ಸ್ವೀಕರಿಸಿದ ಒಂದು ದಿನದ ಬಳಿಕ ದೇವಸ್ಥಾನದಲ್ಲಿ ಸಲ್ಮಾನ್ ಖಾನ್ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತಲೂ ಭೀಕರ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್​ಸ್ಟರ್​ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್‌ಗೆ ಬೆದರಿಕೆಯ ದೂರು ದಾಖಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ