Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

Shah Rukh Khan: ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ
ಶಾರುಖ್ ಖಾನ್
Image Credit source: Prabhat Khabar

Updated on: Nov 12, 2024 | 10:18 AM

ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್‌ಗಢದ ರಾಯ್‌ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲವಾದ ನಂತರ ಅವರನ್ನು ಬಂಧಿಸಲಾಯಿತು. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್​ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿತ್ತು, ಇದಾದ ಬಳಿಕ ಶಾರುಖ್​ಗೆ ವೈಪ್ಲಸ್ ಭದ್ರತೆ ಕಲ್ಪಿಸಲಾಗತ್ತು.
ಕಳೆದ ವಾರ, ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ನಂತರ ರಾಜಸ್ಥಾನದ 32 ವರ್ಷದ ವ್ಯಕ್ತಿಯನ್ನು ಕರ್ನಾಟಕದಲ್ಲಿ ಬಂಧಿಸಲಾಯಿತು.

ಮತ್ತಷ್ಟು ಓದಿ: Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ

ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದ ಬೆದರಿಕೆಯನ್ನು ಸ್ವೀಕರಿಸಿದ ಒಂದು ದಿನದ ಬಳಿಕ ದೇವಸ್ಥಾನದಲ್ಲಿ ಸಲ್ಮಾನ್ ಖಾನ್ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತಲೂ ಭೀಕರ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್​ಸ್ಟರ್​ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್‌ಗೆ ಬೆದರಿಕೆಯ ದೂರು ದಾಖಲಾಗಿದೆ.

 

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us