ಛಿಛೋರೆ ಸಿನಿಮಾ ನಟಿ ಅಭಿಲಾಷಾ ಪಾಟಿಲ್​ ಕೊರೊನಾ ವೈರಸ್​ಗೆ ಬಲಿ

Abhilasha Patil Death: ಕೆಲವೇ ದಿನಗಳ ಹಿಂದೆ ಅಭಿಲಾಷಾ ಅವರು ಬನಾರಸ್​​ನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಅಲ್ಲಿಂದ ಹಿಂದಿರುಗಿ ಬಂದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕೊವಿಡ್​ ಪಾಸಿಟಿವ್​ ಎಂಬುದು ತಿಳಿದುಬಂದಿತ್ತು.

ಛಿಛೋರೆ ಸಿನಿಮಾ ನಟಿ ಅಭಿಲಾಷಾ ಪಾಟಿಲ್​ ಕೊರೊನಾ ವೈರಸ್​ಗೆ ಬಲಿ
ಅಭಿಲಾಷಾ ಪಾಟಿಲ್
Follow us
ಮದನ್​ ಕುಮಾರ್​
|

Updated on: May 07, 2021 | 8:17 AM

ಕೊರೊನಾ ವೈರಸ್​ ಮಹಾಮಾರಿಯ ಮರಣ ಮೃದಂಗ ಮುಂದುವರಿದಿದೆ. ಸಿನಿಮಾ ಕೆಲಸಗಳ ಸಲುವಾಗಿ ಸದಾ ಕಾಲ ಹೊರಗಡೆ ಇರುವ ಸೆಲೆಬ್ರಿಟಿಗಳಿಗೆ ಕೊವಿಡ್​ ಕಾಟ ಕೊಡುತ್ತಿದೆ. ಮರಾಠಿ ಚಿತ್ರರಂಗದ ಖ್ಯಾತ ನಟಿ ಅಭಿಲಾಷಾ ಪಾಟಿಲ್ ಅವರು ಕೊರೊನಾದಿಂದ ಮೃತರಾಗಿದ್ದಾರೆ ಪತಿ ಮತ್ತು ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಸುಶಾಂತ್​ ಸಿಂಗ್​ ರಜಪೂತ್​ ನಟನೆಯ ಛಿಛೋರೆ ಚಿತ್ರದಲ್ಲಿ ಅಭಿಲಾಷಾ ಅಭಿನಯಿಸಿದ್ದರು. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅಭಿಲಾಷಾ ಅವರು ಬನಾರಸ್​​ನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಅಲ್ಲಿಂದ ಹಿಂದಿರುಗಿ ಬಂದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕೊವಿಡ್​ ಪಾಸಿಟಿವ್​ ಎಂಬುದು ತಿಳಿದುಬಂತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರು ಮೇ 4ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಿಧನರಾದರು ಎಂದು ಅವರ ಸ್ನೇಹಿತ ಕುಶಾಲ್​ ತಿಳಿಸಿದ್ದಾರೆ.

ಅಭಿಲಾಷಾ ಅವರ ನಿಧನದ ಸುದ್ದಿ ಕೇಳಿ ಚಿತ್ರರಂಗದ ಅನೇಕರಿಗೆ ನೋವುಂಟಾಗಿದೆ. ಅಭಿಲಾಷಾ ನಟಿಸಿದ್ದ ಪರ್ವಾಸ್​ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಶಶಾಂಕ್​ ಉದಪುರಕರ್​ ಅವರು ಕಂಬನಿ ಮಿಡಿದ್ದಾರೆ. ‘ಅಭಿಲಾಷಾ ಅವರು ತುಂಬ ಪರಿಶ್ರಮ ಪಡುವಂತಹ ಕಲಾವಿದೆ ಆಗಿದ್ದರು. ಎನರ್ಜಿಟಿಕ್​ ಆಗಿದ್ದರು. ನೋವು ತೋಡಿಕೊಳ್ಳಲು ಪದಗಳೇ ಸಿಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶಶಾಂಕ್​ ಹೇಳಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ತಮಿಳು ನಟ ಪಾಂಡು ಅವರು ಮೇ 6ರಂದು ನಿಧನರಾದರು. ಕಾಲಿವುಡ್​ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​, ಪೋಸ್ಟರ್​ ಡಿಸೈನರ್​ ಮಸ್ತಾನ್​, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ:

 ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Renuka Sharma Death: ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ