AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿಷಯದಲ್ಲಿ ಪತ್ನಿ ಪಾವನಾಗೆ ಟಾರ್ಚರ್ ಮಾಡ್ತಾರೆ ಚಿಕ್ಕಣ್ಣ; ಓಪನ್ ಆಗಿ ಹೇಳಿದ ನಟ

ಚಿಕ್ಕಣ್ಣ ನಟನೆಯ ಲಕ್ಷ್ಮೀಪುತ್ರ ಸಿನಿಮಾ ನವೆಂಬರ್ 27ರಂದು ಬಿಡುಗಡೆಯಾಗಿದೆ. ಚಿತ್ರದ ಪ್ರಚಾರಕ್ಕಾಗಿ ಅನುಶ್ರೀಗೆ ನೀಡಿದ ಸಂದರ್ಶನದಲ್ಲಿ ಚಿಕ್ಕಣ್ಣ ಪತ್ನಿ ಪಾವನಾ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ. ಪತ್ನಿಗೆ ನನ್ನ ಹಾಡು ಇಷ್ಟವಿಲ್ಲ, ಮದುವೆಗೂ ಮೊದಲೇ ಹಾಡಿದ್ದರೆ ಮದುವೆಯನ್ನೇ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದರು ಎಂದು ಚಿಕ್ಕಣ್ಣ ನಗೆಚಟಾಕಿ ಹಾರಿಸಿದ್ದಾರೆ.

ಈ ವಿಷಯದಲ್ಲಿ ಪತ್ನಿ ಪಾವನಾಗೆ ಟಾರ್ಚರ್ ಮಾಡ್ತಾರೆ ಚಿಕ್ಕಣ್ಣ; ಓಪನ್ ಆಗಿ ಹೇಳಿದ ನಟ
ಚಿಕ್ಕಣ್ಣ
ರಾಜೇಶ್ ದುಗ್ಗುಮನೆ
|

Updated on: Nov 27, 2026 | 2:48 PM

Share

ಮುಖ್ಯಾಂಶಗಳು

  • ಪತ್ನಿ ಪಾವನಾಗೆ ಚಿಕ್ಕಣ್ಣ ಹಾಡೋದು ಇಷ್ಟವಿಲ್ಲವಂತೆ
  • ಬೇಡ ಅಂದ್ರೂ 2-3 ಗಂಟೆ ಟಿವಿಯಲ್ಲಿ ಹಾಡು, ಕಾಮಿಡಿ ಸೀನ್ ತೋರಿಸ್ತಾರಂತೆ
  • ಮದುವೆ ಮೊದಲೇ ಹಾಡಿದ್ದರೆ ಮದುವೆ ಕ್ಯಾನ್ಸಲ್ ಆಗ್ತಿತ್ತು ಎಂದ ನಟ

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅಭಿನಯದ ‘ಲಕ್ಷ್ಮೀಪುತ್ರ’ ಸಿನಿಮಾ ಇಂದು (ನವೆಂಬರ್ 27) ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಗೆ ಬಂದಿದೆ. ಕೆಲ ತಿಂಗಳ ಹಿಂದಷ್ಟೇ ಪಾವನಾ ಅವರೊಂದಿಗೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚಿಕ್ಕಣ್ಣ, ಸದ್ಯ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಆಂಕರ್ ಅನುಶ್ರೀ ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಚಿಕ್ಕಣ್ಣ ತಮ್ಮ ಪತ್ನಿ ಕುರಿತ ಅಚ್ಚರಿಯ ಹಾಗೂ ತಮಾಷೆಯ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ಸಂದರ್ಶನದ ವೇಳೆ ನಟಿ ತಾವು ಹಾಡಿದ್ದ ಹಾಡಿನ ಬಗ್ಗೆ ಚಿಕ್ಕಣ್ಣ ಮಾತನಾಡಿದ್ದಾರೆ. ತಮ್ಮ ಪತ್ನಿ ಪಾವನಾ ಅವರಿಗೆ ತಾವು ಹಾಡುವುದು ಸ್ವಲ್ಪವೂ ಇಷ್ಟವಿಲ್ಲ ಎಂಬ ಸತ್ಯವನ್ನು ಅವರು ನಗುತ್ತಲೇ ರಿವೀಲ್ ಮಾಡಿದ್ದಾರೆ. ಚಿಕ್ಕಣ್ಣ ಅವರ ಈ ಮಾತು ಕೇಳಿ ಸಂದರ್ಶನದಲ್ಲಿ ನಗುವಿನ ಅಲೆ ಎದ್ದಿದೆ.

ಮನೆಯಲ್ಲಿ ಪತ್ನಿಗೆ ಹೇಗೆ ಕಾಟ ಕೊಡುತ್ತೇನೆ ಎಂಬುದನ್ನೂ ಚಿಕ್ಕಣ್ಣ ವಿವರಿಸಿದ್ದಾರೆ. ‘ನಾನು ಹಾಡಿರುವ ಹಾಡನ್ನು ಟಿವಿಯಲ್ಲಿ ಹಾಕಿ ನೋಡು ಎನ್ನುತ್ತೇನೆ. ನನ್ನ ಕಾಮಿಡಿ ಸೀನ್‌ಗಳನ್ನು ನೋಡು ಎಂದು ಒತ್ತಾಯಿಸುತ್ತೇನೆ. ಪತ್ನಿ ಬೇಡ ಎಂದರೂ ಬಿಡದೆ ಬರೋಬ್ಬರಿ 2-3 ಗಂಟೆಗಳ ಕಾಲ ಅವಳಿಗೆ ನಾನು ನಟಿಸಿದ ಕಾಮಿಡಿ ದೃಶ್ಯ ತೋರಿಸುತ್ತೇನೆ’ ಎಂದು ಚಿಕ್ಕಣ್ಣ ತಮಾಷೆಯಾಗಿ ಹೇಳಿಕೊಂಡಿದ್ದಾರೆ.

ಈ ವಿಚಾರವಾಗಿ ತಮ್ಮದೇ ಶೈಲಿಯಲ್ಲಿ ಕಾಮಿಡಿ ಪಂಚ್ ಕೊಟ್ಟಿರುವ ಚಿಕ್ಕಣ್ಣ, ‘ಈಗ ನನಗೆ ಹಾಗೆ ಮಾಡಬಾರದಿತ್ತು ಎಂದು ಅನಿಸುತ್ತಿದೆ. ತಪ್ಪು ಮಾಡಿದೆ ಅನಿಸುತ್ತಿದೆ. ಒಂದು ವೇಳೆ ಮದುವೆಗೂ ಮೊದಲೇ ನಾನು ಹಾಡಿದ್ದನ್ನು ಪಾವನಾ ಕೇಳಿದ್ದರೆ, ಖಂಡಿತವಾಗಿಯೂ ಮದುವೆಯನ್ನೇ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದರು’ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ: ‘ಲಕ್ಷ್ಮೀಪುತ್ರ’ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸೂಪರ್‌ಸ್ಟಾರ್ ಎಂದು ಹ್ಯಾಟ್ರಿಕ್ ಹೀರೋ

ಚಿಕ್ಕಣ್ಣ ಅವರ ಈ ಮುಗ್ಧ ಮತ್ತು ಹಾಸ್ಯಭರಿತ ಮಾತುಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇಂದಿನಿಂದ ‘ಲಕ್ಷ್ಮೀಪುತ್ರ’ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ನವವಿವಾಹಿತ ಚಿಕ್ಕಣ್ಣ ಅವರಿಗೆ ಪ್ರೇಕ್ಷಕರಿಂದ ಯಾವ ರೀತಿಯ ರೆಸ್ಪಾನ್ಸ್ ಸಿಗಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ