ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ 'ಜನ ನಾಯಗನ್' ಸಿನಿಮಾ ಲೀಕ್ ಆಗಿದ್ದು, ಕೆವಿಎನ್ ಪ್ರೊಡಕ್ಷನ್ಸ್ ತೀವ್ರ ತೊಂದರೆಯಲ್ಲಿದೆ. ನಟ ಚಿರಂಜೀವಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಚಿತ್ರರಂಗದ ಭವಿಷ್ಯಕ್ಕೆ ಪೈರಸಿ ಮಾರಕ ಎಂದು ಹೇಳಿರುವ ಅವರು, ಕೆವಿಎನ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಸಿನಿಮಾ ಉಳಿಸಲು ಪೈರಸಿ ನಾಶಪಡಿಸುವಂತೆ ಕರೆ ನೀಡಿದ್ದಾರೆ.

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ
ಜನ ನಾಯಗನ್

Updated on: Apr 10, 2026 | 4:34 PM

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು ಆತಂಕ ಹೊರಹಾಕಿದ್ದಾರೆ. ಅಲ್ಲದೆ, ಕೆವಿಎನ್​​ಗೆ ಬೆಂಬಲ ಕೊಟ್ಟಿದ್ದಾರೆ.

ಚಿರಂಜೀವಿ ಅವರು ಚಿತ್ರರಂಗದ ಆಗು ಹೋಗುಗಳ ಬಗ್ಗೆ ಮಾತನಾಡುತ್ತಾರೆ.ಅವರು ಸದಾ ಚಿತ್ರರಂಗದ ಪರವಾಗಿ ನಿಲ್ಲುತ್ತಾ ಬಂದಿದ್ದಾರೆ. ಈಗ ಅವರು ಜನ ನಾಯಗನ್ ಸಿನಿಮಾ ಪರವಾಗಿ ಮಾತನಾಡಿದ್ದಾರೆ. ಈ ರೀತಿಯ ಅನ್ಯಾಯ ಯಾರಿಗೂ ಆಗಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ 

‘ಜನನಾಯಗನ್ ಸೋರಿಕೆ ಆಗಿದ್ದು ತುಂಬಾನೇ ಕಳವಳಕಾರಿ ವಿಷಯ. ಸಿನಿಮಾ ಎಂಬುದು ನಂಬಿಕೆ, ಪ್ರಯತ್ನ ಮತ್ತು ಅನೇಕರ ಕನಸಿನಿಂದ ಮಾಡಲ್ಪಟ್ಟಿದೆ. ಇಂತಹ ಘಟನೆಗಳು ಉದ್ಯಮದಲ್ಲಿರುವ ನಮ್ಮೆಲ್ಲರ ಮೇಲೆ ಪರಿಣಾಮ ಬೀರುತ್ತವೆ. ಸಿನಿಮಾಗೆ ಆದ ಹಾನಿಯನ್ನು ತಡೆಗಟ್ಟುವಲ್ಲಿ ಮತ್ತು ಅಪರಾಧಿಗಳನ್ನು ಶಿಕ್ಷಿಸುವಲ್ಲಿ ನಾವು ಕೆವಿಎನ್ ಪ್ರೊಡಕ್ಷನ್ಸ್ ಜೊತೆಗಿದ್ದೇವೆ. ಸಿನಿಮಾವನ್ನು ಗೌರವಿಸಲು ಮತ್ತು ರಕ್ಷಿಸಲು ನಾವೆಲ್ಲರೂ ನಮ್ಮ ಬೆಂಬಲವನ್ನು ನೀಡೋಣ. ಪೈರಸಿಯನ್ನು ನಾಶ ಮಾಡಿ, ಸಿನಿಮಾ ಉಳಿಸಿ’ ಎಂದು ಕರೆ ಕೊಟ್ಟಿದ್ದಾರೆ.

ಸಿನಿಮಾ ಲೀಕ್ ಪ್ರಕರಣ ಇಡೀ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ವಿಚಾರವಾಗಿ ಚಿತ್ರತಂಡ ಕಾನೂನು ಹೋರಾಟಕ್ಕೆ ಮುಂದಾಗುತ್ತಿದೆ. ಸಿನಿಮಾದ ದೃಶ್ಯಗಳನ್ನ ಶೇರ್ ಮತ್ತು ಡೌನ್ಲೋಡ್ ಮಾಡಿದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us