AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ

‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ಗಳಿಸಿ ಭಾರಿ ಯಶಸ್ಸು ಗಳಿಸಿದೆ. ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಮತ್ತು ನಟಿ ಸಮಂತಾ ನಟನೆ, ಮಹಿಳಾ ಪ್ರಧಾನ ಕಥೆಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ, ಸಮಂತಾ ಜೀವನದ ಹೊಸ ಅಧ್ಯಾಯಕ್ಕೆ ಶುಭಕೋರಿ ಅವರ ಗರ್ಭಿಣಿ ಸುದ್ದಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಈ ಮೂಲಕ ಸಿನಿಮಾ ಯಶಸ್ಸಿನ ಜೊತೆ ಸಮಂತಾ ಖುಷಿ ಹೆಚ್ಚಿದೆ.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ
ಚಿರಂಜೀವಿ ಜೊತೆ ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jun 23, 2026 | 2:49 PM

Share

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ ಆಸಕ್ತಿದಾಯಕವಾಗಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಅವರು ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿ ಆಕ್ಷನ್ ಮತ್ತು ಎಮೋಷನ್ಸ್‌ಗಳನ್ನು ಅದ್ಭುತವಾಗಿ ಬೆರೆಸಿ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಈ ಚಿತ್ರವನ್ನು ಅತ್ಯಂತ ಮನರಂಜನಾತ್ಮಕವಾಗಿ ಮಾಡಿದ್ದಾರೆ. ಸೀರೆಯುಟ್ಟು ನಟಿ ಸಮಂತಾ ಮಾಡಿರುವ ಆಕ್ಷನ್ ದೃಶ್ಯಗಳು ಮತ್ತು ಅವರ ನಟನೆ ಈ ಸಿನಿಮಾದಲ್ಲಿ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯುತ್ತವೆ’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

‘ತೆಲುಗು ಚಿತ್ರರಂಗಕ್ಕೆ ಇಂತಹ ವೈವಿಧ್ಯಮಯ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳ ಅಗತ್ಯ ತುಂಬಾ ಇದೆ. ಈ ದೊಡ್ಡ ಯಶಸ್ಸಿಗಾಗಿ ಸಮಂತಾ, ನಂದಿನಿ ರೆಡ್ಡಿ, ರಾಜ್ ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಸಮಂತಾ ಶೀಘ್ರವೇ ತಾಯಿ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಈಗ ಚಿರಂಜೀವಿ ಅವರು ವಿಶೇಷವಾಗಿ ಈ ವಿಷಯವನ್ನು ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ‘ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಹೆಜ್ಜೆ ಇಡುತ್ತಿರುವ ಸಮಂತಾ ಮತ್ತು ರಾಜ್ ದಂಪತಿಗೆ ನನ್ನ ವಿಶೇಷ ಶುಭಾಶಯಗಳು’ ಎಂದು ಹೇಳಿದ್ದಾರೆ. ಈ ಮೂಲಕ ಸಮಂತಾ ತಾಯಿ ಆಗುತ್ತಿರುವ ವಿಷಯ ಖಚಿತಪಡಿಸದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Tue, 23 June 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More