ಡ್ಯಾನ್ಸ್ ವಿಚಾರದಲ್ಲಿ ಗಿನ್ನಿಸ್​ ದಾಖಲೆ ಬರೆದ ಮೆಗಾ ಸ್ಟಾರ್​ ಚಿರಂಜೀವಿ

ಟಾಲಿವುಡ್​ ನಟ ಚಿರಂಜೀವಿ ಅವರ ಮುಡಿಗೆ ಗಿನ್ನಿಸ್​ ವಿಶ್ವ ದಾಖಲೆಯ ಗರಿ ಸೇರ್ಪಡೆ ಆಗಿದೆ. ವಿಶೇಷ ಕಾರ್ಯಕ್ರಮ ಆಯೋಜಿಸಿ ಅವರಿಗೆ ಪ್ರಮಾಣಪತ್ರ ನೀಡಲಾಗಿದೆ. ಅದಕ್ಕೆ ಆಮಿರ್ ಖಾನ್​ ಅವರು ಮುಖ್ಯ ಅತಿಥಿಯಾಗಿ ಬಂದಿದ್ದರು. ಸಿನಿಮಾದಲ್ಲಿ ಡ್ಯಾನ್ಸ್​ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ಮಾಡಿದ ಚಿರಂಜೀವಿ ಅವರಿಗೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಡ್ಯಾನ್ಸ್ ವಿಚಾರದಲ್ಲಿ ಗಿನ್ನಿಸ್​ ದಾಖಲೆ ಬರೆದ ಮೆಗಾ ಸ್ಟಾರ್​ ಚಿರಂಜೀವಿ
ಚಿರಂಜೀವಿ
Follow us
ಮದನ್​ ಕುಮಾರ್​
|

Updated on:Sep 22, 2024 | 8:54 PM

ನಟ ಮೆಗಾ ಸ್ಟಾರ್​ ಚಿರಂಜೀವಿ ಅವರಿಗೆ 2024ರ ವರ್ಷ ತುಂಬ ಸ್ಪೆಷಲ್​. ಯಾಕೆಂದರೆ ಈ ವರ್ಷ ಅವರಿಗೆ ಅನೇಕ ಪುರಸ್ಕಾರಗಳು ಸಿಗುತ್ತಿವೆ. ಅವರು ‘ಪದ್ಮ ವಿಭೂಷಣ’ ಪ್ರಶಸ್ತಿ ಪಡೆದಿದ್ದು ಅಭಿಮಾನಿಗಳಿಗೆ ಹೆಮ್ಮೆಯ ವಿಷಯ. ಈಗ ಚಿರಂಜೀವಿ ಅವರು ಗಿನ್ನೆಸ್​ ದಾಖಲೆ ಬರೆದಿದ್ದಾರೆ. ಇಂದು (ಸೆಪ್ಟೆಂಬರ್​ 22) ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್​ ಪ್ರೊಫೈಲಿಕ್ ಸ್ಟಾರ್​’ ಎಂದು ಪ್ರಮಾಣಪತ್ರ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಬಾಲಿವುಡ್​ ನಟ ಆಮಿರ್ ಖಾನ್​ ಕೂಡ ಹಾಜರಿದ್ದರು.

ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಈವರೆಗಿನ ತಮ್ಮ ವೃತ್ತಿ ಜೀವನದಲ್ಲಿ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್​ ಮಾಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್​ ಹಾಕಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ನಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ: ಹಿಮ್ಮುಖವಾಗಿ ಇನ್ಲೈನ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್​ ದಾಖಲೆ ನಿರ್ಮಿಸಿದ ಕರ್ನಾಟಕ ಕ್ಲಬ್ ಸದಸ್ಯ

ಹೈದರಾಬಾದ್​ನಲ್ಲಿ ಚಿರಂಜೀವಿ ಅವರಿಗೆ ಗಿನ್ನಿಸ್​ ರೆಕಾರ್ಡ್​ನ ಪ್ರಮಾಣಪತ್ರ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ದತ್ತ, ಬಿ. ಗೋಪಾಲ್, ಅಲ್ಲು ಅರವಿಂದ್​, ಸುರೇಶ್​ ಬಾಬು, ರಾಘವೇಂದ್ರ ರಾವ್, ಬಾಬಿ, ಗುಣಶೇಖರ್​, ವಸಿಷ್ಠ, ಸುಷ್ಮಿತಾ, ವರುಣ್​ ತೇಜ್​, ವೈಷ್ಣವ್​ ತೇಜ್​ ಮುಂತಾದವರು ಆಗಮಿಸಿದ್ದರು. ಎಲ್ಲರ ಸಮ್ಮುಖದಲ್ಲಿ ಚಿರಂಜೀವಿ ಅವರು ಈ ಪ್ರಮಾಣಪತ್ರ ಪಡೆದಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಆಮಿರ್​ ಖಾನ್​ ಅವರು ಮಾತನಾಡಿ, ‘ಚಿರಂಜೀವಿ ನನಗೆ ಅಣ್ಣನ ಸಮಾನ. ನಾನು ಅವರ ಅಭಿಮಾನಿ ಕೂಡ. ಅವರಿಗೆ ಇಂದು ಈ ಗೌರವ ಸಿಕ್ಕಿದ್ದಕ್ಕೆ ನನಗೆ ಖುಷಿಯಾಗಿದೆ’ ಎಂದರು. ತಮ್ಮನ್ನು ಓರ್ವ ಡ್ಯಾನಿಂಗ್​ ಹೀರೋ ಎಂದು ಗುರುತಿಸಿದ್ದಕ್ಕೆ ಚಿರಂಜೀವಿ ಅವರಿಗೆ ಸಂತಸ ಆಗಿದೆ. ಅಂದಹಾಗೆ, ಈ ದಿನ (ಸೆ.22) ಚಿರಂಜೀವಿ ಪಾಲಿಗೆ ವಿಶೇಷ ದಿನಾಂಕ. ಯಾಕೆಂದರೆ, ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಕೂಡ ಇದೇ (1978ರ ಸೆಪ್ಟೆಂಬರ್​ 22) ದಿನಾಂಕದಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:51 pm, Sun, 22 September 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ