AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi: ಚಿರಂಜೀವಿ ತೊಟ್ಟ ಈ ವಾಚ್​​ನಲ್ಲಿ ಎರಡು ಐಷಾರಾಮಿ ಕಾರು ಖರೀದಿಸಬಹುದು

ಮೆಗಾಸ್ಟಾರ್ ಚಿರಂಜೀವಿ ಕೈಯಲ್ಲಿ ಹಾಕಿದ ವಾಚ್​ ಅನೇಕ ಜನರನ್ನು ಆಕರ್ಷಿಸಿದೆ. ಆ ವಾಚ್‌ನ ವಿವರಗಳನ್ನು ತಿಳಿಯಲು ನೆಟ್ಟಿಗರು ಹುಡುಕಾಟ ಆರಂಭಿಸಿದ್ದರು. ಅವರಿಗೆ ಈ ವಾಚ್​​ನ ಬೆಲೆ ಎಷ್ಟು ಎಂಬುದು ಗೊತ್ತಾಗಿದೆ.

Chiranjeevi: ಚಿರಂಜೀವಿ ತೊಟ್ಟ ಈ ವಾಚ್​​ನಲ್ಲಿ ಎರಡು ಐಷಾರಾಮಿ ಕಾರು ಖರೀದಿಸಬಹುದು
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Aug 04, 2023 | 7:34 AM

Share

ಸೆಲೆಬ್ರಿಟಿಗಳು ಬಹುತೇಕ ಸಂದರ್ಭಗಳಲ್ಲಿ ದುಬಾರಿ ಬೆಲೆಯ ವಸ್ತುಗಳನ್ನು ಧರಿಸಿ ತೆರಳುತ್ತಾರೆ. ಅವರು ತೊಡುವ ಬ್ರ್ಯಾಂಡೆಡ್ ವಸ್ತುಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುತ್ತದೆ. ಕೆಲವೊಮ್ಮೆ ಇದರ ಮೌಲ್ಯ ಕೋಟಿ ರೂಪಾಯಿ ಮೀರುವುದೂ ಉಂಟು. ಅವರು ಹಾಕಿದ ದುಬಾರಿ ವಸ್ತುವಿನ ಬೆಲೆಯನ್ನು ಅಭಿಮಾನಿಗಳು ಹುಡುಕಿ ತೆಗೆಯುತ್ತಾರೆ. ಈಗ ಚಿರಂಜೀವಿ (Chiranjeevi) ಅವರು ತೊಟ್ಟ ವಾಚ್ ಎಲ್ಲರ ಗಮನ ಸೆಳೆದಿದೆ. ಈ ವಾಚ್​​ ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಈ ವಾಚ್​ನಲ್ಲಿ ಎರಡು ಐಷಾರಾಮಿ ಕಾರು ಖರೀದಿ ಮಾಡಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ನಿರ್ದೇಶಕ ಸಾಯಿ ರಾಜೇಶ್ ನಿರ್ದೇಶನದ ‘ಬೇಬಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸುನಾಮಿ ಎಬ್ಬಿಸುತ್ತಿದೆ. ಈ ಸಿನಿಮಾ ಎಲ್ಲರ ನಿರೀಕ್ಷೆಗೂ ಮೀರಿ ಭರ್ಜರಿ ಯಶಸ್ಸು ಕಂಡಿದೆ. ಆನಂದ್ ದೇವರಕೊಂಡ, ವೈಷ್ಣವಿ ಅಭಿನಯದ ಈ ಚಿತ್ರ ಸೂಪರ್ ಹಿಟ್ ಆಯಿತು. ಸಿನಿಮಾ ತಾರೆಯರೂ ಈ ಚಿತ್ರವನ್ನು ಕೊಂಡಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಸಕ್ಸಸ್ ಸೆಲೆಬ್ರೇಷನ್ ಹೈದರಾಬಾದ್​​ನಲ್ಲಿ ನಡೆಯಿತು. ಸಮಾರಂಭಕ್ಕೆ ಮೆಗಾಸ್ಟಾರ್ ಚಿರಂಜೀವಿ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡವನ್ನು ಅಭಿನಂದಿಸಿದರು. ಈ ವೇಳೆ ಅವರು ಕೈಯಲ್ಲಿ ಹಾಕಿದ ವಾಚ್​ ಅನೇಕ ಜನರನ್ನು ಆಕರ್ಷಿಸಿದೆ. ಆ ವಾಚ್‌ನ ವಿವರಗಳನ್ನು ತಿಳಿಯಲು ನೆಟ್ಟಿಗರು ಹುಡುಕಾಟ ಆರಂಭಿಸಿದ್ದರು. ಅವರಿಗೆ ಈ ವಾಚ್​​ನ ಬೆಲೆ ಎಷ್ಟು ಎಂಬುದು ಗೊತ್ತಾಗಿದೆ.

ವರದಿಗಳ ಪ್ರಕಾರ, ಚಿರಂಜೀವಿ ತೊಟ್ಟಿದ್ದು ರೋಲೆಕ್ಸ್ ಕಾಸ್ಮೊಗ್ರಾಫ್ ಡೇಟೋನಾ ವಾಚ್. ಇದರ ಬೆಲೆ 2,30,000 ಡಾಲರ್ ಆಗಿದೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ 1.90 ಕೋಟಿ ರೂಪಾಯಿ ಆಗುತ್ತದೆ. ಈ ವಾಚ್​ ನೋಡಲು ತುಂಬಾ ಆಕರ್ಷಕವಾಗಿದೆ. ಈ ವಿಚಾರ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿರಂಜೀವಿ ವಿರುದ್ಧ ಸುಳ್ಳು ಆರೋಪ: ನಟ ರಾಜಶೇಖರ್, ಪತ್ನಿ ಜೀವಿತಾಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಮೆಗಾಸ್ಟಾರ್ ಚಿರಂಜೀವಿ ಸದ್ಯ ‘ಭೋಲಾ ಶಂಕರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಮಿಲ್ಕಿ ಬ್ಯೂಟಿ ತಮನ್ನಾ ನಾಯಕಿಯಾಗಿ ನಟಿಸಿದ್ದರೆ, ಕೀರ್ತಿ ಸುರೇಶ್ ಚಿರಂಜೀವಿ ತಂಗಿಯಾಗಿ ಅಭಿನಯಿಸಿದ್ದಾರೆ. ಆಗಸ್ಟ್ 11ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ