Chiyaan 61: ವಿಜಯ್​, ಅಲ್ಲು ಅರ್ಜುನ್​, ರಣಬೀರ್​ ಆಯ್ತು.. ಈಗ ವಿಕ್ರಮ್​ ಜತೆ ಸಿನಿಮಾ? ಲಕ್ಕಿ ರಶ್ಮಿಕಾ

Chiyaan Vikram | Rashmika Mandanna: ಚಿಯಾನ್​ ವಿಕ್ರಮ್​ ನಟಿಸಲಿರುವ 61ನೇ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ.

Chiyaan 61: ವಿಜಯ್​, ಅಲ್ಲು ಅರ್ಜುನ್​, ರಣಬೀರ್​ ಆಯ್ತು.. ಈಗ ವಿಕ್ರಮ್​ ಜತೆ ಸಿನಿಮಾ? ಲಕ್ಕಿ ರಶ್ಮಿಕಾ
ಚಿಯಾನ್ ವಿಕ್ರಮ್, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Jul 19, 2022 | 1:32 PM

ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದಿನದಿಂದ ದಿನಕ್ಕೆ ಚಿತ್ರರಂಗದಲ್ಲಿ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ‘ಕಿರಿಕ್​ ಪಾರ್ಟಿ’ ಚಿತ್ರದಿಂದ ಆರಂಭವಾದ ಅವರ ಸಿನಿಪಯಣ ಈಗ ಬಾಲಿವುಡ್​ವರೆಗೂ ಸಾಗಿ ಬಂದಿದೆ. ಅಲ್ಲಿನ ಟಾಪ್​ ಹೀರೋಗಳಿಗೆ ಅವರು ನಾಯಕಿ ಆಗುತ್ತಿದ್ದಾರೆ. ಒಂದಕ್ಕಿಂತ ಒಂದು ಸೂಪರ್​ ಸಿನಿಮಾಗಳು (Rashmika Mandanna Movies) ಅವರಿಗೆ ಸಿಗುತ್ತಿವೆ. ವಿಜಯ್​ ದೇವರಕೊಂಡ, ‘ದಳಪತಿ’ ವಿಜಯ್​, ಮಹೇಶ್​ ಬಾಬು, ರಣಬೀರ್​ ಕಪೂರ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇಷ್ಟಕ್ಕೇ ನಿಂತಿಲ್ಲ ಅವರ ನಾಗಾಲೋಟ. ಈಗ ಅವರು ‘ಚಿಯಾನ್’​ ವಿಕ್ರಮ್ (Chiyaan Vikram)​ ಸಿನಿಮಾಗೂ ನಾಯಕಿ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ.

ಚಿಯಾನ್​ ವಿಕ್ರಮ್​ ನಟಿಸಲಿರುವ 61ನೇ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ನಿರ್ಮಾಪಕರು ರಶ್ಮಿಕಾ ಜೊತೆ ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರಂತೆ. ಡೇಟ್ಸ್​ ಹೊಂದಾಣಿಕೆ ಮಾಡಿಕೊಳ್ಳುವುದೊಂದೇ ಬಾಕಿ ಉಳಿದಿದೆ. ಅದಾದ ಬಳಿಕ ಚಿತ್ರತಂಡದಿಂದ ಅಧಿಕೃತ ಅನೌನ್ಸ್​ ಆಗಲಿದೆ ಎಂಬ ಗಾಸಿಪ್​ ಹರಡಿದೆ. ಸದ್ಯಕ್ಕಂತೂ ಈ ವಿಚಾರದ ಬಗ್ಗೆ ರಶ್ಮಿಕಾ ಮಂದಣ್ಣ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಈ ಸಿನಿಮಾಗೆ ನಿರ್ದೇಶಕ ಪಾ. ರಂಜಿತ್​ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಕೆಲ ದಿನಗಳ ಹಿಂದೆ ಮುಹೂರ್ತ ಮಾಡಲಾಗಿದೆ. ಈ ಹಿಂದೆ ರಜನಿಕಾಂತ್​ ನಟನೆಯ ‘ಕಬಾಲಿ’, ‘ಕಾಲಾ’ ಚಿತ್ರಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಪಾ. ರಂಜಿತ್​ ಅವರಿಗೆ ಇದೆ. ಅಂಥ ನಿರ್ದೇಶಕನ ಜೊತೆ ಕೆಲಸ ಮಾಡುವ ಅವಕಾಶವನ್ನು ರಶ್ಮಿಕಾ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಸ್ಟುಡಿಯೋ ಗ್ರೀನ್​ ಮತ್ತು ನೀಲಂ ಪ್ರೊಡಕ್ಷನ್ಸ್​ ಜಂಟಿಯಾಗಿ ‘ಚಿಯಾನ್​ 61’ ಸಿನಿಮಾವನ್ನು ನಿರ್ಮಾಣ ಮಾಡಲಿವೆ. ಜಿ.ವಿ. ಪ್ರಕಾಶ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸೂಪರ್​ ಹಿಟ್​ ಆದ ಬಳಿಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚಿತು. ಅನೇಕರ ಪಾಲಿಗೆ ಅವರು ಲಕ್ಕಿ ಹೀರೋಯಿನ್​ ಆಗಿದ್ದಾರೆ. ಹಾಗಾಗಿ ದೊಡ್ಡ ದೊಡ್ಡ ಸಿನಿಮಾಗಳ ಅವಕಾಶಗಳು ಅವರಿಗೆ ಸಿಗುತ್ತಿವೆ.

Published On - 1:32 pm, Tue, 19 July 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ