‘ವಿರಾಟಪುರ ವಿರಾಗಿ’ ಚಿತ್ರದ ಧ್ವನಿ ಸುರುಳಿ, ಟ್ರೈಲರ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ ಮತ್ತು ಟ್ರೈಲರ್​ನ್ನು ಸಿಎಂ ಬೊಮ್ಮಾಯಿ ಬಿಡುಗಡೆ ಮಾಡಿದರು.

'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ, ಟ್ರೈಲರ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ವಿರಾಟಪುರ ವಿರಾಗಿ ಚಿತ್ರದ ಪೋಸ್ಟರ್​, ಸಿಎಂ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 20, 2022 | 5:34 PM

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿ (Hanagal Sri Kumara Shivayogi) ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ’ (Viratapura Viragi) ಚಿತ್ರದ ಧ್ವನಿ ಸುರುಳಿ ಮತ್ತು ಟ್ರೈಲರ್​ನ್ನು ಇಂದು (ಡಿ. 20) ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ ಸಿಎಂ ಬೊಮ್ಮಾಯಿ ಹಾನಗಲ್ ಶ್ರೀ ಕುಮಾರಸ್ವಾಮಿ ಅವರ ಜೀವನಾದರ್ಶಗಳನ್ನು ಸಾರುವ ಚಲನಚಿತ್ರ ಈಗಿನ ಸಮಾಜ ಹಾಗೂ ಯುವಪೀಳಿಗೆಗೆ ಪ್ರೇರಣೆಯಾಗಲಿ ಎಂದು ಹೇಳಿದರು. ಶ್ರೀ ಕುಮಾರ್ ಶಿವಯೋಗಿಗಳು ಮಹಾನ್ ಸಾಧಕರು. ಹಾನಗಲ್ ಕುಮಾರಸ್ವಾಮಿಗಳು 12 ನೇ ಶತಮಾನದ ಸಾಮಾಜಿಕ ಕ್ರಾಂತಿ ತೆರೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಹಾನಗಲ್ ಕುಮಾರಸ್ವಾಮಿಯವರು ಹೊಸ ರೂಪ ಕೊಟ್ಟರು. ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿಹಿಡಿದ ಮಹಾನ್ ಯೋಗಿ. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಇಂದಿಗೂ ಕೂಡ ಎಲ್ಲ ಅಧ್ಯಾತ್ಮಿಕ ಚಿಂತನೆಯನ್ನು ಮಾಡುವ ಸಂಸ್ಥೆಯಾಗಿದೆ. ವ್ಯವಸ್ಥಿತವಾದ ಇಂತಹ ಸಂಸ್ಥೆ ಬೇರೆಲ್ಲೂ ಕಾಣಲು ಸಿಗುವುದಿಲ್ಲ. ನಮ್ಮ ಪರಂಪರೆ, ಸಂಸ್ಕೃತಿ, ಸಂಸ್ಕಾರ ಗಳನ್ನು ಶಿವಯೋಗಿ ಮಂದಿರದ ಮೂಲಕ ಕಾಪಾಡಿಕೊಂಡು ಬರಲಾಗಿದೆ. ಇಂತಹ ಸಂಸ್ಥೆಯನ್ನು ಕಟ್ಟಿದ ಹಾನಗಲ್ ಕುಮಾರಸ್ವಾಮಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ: ಇನ್ಮುಂದೆ ರಾಜಣ್ಣ- ರೂಪೇಶ್ ಬೆಸ್ಟ್ ಫ್ರೆಂಡ್ಸ್ ಅಲ್ಲ; ಒಂದು ಮಾತಿನಿಂದ ಮುರಿದುಬಿತ್ತು ಫ್ರೆಂಡ್​ಶಿಪ್

ಚಲನಶೀಲ ಸಮಾಜ:

ಶಿವಯೋಗಿ ಮಂದಿರ ಜೀರ್ಣೊದ್ದಾರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಣ ನೀಡಿ ಜೀರ್ಣೊದ್ದಾರ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮಾಜ ಪ್ರಗತಿಪರವಾಗಿದ್ದು, ಈ ಸಮಾಜ ಕಾಲಕ್ಕೆ ತಕ್ಕಂತೆ ಎಲ್ಲವನ್ನು ಒಪ್ಪಿಕೊಳ್ಳುವ ಚಲನಶೀಲ ಸಮಾಜವಾಗಿದೆ. ಈ ಸಮಾಜ ಚಲನಶೀಲವಾಗಿರುವುದರಿಂದ ಈ ಸಮಾಜಕ್ಕೆ ಯಾವುದೇ ಧಕ್ಕೆ ಇಲ್ಲ. ಅವರು ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಮಾಡಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು, ಪ್ರಥಮ ಅಧ್ಯಕ್ಷರಾಗಿದ್ದರು‌ ಅವರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ಅದ್ಯತೆ ನೀಡಿದರು‌.

ಇದನ್ನೂ ಓದಿ: ಮೇಘನಾ ರಾಜ್ ಗೆಳತಿ, ನಟಿ ನಜ್ರಿಯಾ ನಜಿಮ್​​ಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ಕ್ಯೂಟ್ ಫೋಟೋ

ತ್ರಿವಿಧ ದಾಸೋಹದಲ್ಲಿ ತೊಡಗಿರುವ ಮಠ:

ಕರ್ನಾಟಕದಲ್ಲಿ ಶಿಕ್ಷಣ ಉತ್ತಮಗೊಳ್ಳುವಲ್ಲಿ ಮಠಮಾನ್ಯಗಳು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಮಾಡಿದರು. ಬೆಳಗಾವಿಯ ನಿಪ್ಪಾಣಿಹಿಂದ ಕೊಳ್ಳೆಗಾಲದವರೆಗೆ ಬೀದರ್ ನಿಂದ ಕೊಳ್ಳೆಗಾಲದವರೆಗು ಎಲ್ಲ ಗ್ರಾಮಗಳಲ್ಲಿ ವೀರಶೈವ ಲಿಂಗಾಯತ ಮಠಗಳು ಅಧ್ಯಾತ್ಮದ ಜೊತೆಗೆ ತ್ರಿವಿಧ ದಾಸೋಹದಲ್ಲಿ ತೊಡಗಿಕೊಂಡಿವೆ ವಿಜಯ ಸಂಕೇಶ್ವರ್ ಅವರ ಜೀವನ ಚರಿತ್ರೆ ಚಿತ್ರ ಬಿಡುಗಡೆಯಾಗಿದೆ.

ಯಶಸ್ಸು ನಮಗಾಗಿ ಅಲ್ಲ ಸಮಾಜಕ್ಕಾಗಿ ಪ್ರೇರಣೆಯಾಗಬೇಕೆಂದು ವಿಜಯ ಸಂಕೇಶ್ವರರು ತಿಳಿಸಿದ್ದನ್ನು ಸ್ಮರಿಸಿದರು. ಈ ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೊರೆ, ಮಾಜಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಹಾಗೂ ಸ್ವಾಮೀಜಿಗಳು ಹಾಜರಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್