AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್

ನಟಿ-ನಿರೂಪಕಿ ರಮ್ಯಾ ಸುಬ್ರಮಣಿಯನ್ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಿ, ಅವರ ವಿನಮ್ರ ಸ್ವಭಾವ ಮತ್ತು ಬದಲಾಗದ ವ್ಯಕ್ತಿತ್ವವನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ರಮ್ಯಾ ಅವರು ಸಿಎಂ ವಿಜಯ್‌ಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ, ಮುಖ್ಯಮಂತ್ರಿಯಾಗಿ 40 ದಿನ ಯಶಸ್ವಿಯಾಗಿ ಪೂರೈಸಿದ್ದಕ್ಕೆ ಅಭಿನಂದಿಸಿದ್ದಾರೆ.

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್
ವಿಜಯ್-ರಮ್ಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 26, 2026 | 8:48 AM

Share

ಮುಖ್ಯಾಂಶಗಳು

  • ರಮ್ಯಾ ಸುಬ್ರಮಣಿಯನ್ ಮತ್ತು ಸಿಎಂ ವಿಜಯ್ ಭೇಟಿ
  • ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಬದಲಾಗದ ವ್ಯಕ್ತಿತ್ವ ಮತ್ತು ಸರಳತೆ ಹೊಗಳಿದ ರಮ್ಯಾ
  • ನಟಿ ರಮ್ಯಾ ಕಡೆಯಿಂದ ಸಿಎಂ ವಿಜಯ್‌ಗೆ ಹುಟ್ಟುಹಬ್ಬದ ಶುಭಾಶಯ

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು (Vijay) ನಟಿ ಮತ್ತು ಖ್ಯಾತ ವಿಜೆ ರಮ್ಯಾ ಸುಬ್ರಮಣಿಯನ್ ಭೇಟಿಯಾಗಿದ್ದಾರೆ. ಸಿಎಂ ಭೇಟಿಯಾದ ಫೋಟೋವನ್ನು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಅವರಿಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ ದೊಡ್ಡ ಪೋಸ್ಟ್ ಒಂದನ್ನು ಬರೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾದ ಮೇಲೂ ವಿಜಯ್ ಅವರ ಗುಣ ಬದಲಾಗಿಲ್ಲ ಎಂದು ರಮ್ಯಾ ಹೊಗಳಿದ್ದಾರೆ. ಸದ್ಯ ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ.

ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದೇನು?

‘ಆರು ತಿಂಗಳ ಹಿಂದೆ ಮಲೇಷ್ಯಾದಲ್ಲಿ ನಡೆದ ಅವರ ಕೊನೆಯ ಸಿನಿಮಾದ ಕಾರ್ಯಕ್ರಮವನ್ನು ನಾನು ನಿರೂಪಣೆ ಮಾಡಿದ್ದೆ. ನಿನ್ನೆ ಸಂಜೆ ನಾನು ನಮ್ಮ ಮುಖ್ಯಮಂತ್ರಿಯವರನ್ನು ಭೇಟಿಯಾದೆ. ಕಾಲ ಬದಲಾಗಿದೆ. ಅವರ ಬಿರುದುಗಳು ಬದಲಾಗಿವೆ. ಇತಿಹಾಸವೇ ಬದಲಾಗಿದೆ. ಆದರೆ ವಿಜಯ್ ಮಾತ್ರ ಬದಲಾಗಿಲ್ಲ. ಬಹುಶಃ ಇದೇ ಅವರ ದೊಡ್ಡ ಶಕ್ತಿ’ ಎಂದು ರಮ್ಯಾ ಬರೆದಿದ್ದಾರೆ.

‘ಕಳೆದ ಎರಡು ದಶಕಗಳಿಂದ ನಾನು ಅವರನ್ನು ನೋಡುತ್ತಿದ್ದೇನೆ. ಅವರು ಎಲ್ಲರಿಗಿಂತ ವಿಭಿನ್ನವಾಗಿ ಕಾಣುತ್ತಾರೆ. ಅದಕ್ಕೆ ಅವರ ಸ್ಟಾರ್‌ಡಮ್ ಕಾರಣವಲ್ಲ. ಅವರು ಯಾವುದೇ ಕಾರ್ಯಕ್ರಮದಲ್ಲಿದ್ದರೂ ಬೇರೆಯವರಿಗೆ ಹೆಚ್ಚು ಗೌರವ ನೀಡುತ್ತಾರೆ’ ಎಂದು ರಮ್ಯಾ ಗುಣಗಾನ ಮಾಡಿದ್ದಾರೆ.

ವಿಜಯ್ ಒಬ್ಬ ಜಂಟಲ್‌ಮನ್!

‘ವಿಜಯ್ ಎಲ್ಲವನ್ನೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಎದುರಿಗಿರುವವರು ಹೇಳುವುದನ್ನು ತಾಳ್ಮೆಯಿಂದ ಕೇಳುತ್ತಾರೆ. ಎಲ್ಲರ ಮೇಲೂ ಕಾಳಜಿ ತೋರಿಸುತ್ತಾರೆ. ಅವರು ಸದಾ ಭರವಸೆಯನ್ನು ನೀಡುತ್ತಾರೆ. ಈ ಜಗತ್ತಿನಲ್ಲಿ ಅವರು ಒಬ್ಬ ನಿಜವಾದ ಜಂಟಲ್‌ಮನ್ ತರಹ ನಡೆದುಕೊಳ್ಳುತ್ತಾರೆ’ ಎಂದು ರಮ್ಯಾ ಹೇಳಿದ್ದಾರೆ.

‘ಇಂದು ಅವರು ಮುಖ್ಯಮಂತ್ರಿಯಾಗಿದ್ದರೂ ನಮ್ಮ ಭೇಟಿಯ ಶೈಲಿ ಮೊದಲಿನಂತೆಯೇ ಇತ್ತು. ಅದೇ ನಗು ಮತ್ತು ಅದೇ ಪ್ರೀತಿ ನಮ್ಮ ನಡುವೆ ಇತ್ತು’ ಎಂದು ರಮ್ಯಾ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ತಡವಾಗಿ ಶುಭಾಶಯ ತಿಳಿಸಿದ ರಮ್ಯಾ

‘ನನ್ನ ಪ್ರೀತಿಯ ಸಿಎಂ ಜೋಸೆಫ್ ವಿಜಯ್ ಅವರಿಗೆ ಜನ್ಮದಿನದ ಶುಭಾಶಯಗಳು. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ 40 ದಿನ ಪೂರೈಸಿದ್ದಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ನಟನೆಯ ಜೊತೆಗೆ ಹಲವು ದೊಡ್ಡ ಸಿನಿಮಾಗಳ ಆಡಿಯೋ ಲಾಂಚ್ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು