AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಒಂದಾದ ಸಿಎಂ ವಿಜಯ್, ಅಜಿತ್; ಅಭಿಮಾನಿಗಳಿಗೆ ಅಚ್ಚರಿ

ನಟ ಅಜಿತ್ ಭಾಗವಹಿಸಲಿರುವ ಕಾರ್ ರೇಸ್ ಸ್ಪರ್ಧೆಗೆ ಸಿಎಂ ವಿಜಯ್ ಅವರು ಚಾಲನೆ ನೀಡಲಿದ್ದಾರೆ. ಈ ರೀತಿ ಅಜಿತ್ ಮತ್ತು ವಿಜಯ್ ಅವರು ಒಂದಾಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಆದ್ದರಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಸಂತಸ ಹಂಚಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಒಂದಾದ ಸಿಎಂ ವಿಜಯ್, ಅಜಿತ್; ಅಭಿಮಾನಿಗಳಿಗೆ ಅಚ್ಚರಿ
Ajith Kumar, Thalapathy Vijay
ಮದನ್​ ಕುಮಾರ್​
|

Updated on: Sep 11, 2026 | 4:54 PM

Share

ಅಜಿತ್ ಕುಮಾರ್ ಮತ್ತು ದಳಪತಿ ವಿಜಯ್ ಅವರು ತಮಿಳು ಚಿತ್ರರಂಗದ ಸ್ಟಾರ್ ನಟರು. ಸುಮಾರು ಮೂರು ದಶಕಗಳಿಂದ ಅವರಿಬ್ಬರ ನಡುವೆ ಬಾಕ್ಸ್ ಆಫೀಸ್ ಹಾಗೂ ಅಭಿಮಾನಿಗಳ ಮಟ್ಟದಲ್ಲಿ ತೀವ್ರ ಪೈಪೋಟಿ ನಡೆಯುತ್ತಲೇ ಬಂದಿದೆ. ಆದರೆ, ಈಗ ಕಾಲ ಬದಲಾಗಿದೆ. ವಿಜಯ್ ಪೂರ್ಣಪ್ರಮಾಣದ ರಾಜಕಾರಣಿಯಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರೆ, ಅಜಿತ್ ಚಿತ್ರರಂಗದ ಜೊತೆಗೆ ತಮ್ಮ ನೆಚ್ಚಿನ ಕಾರ್ ರೇಸಿಂಗ್ ಜಗತ್ತಿನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ, ಇಬ್ಬರ ಅಭಿಮಾನಿಗಳನ್ನು ಅಚ್ಚರಿಯ ಕಡಲಲ್ಲಿ ಮುಳುಗಿಸುವಂತಹ ಅಪರೂಪದ ವಿದ್ಯಮಾನವೊಂದು ನಡೆಯುತ್ತಿದೆ. ಅಂತಾರಾಷ್ಟ್ರೀಯ ರೇಸಿಂಗ್ ಅಖಾಡದಲ್ಲಿ ದಳಪತಿ ವಿಜಯ್ ಮತ್ತು ತಲ ಅಜಿತ್ ಒಂದೇ ವೇದಿಕೆಯಲ್ಲಿ ಭೇಟಿಯಾಗುತ್ತಿದ್ದಾರೆ.

ಯುಕೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಲೇ ಮ್ಯಾನ್ಸ್ ಕಪ್’ ರೇಸಿಂಗ್ ಪಂದ್ಯಾವಳಿಯಲ್ಲಿ ಅಜಿತ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ವಿಶೇಷವೆಂದರೆ, ಸಿಲ್ವರ್‌ಸ್ಟೋನ್‌ನಲ್ಲಿ ನಡೆಯಲಿರುವ ಈ ರೇಸ್‌ಗೆ ಮುಖ್ಯ ಅತಿಥಿಯಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭಾಗವಹಿಸುತ್ತಿದ್ದು, ರೇಸ್‌ಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಲಿದ್ದಾರೆ ಎಂಬುದು ಖಚಿತವಾಗಿದೆ

ಈ ಬಗ್ಗೆ ಲೇ ಮ್ಯಾನ್ಸ್ ಕಪ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಸೌತ್ ಇಂಡಿಯನ್ ಸೂಪರ್ ಸ್ಟಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಈ ವಾರಾಂತ್ಯ ಸಿಲ್ವರ್‌ಸ್ಟೋನ್‌ನಲ್ಲಿ ನಡೆಯಲಿರುವ ರೇಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಭಾರತೀಯ ಚಾಲಕರನ್ನು ಪ್ರೋತ್ಸಾಹಿಸಲು ಅವರು ಆಗಮಿಸುತ್ತಿದ್ದಾರೆ’ ಎಂದು ತಿಳಿಸಿದೆ.

View this post on Instagram

A post shared by Le Mans Cup (@lemanscup)

ಇತ್ತ ಅಜಿತ್ ಕುಮಾರ್ ರೇಸಿಂಗ್ ತಂಡ ಕೂಡ ಸಿಲ್ವರ್‌ಸ್ಟೋನ್ ಟ್ರ್ಯಾಕ್‌ನಲ್ಲಿ ರೇಸ್‌ಗೆ ಸಿದ್ಧತೆ ನಡೆಸುತ್ತಿರುವ ವೀಡಿಯೊವನ್ನು ಹಂಚಿಕೊಂಡು ಪಂದ್ಯದಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಖಚಿತಪಡಿಸಿದೆ. ಒಂದೇ ಕಾರ್ಯಕ್ರಮದಲ್ಲಿ ವಿಜಯ್ ಮತ್ತು ಅಜಿತ್ ಅವರು ಪಾಲ್ಗೊಳ್ಳುತ್ತಿರುವುದರಿಂದ ಅವರ ನಡುವೆ ಯಾವುದೇ ವೈರತ್ವ ಇಲ್ಲ ಎಂಬುದು ಸಾಬೀತಾಗಿದೆ.

ಇದನ್ನೂ ಓದಿ: ಅಪರೂಪದ ಅವಕಾಶ ಮಿಸ್ ಮಾಡಿಕೊಂಡ ದಳಪತಿ ವಿಜಯ್; ಕಾರಣವೇನು?

ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಸಂಭ್ರಮ:

ದಶಕಗಳಿಂದ ವಿಜಯ್ ಅಭಿಮಾನಿಗಳು ಹಾಗೂ ಅಜಿತ್ ಅಭಿಮಾನಿಗಳು ನಡುವೆ ಆಫ್‌ಲೈನ್ ಹಾಗೂ ಆನ್‌ಲೈನ್‌ನಲ್ಲಿ ದೊಡ್ಡ ಮಟ್ಟದ ಫ್ಯಾನ್ ವಾರ್ ನಡೆಯುತ್ತಿತ್ತು. ಆದರೆ, ನೆಚ್ಚಿನ ನಟರಿಬ್ಬರೂ ಈ ರೀತಿ ಸೌಹಾರ್ದಯುತವಾಗಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಜೊತೆಗೆ ಭಾರೀ ಸಂತಸ ತಂದಿದೆ. ‘ಕಳೆದ 25 ವರ್ಷಗಳಿಂದ ಕಿತ್ತಾಡುತ್ತಿದ್ದ ನಮಗೆ ಇದು ನಂಬಲು ಸಾಧ್ಯವಾಗದ ಕ್ಷಣ’ ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ‘ದ್ವೇಷವನ್ನು ಬದಿಗಿಟ್ಟು ಈ ಸುಂದರ ಕ್ಷಣವನ್ನು ಆನಂದಿಸೋಣ’ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!