AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ
ಕಾಮಿಡಿ ಕಿಲಾಡಿಗಳು ಸೆಟ್​ನಲ್ಲಿ ರಕ್ಷಿತಾ
TV9 Web
| Edited By: |

Updated on:Jun 28, 2021 | 7:53 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿ ಚಾಂಪಿಯನ್​ಶಿಪ್​’ ಅಂತಿಮಘಟ್ಟ ತಲುಪಿದೆ. 36 ವಾರಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಶೋ ಈಗ ಪೂರ್ಣಗೊಳ್ಳುತ್ತಿದೆ. ಇದರಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದ ರಕ್ಷಿತಾ ಪ್ರೇಮ್​ ಈ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡಿದ್ದಾರೆ. ‘ಸೆಟ್​ನಲ್ಲಿ ಕೊನೆಯ ದಿನ. ಈ ಸೀಸನ್​ 36 ವಾರಗಳ ಕಾಲ ಕಾಮಿಡಿ ಇತ್ತು. ಇದೊಂದು ಸುಂದರ ಪ್ರಯಾಣ. ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್​ ಶೂಟ್​ ಮಾಡೋದು ನಿಜಕ್ಕೂ ಫನ್​ ಆಗಿತ್ತು. ಪ್ರತಿ ವಾರ 6 ಗಂಟೆಗಳ ಶುದ್ಧ ಸಂತೋಷ. ಇಂದು ಸೆಟ್​ನಲ್ಲಿ ಕೊನೆಯ ದಿನ ಕಳೆಯುತ್ತಿದ್ದೇವೆ. ಈ ಸೆಟ್​, ನನ್ನ ಉಳಿದ ಜಡ್ಜ್​ಗಳು, ಈ ತಂಡವನ್ನು ನಾನು ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ರಕ್ಷಿತಾ ಬರೆದುಕೊಂಡಿದ್ದಾರೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ. ಯೋಗರಾಜ್​ ಭಟ್​ ಹಾಗೂ ಜಗ್ಗೇಶ್​ ಕೂಡ ಈ ಶೋನಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ನಟ ಜಗ್ಗೇಶ್​ ಟ್ವಿಟರ್​ನಿಂದ ಕೊಂಚ ಬಿಡುವುದು ತೆಗೆದುಕೊಂಡಿದ್ದರು. ಈಗ ಅವರು ಮತ್ತೆ ಟ್ವಿಟರ್​ಗೆ ಮರಳಿದ್ದಾರೆ. ಅವರು ಕೂಡ ಈ ರಿಯಾಲಿಟಿ ಶೋ ಶೂಟಿಂಗ್​ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: BBK8 Shruthi Controversy : ಲ್ಯಾಗ್ ಮಂಜ-ಚಕ್ರವರ್ತಿ ನಡುವಿನ ಬಿಗ್‌ ಫೈಟ್‌ನಲ್ಲಿ ಕೇಳಿ ಬಂತು ನಟಿ ಶೃತಿ ವಿಚಾರ

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Published On - 7:51 pm, Mon, 28 June 21

Follow Us
TV9 Web
TV9 Web

TV9 Kannada

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ