AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ದೂರಾಗುತ್ತಾರೆ ಎಂದ ಜ್ಯೋತಿಷಿ ವಿರುದ್ಧ ದೂರು

ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡ ನಾಗ ಚೈತನ್ಯ ಮತ್ತು ಶೋಭಿತಾ ವೈವಾಹಿಕ ಜೀವನ ಮುರಿದು ಬೀಳುತ್ತದೆ ಎಂದು ಭವಿಷ್ಯ ನುಡಿದಿರುವ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಶೋಭಿತಾ-ನಾಗ ಚೈತನ್ಯ ದೂರಾಗುತ್ತಾರೆ ಎಂದ ಜ್ಯೋತಿಷಿ ವಿರುದ್ಧ ದೂರು
ಮಂಜುನಾಥ ಸಿ.
|

Updated on: Aug 13, 2024 | 1:02 PM

Share

ಇತ್ತೀಚೆಗಷ್ಟೆ ನಟ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಹಿಂದೆ ನಾಗ ಚೈತನ್ಯ ಹಾಗೂ ಸಮಂತಾ ದೂರಾಗತ್ತಾರೆ ಎಂದು ಭವಿಷ್ಯ ನುಡಿದಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಈಗ ನಾಗ ಚೈತನ್ಯ ಹಾಗೂ ಶೋಭಿತಾರ ದಾಂಪತ್ಯದ ಕುರಿತು ಭವಿಷ್ಯ ನುಡಿದಿದ್ದು, ಈ ಇಬ್ಬರೂ ಮೂರು ವರ್ಷಗಳ ಬಳಿಕ ದೂರಾಗುತ್ತಾರೆ. ಇವರಿಬ್ಬರು ದೂರಾಗಲು ಹೆಣ್ಣೊಬ್ಬಳು ಕಾರಣ ಆಗಲಿದ್ದಾಳೆ ಎಂದು ಭವಿಷ್ಯ ನುಡಿದಿದ್ದರು. ಇದೀಗ ಈ ಭವಿಷ್ಯವೇ ವೇಣು ಸ್ವಾಮಿಗೆ ಮುಳುವಾಗುವಂತಿದ್ದು ವೇಣು ಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ವೇಣು ಸ್ವಾಮಿ ವಿರುದ್ಧ ಅಕ್ಕಿನೇನಿ ಕುಟುಂಬಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ವೇಣು ಸ್ವಾಮಿ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದು, ‘ನಾನು ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿ ಜಾತಕ ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದ್ದೆ. ಆದರೆ ಈ ಹಿಂದೆ ನಾಗ ಚೈತನ್ಯ-ಸಮಂತಾರ ಜಾತಕ ವಿಶ್ಲೇಷಣೆ ಮಾಡಿದ್ದೆ, ಅದು ಹೇಳಿದ್ದಂತೆ ನಡೆದಿತ್ತು, ಅದೇ ಜಾತಕ ವಿಶ್ಲೇಷಣೆಯ ಮುಂದುವರೆದ ಭಾಗವಾಗಿ ಶೋಭಿತಾ-ನಾಗ ಚೈತನ್ಯ ಜಾತಕ ವಿಶ್ಲೇಷಣೆ ಮಾಡಿದ್ದೇನೆ. ಆದರೆ ಇನ್ನು ಮುಂದೆ ಯಾವುದೇ ಸಿನಿಮಾ ಸೆಲೆಬ್ರಿಟಿಗಳಾಗಲಿ, ರಾಜಕೀಯ ವಿಶ್ಲೇಷಣೆಯನ್ನಾಗಲಿ ನಾನು ಸಾಮಾಜಿಕ ಜಾಲತಾಣದಲ್ಲಿ ಮಾಡುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ:ನಾಗ ಚೈತನ್ಯ-ಶೋಭಿತ ವೈವಾಹಿಕ ಜೀವನದ ಬಗ್ಗೆ ವೇಣು ಸ್ವಾಮಿ ಭವಿಷ್ಯ

ನಾಗ ಚೈತನ್ಯ ಮತ್ತು ಶೋಭಿತಾ ಅವರುಗಳ ಜಾತಕ ವಿಶ್ಲೇಷಣೆ ಮಾಡಿದ್ದಕ್ಕೆ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಸಹ ಬೇಸರ ವ್ಯಕ್ತಪಡಿಸಿದ್ದು, ತಮಗೆ ಕರೆ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ ಎಂದಿರುವ ವೇಣು ಸ್ವಾಮಿ, ‘ಮಂಚು ವಿಷ್ಣು ಅವರು ಕರೆ ಮಾಡಿ ಮಾತನಾಡಿದರು. ತಮ್ಮ ಬೇಸರವನ್ನು ವ್ಯಕ್ತಪಡಿಸಿದರು. ನಾನು ಅವರಿಗೆ ಈ ವಿಷಯವಾಗಿ ಸ್ಪಷ್ಟನೆ ನೀಡಿದ್ದೇನೆ. ನಾನು ಇನ್ನು ಮುಂದೆ ಸೆಲೆಬ್ರಿಟಿ ಜಾತಕ ವಿಶ್ಲೇಷಿಸುವುದಿಲ್ಲ’ ಎಂದಿದ್ದಾರೆ. ಈ ಬಗ್ಗೆ ಮಂಚು ವಿಷ್ಣು ಅವರನ್ನು ಭೇಟಿಯಾಗಿ ನಾನು ಭರವಸೆ ನೀಡಲಿದ್ದೇನೆ’ ಎಂದಿದ್ದಾರೆ.

ವೇಣು ಸ್ವಾಮಿ ಈ ಹಿಂದೆ ನಾಗ ಚೈತನ್ಯ, ಸಮಂತಾ ಮಾತ್ರವೇ ಅಲ್ಲದೆ ಹಲವು ನಟ-ನಟಿಯರ ಜಾತಕ ವಿಶ್ಲೇಷಣೆಯನ್ನು ಮಾಡಿ ಅದರ ವಿಡಿಯೋಗಳನ್ನು ಹಂಚಿಕೊಂಡಿದ್ದರು. ಪ್ರಭಾಸ್​ಗೆ ಗೆಲುವು ಸಿಗುವುದಿಲ್ಲ, ಅವರಿಗೆ ಮದುವೆ ಆಗುವುದಿಲ್ಲ ಎಂದಿದ್ದರು. ರಾಜಕೀಯ ವಿಶ್ಲೇಷಣೆಯನ್ನೂ ಮಾಡಿದ್ದ ವೇಣು ಸ್ವಾಮಿ, ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಜಗನ್ ಮತ್ತೊಮ್ಮೆ ಭಾರಿ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದಿದ್ದರು. ಆದರೆ ಜಗನ್ ಪಕ್ಷ ಹೀನಾಯವಾಗಿ ಸೋತಿತು. ಬಳಿಕ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದ ವೇಣು ಸ್ವಾಮಿ, ಇನ್ನು ಮುಂದೆ ನಾನು ಯಾರದ್ದೇ ಜಾತಕವನ್ನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್