AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ

ಸಾಮಾಜಿಕ ಕಳಕಳಿಯ ವಿಷಯವನ್ನು ಇಟ್ಟುಕೊಂಡು ಕಮರ್ಷಿಯಲ್​ ಶೈಲಿಯ ಸಿನಿಮಾ ಮಾಡುವಲ್ಲಿ ವೆಟ್ರಿಮಾರನ್​ ಫೇಮಸ್. ಅವರ ಜೊತೆ ದಳಪತಿ ವಿಜಯ್​ ಕೊನೇ ಸಿನಿಮಾ ಮಾಡಲಿದ್ದಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಈ ಬಗ್ಗೆ ವೆಟ್ರಿಮಾರನ್​ ಅವರು ಈಗ ಹೇಳಿರುವ ಮಾತು ಕೇಳಿ ದಳಪತಿ ವಿಜಯ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ
ವೆಟ್ರಿಮಾರನ್​, ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Apr 24, 2024 | 10:21 PM

Share

ನಟ ದಳಪತಿ ವಿಜಯ್​ (Thalapathy Vijay) ಅವರು ಅಧಿಕೃತವಾಗಿಯೇ ರಾಜಕೀಯಕ್ಕೆ ಎಂಟ್ರಿ ಆಗಿರುವುದು ಗೊತ್ತೇ ಇದೆ. ಹಾಗಾದರೆ ಅವರ ಕೊನೇ ಸಿನಿಮಾ ಯಾವುದು? 69ನೇ (Thalapathy 69) ಸಿನಿಮಾದ ಬಳಿಕ ಅವರು ಬೇರೆ ಯಾವುದೇ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಊಹಿಸಲಾಗಿತ್ತು. ದಳಪತಿ ವಿಜಯ್​ ನಟನೆಯ 69ನೇ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್​ (Vetrimaaran) ಅವರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ವಿಚಾರಕ್ಕೆ ಸಂಬಂಧಪಟ್ಟಂತೆ ವೆಟ್ರಿಮಾರನ್​ ಅವರು ನೀಡಿದ ಒಂದು ಹೇಳಿಕೆಯಿಂದ ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ದಳಪತಿ ವಿಜಯ್​ ಮತ್ತು ವೆಟ್ರಿಮಾರನ್​ ಅವರು ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳ ಮನದಲ್ಲಿ ಹೈಪ್​ ಹೆಚ್ಚಾಗಿತ್ತು. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರೊಬ್ಬರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂದು ಕೂಡ ಗಾಸಿಪ್​ ಹಬ್ಬಿತ್ತು. ಆ ಬಳಿಕ ದಳಪತಿ ವಿಜಯ್​ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಅದೆಲ್ಲವೂ ಈಗ ಹುಸಿ ಆಗಿದೆ.

ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ದಳಪತಿ ವಿಜಯ್​ ಜೊತೆಗಿನ ಸಿನಿಮಾ ಬಗ್ಗೆ ವೆಟ್ರಿಮಾರನ್​ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆಗ ಅವರು ಬೇಸರದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ತುಂಬ ಸಮಯದ ಹಿಂದೆ ನಾನು ಮತ್ತು ದಳಪತಿ ವಿಜಯ್​ ಅವರು ಒಂದು ಕಥೆಯ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಆ ಸಿನಿಮಾ ನಿರ್ಮಾಣ ಆಗುತ್ತದೆ ಅಂತ ನನಗೆ ಅನಿಸುತ್ತಿಲ್ಲ. ನಾವು ಆ ಸಿನಿಮಾವನ್ನು ಮಾಡುತ್ತಿಲ್ಲ ಎಂದುಕೊಂಡಿದ್ದೇನೆ’ ಎಂದಿದ್ದಾರೆ ವೆಟ್ರಿಮಾರನ್​.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್​ ಅಭಿನಯದ ಈ ಕೊನೇ ಸಿನಿಮಾಗೆ ವೆಟ್ರಿಮಾರನ್​ ನಿರ್ದೇಶನ ಮಾಡುತ್ತಿಲ್ಲ ಎಂಬುದು ಈಗ ಖಚಿತವಾಗಿದೆ. ಹಾಗಾದರೆ ಆ ಚಾನ್ಸ್​ ಬೇರೆ ಯಾವ ನಿರ್ದೇಶಕನಿಗೆ ಸಿಗಲಿದೆ? ವರದಿಗಳ ಪ್ರಕಾರ ಎಚ್​. ವಿನೋದ್​ ಅವರು ‘ದಳಪತಿ 69’ ಸಿನಿಮಾಗೆ ನಿರ್ದೇಶನ ಮಾಡುವ ಸಾಧ್ಯತೆ ಇದೆ. ಈ ಸಿನಿಮಾಗೆ ದಳಪತಿ ವಿಜಯ್​ ಅವರು ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿದ ಬಳಿಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆ ಬಗ್ಗೆ ವಿಜಯ್​ ಅವರು ಸಂಪೂರ್ಣ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?