AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಯೋ: ವಿಜಯ್-ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ?

Leo: ವಿಜಯ್ ನಟನೆಯ ‘ಲಿಯೋ‘ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜ್ ಹಾಗೂ ವಿಜಯ್ ನಡುವೆ ಮನಸ್ಥಾಪ ಉಂಟಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಲಿಯೋ: ವಿಜಯ್-ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ?
ವಿಜಯ್-ಲೋಕೇಶ್
ಮಂಜುನಾಥ ಸಿ.
|

Updated on: Oct 06, 2023 | 8:01 PM

Share

ತಮಿಳಿನ ಸ್ಟಾರ್ ನಟ ವಿಜಯ್​ರ (Vijay) ‘ಲಿಯೋ‘ (Leo) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದು, ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆಗಳಿವೆ. ಸಿನಿಮಾದ ಪ್ರಚಾರ ಕಾರ್ಯ ಹಲವು ಕಾರಣಗಳಿಂದ ನಿಧಾನ ಗತಿಯಲ್ಲಿ ಸಾಗಿದೆ. ಈ ನಡುವೆ ವಿಜಯ್ ಹಾಗೂ ನಿರ್ದೇಶಕ ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಕೆಲವು ಸೀನ್​ಗಳಿಗೆ ಸಂಬಂಧಿಸಿದಂತೆ ನಿರ್ದೇಶಕ ಲೋಕೇಶ್ ಕನಗರಾಜ್ ಹಾಗೂ ವಿಜಯ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಲೋಕೇಶ್ ಕನಗರಾಜ್ ತಮ್ಮ ಸಿನಿಮಾದ ಪ್ರಚಾರ ಮಾಡುತ್ತಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿನಿಮಾದ ನಿರ್ಮಾಪಕ ಲಲಿತ್ ಕುಮಾರ್, ‘ವಿಜಯ್ ಹಾಗೂ ಲೋಕೇಶ್ ಕನಗರಾಜ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಸಹೋದರರಂತೆ ಆತ್ಮೀಯವಾಗಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ. ಇದು ವಿಜಯ್ ಹಾಗೂ ಲೋಕೇಶ್ ಅಭಿಮಾನಿಗಳಲ್ಲಿ ನಿರಾಳತೆ ಮೂಡಿಸಿದೆ.

ಇದನ್ನೂ ಓದಿ:ಪುಂಡಾಟ ಮೆರೆದ ವಿಜಯ್ ಅಭಿಮಾನಿಗಳು, ಲಿಯೋ ಟ್ರೈಲರ್ ಬಿಡುಗಡೆ ವೇಳೆ ಚಿತ್ರಮಂದಿರದಲ್ಲಿ ದಾಂಧಲೆ

‘ಲಿಯೋ’ ಸಿನಿಮಾದ ಟ್ರೈಲರ್ ಲಾಂಚ್ ಇವೆಂಟ್ ಅನ್ನು ಅದ್ಧೂರಿಯಾಗಿ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಚೆನ್ನೈ ಪೊಲೀಸರು ಇವೆಂಟ್​ ಆಯೋಜನೆಗೆ ಒಪ್ಪಿಗೆ ನೀಡಲಿಲ್ಲ. ಭದ್ರತೆ ಕಾರಣ ನೀಡಿ ಅವಕಾಶ ನಿರಾಕರಿಸಲಾಯ್ತು. ಆಡಳಿತ ಸರ್ಕಾರ ರಾಜಕೀಯ ಕಾರಣಕ್ಕೆ ವಿಜಯ್ ಸಿನಿಮಾ ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಿದೆ ಎಂದು ವಿಜಯ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯ್ ಸಹ ರಾಜಕೀಯಕ್ಕೆ ಧುಮುಕುವ ಸೂಚನೆಗಳನ್ನು ನೀಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಮುಳುವಾಗಬಹುದಾದ ವಿಜಯ್​ರನ್ನು ಈಗಲೇ ಹತ್ತಿಕ್ಕಲು ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ.

ಟ್ರೈಲರ್ ಬಿಡುಗಡೆ, ಆಡಿಯೋ ಲಾಂಚ್ ಅಂಥಹಾ ಕಾರ್ಯಕ್ರಮಗಳ ಹೊರತಾಗಿ ವಿಜಯ್ ಬೇರೆ ಯಾವುದೇ ರೀತಿಯ ಸಿನಿಮಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ. ಯಾವುದೇ ಟಿವಿ ಚಾನೆಲ್, ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನಗಳನ್ನು ಸಹ ನೀಡುವುದಿಲ್ಲ. ಈಗ ಟ್ರೈಲರ್ ಲಾಂಚ್ ಕಾರ್ಯಕ್ರಮವೂ ರದ್ದಾಗಿರುವ ಕಾರಣ ಸಿನಿಮಾದ ಪ್ರಚಾರಕ್ಕೆ ಹಿನ್ನಡೆ ಆದಂತಾಗಿದೆ.

ಪ್ರಚಾರದ ಹೊರತಾಗಿಯೂ ಸಿನಿಮಾದ ಅಡ್ವಾನ್ಸ್ ಬುಕಿಂಗ್​ಗಳು ಜೋರಾಗಿಯೇ ಆಗುತ್ತಿವೆ. ಸಿನಿಮಾವು ಅಕ್ಟೋಬರ್ 19ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸಿರುವ ಅನುಮಾನವನ್ನು ಟ್ರೈಲರ್ ಹುಟ್ಟುಹಾಕಿದೆ. ಸಿನಿಮಾದಲ್ಲಿ ವಿಜಯ್​ಗೆ ನಾಯಕಿಯಾಗಿ ತ್ರಿಷಾ ನಟಿಸಿದ್ದಾರೆ. ವಿಲನ್ ಪಾತ್ರದಲ್ಲಿ ಸಂಜಯ್ ದತ್ ಇದ್ದಾರೆ. ಅರ್ಜುನ್ ಸರ್ಜಾ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ಒದಗಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್