AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

Covid 19: ಪ್ರಿಯಾಂಕಾ ಚೋಪ್ರಾ ಅವರ ಮಾತಿ​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಮದನ್​ ಕುಮಾರ್​
| Edited By: |

Updated on:Apr 27, 2021 | 9:51 AM

Share

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಕೊವಿಡ್​ 2ನೇ ಅಲೆಗೆ ಇಡೀ ದೇಶ ತತ್ತರಿಸುತ್ತಿದೆ. ಜನಸಾಮಾನ್ಯರ ಕಷ್ಟ ಹೇಳತೀರದು. ಸೂಕ್ತ ಕಾಲಕ್ಕೆ ಚಿಕಿತ್ಸೆ, ಆಕ್ಸಿಜನ್​ ಸಿಲಿಂಡರ್​ ಸಿಗದೇ ಒದ್ದಾಡುವಂತಾಗಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಸೆಲೆಬ್ರಿಟಿಗಳು ಹಾಯಾಗಿ ಇದ್ದಾರೆ. ಕೊವಿಡ್​ ಕಾಟ ಕಡಿಮೆ ಇರುವಂತಹ ದೇಶಗಳಿಗೆ ಹೋಗಿ ರಜೆಯ ಮಜಾ ಸವಿಯುತ್ತಿದ್ದಾರೆ. ಆದರೆ ಅವರೆಲ್ಲರಿಗಿಂತ ಭಿನ್ನವಾಗಿ ನಟಿ ಪ್ರಿಯಾಂಕಾ ಚೋಪ್ರಾ ನಿಂತುಕೊಂಡಿದ್ದಾರೆ.

ಸದ್ಯ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿ ವಾಸವಾಗಿದ್ದಾರೆ. ಗಾಯಕ ನಿಕ್​ ಜೋನಸ್​ ಜೊತೆ ಮದುವೆ ಆದ ಬಳಿಕ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಸದ್ಯ ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಸಹ ಮಹಾಮಾರಿಯನ್ನು ಎದುರಿಸಲು ಅಮೆರಿಕ ಸಜ್ಜಾಗಿದೆ. ಹಾಗೇ ನೋಡಿದರೆ ಪ್ರಿಯಾಂಕಾ ಅಲ್ಲಿ ತುಂಬಾ ಸೇಫ್​ ಆಗಿದ್ದಾರೆ. ಆದರೂ ಕೂಡ ಅವರು ಭಾರತದ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್​ಗಳಿಗೆ ತೀವ್ರ ಬೇಡಿಕೆ ಇದೆ. ಅದನ್ನು ಭಾರತಕ್ಕೆ ಕೊಡಿಸಲು ಪ್ರಿಯಾಂಕಾ ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ನನ್ನ ಹೃದಯ ಛಿದ್ರವಾಗುತ್ತಿದೆ. ಕೊರೊನಾದಿಂದ ಭಾರತ ಬಳಲುತ್ತಿದೆ. ಆದರೆ ಈ ಸಂದರ್ಭದಲ್ಲಿ ಅಮೆರಿಕ ತನಗೆ ಅವಶ್ಯಕತೆ ಇರುವುದಕ್ಕಿಂತಲೂ 55 ಕೋಟಿ​ ಹೆಚ್ಚುವರಿ ವ್ಯಾಕ್ಸಿನ್​ಗಳನ್ನು ಪಡೆದುಕೊಂಡಿದೆ. ಜಗತ್ತಿನಾದ್ಯಂತ ಆಸ್ಟ್ರಾವೆನೆಕಾ ಹಂಚಿಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನನ್ನ ದೇಶ ಭಾರತದಲ್ಲಿ ಪರಿಸ್ಥಿತಿ ತುಂಬ ಚಿಂತಾಜನಕ ಆಗಿದೆ. ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್​ ನೀಡುತ್ತೀರಾ?’ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಮತ್ತು ಇತರೆ ಉನ್ನತ ಅಧಿಕಾರಿಗಳಿಗೆ ಪ್ರಿಯಾಂಕಾ ಪ್ರಶ್ನೆ ಮಾಡಿದ್ದಾರೆ.

ಪ್ರಿಯಾಂಕಾ ಅವರ ಈ ಟ್ವೀಟ್​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ. ಸ್ವದೇಶದ ಬಗ್ಗೆ ಅವರು ಹೊಂದಿರುವ ಕಾಳಜಿಗೆ ಇಲ್ಲಿನ ಅವರ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಆದರೆ ಕೆಲವರು ಅಪಸ್ವರ ಕೂಡ ಎತ್ತಿದ್ದಾರೆ. ‘ನೀವು ಈ ಮಾತನ್ನು ಇನ್ನೂ ಬೇಗ ಹೇಳಬೇಕಿತ್ತು. ಈಗಾಗಲೇ ಪರಿಸ್ಥಿತಿ ಕೈ ಮೀರಿದೆ’ ಎಂದು ಟೀಕಿಸಿದ್ದಾರೆ. ಸದ್ಯ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಹಿಂದಿಗಿಂತಲೂ ಹೆಚ್ಚಾಗಿ ಹಾಲಿವುಡ್​ ಸಿನಿಮಾಗಳ ಕಡೆಗೆ ಗಮನ ಹರಿಸಿದ್ದಾರೆ.

ಇದನ್ನೂ ಓದಿ: ಎಲ್ಲೇ ಇದ್ದರೂ ಭಾರತೀಯ ಸಂಸ್ಕೃತಿ ಮರೆಯದ ಪ್ರಿಯಾಂಕಾ ಚೋಪ್ರಾ! ಲಂಡನ್​ನಲ್ಲಿ ದೇಸಿ ಗರ್ಲ್​​ ಹೋಳಿ

ಬಾಲ್ಯದಲ್ಲಿ ಪ್ರಿಯಾಂಕಾ ಚೋಪ್ರಾ ಪಾಲಿಸುತ್ತಿದ್ದ ಧರ್ಮ ಯಾವುದು? ಸಂದರ್ಶನದಲ್ಲಿ ಸತ್ಯ ಬಾಯ್ಬಿಟ್ಟ ನಟಿ

Published On - 8:59 am, Tue, 27 April 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್