AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಧಾನಿ  ಫೈಲ್ಸ್’ ಸಿನಿಮಾ ರಿಲೀಸ್​ಗೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್

ಫೆಬ್ರವರಿ 15ರಂದೇ ಈ ಚಿತ್ರ ರಿಲೀಸ್ ಆಗಿರಬೇಕಿತ್ತು. ಆದರೆ, ಈ ಚಿತ್ರ ಕೋರ್ಟ್​ನಲ್ಲಿ ಇದ್ದಿದ್ದರಿಂದ ಸಿನಿಮಾ ಪ್ರದರ್ಶನ ಕಂಡಿರಲಿಲ್ಲ. ಈಗ ಚಿತ್ರದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ಸಿನಿಮಾ ಎಲ್ಲ ಕಡೆಗಳಲ್ಲಿ ಪ್ರದರ್ಶನ ಕಾಣಲು ಅವಕಾಶ ಸಿಕ್ಕಂತೆ ಆಗಿದೆ. ಇದರಿಂದ ತಂಡ ಖುಷಿ ಆಗಿದೆ.

‘ರಾಜಧಾನಿ  ಫೈಲ್ಸ್’ ಸಿನಿಮಾ ರಿಲೀಸ್​ಗೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್
ರಾಜಧಾನಿ ಫೈಲ್ಸ್
TV9 Web
| Edited By: |

Updated on:Feb 16, 2024 | 1:25 PM

Share

ಆಂಧ್ರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿಧಾನಸಭೆ ಚುನಾವಣೆ ಸನಿಹದಲ್ಲಿದೆ. ಈ ಸಂದರ್ಭದಲ್ಲಿ ಆಂಧ್ರ ನಾಡಲ್ಲಿ ‘ರಾಜಧಾನಿ ಫೈಲ್ಸ್’ ಸಿನಿಮಾ (Rajadhani Files Movie) ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರವನ್ನು ರಾಜಕೀಯ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಆರೋಪ ಇದೆ. ಈ ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆಡಳಿತ ಪಕ್ಷ ವೈಎಸ್​ಆರ್​ಸಿಪಿ ಸಿನಿಮಾದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಇವರಿಗೆ ಹಿನ್ನಡೆ ಆಗಿದೆ. ಸಿನಿಮಾ ಪ್ರದರ್ಶನಕ್ಕೆ ಸಮ್ಮತಿ ಸಿಕ್ಕಿದೆ.

ಅಮರಾವತಿ ರಾಜಧಾನಿ ಸಮಸ್ಯೆಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಸಿಎಂ ಜಗನ್ ಅವರನ್ನು ವಿಲನ್ ರೀತಿಯಲ್ಲಿ ತೋರಿಸಲಾಗಿದೆ ಎಂದು ಆಡಳಿತ ಪಕ್ಷದವರು ಆರೋಪ ಮಾಡಿದ್ದರು. ಹೀಗಾಗಿ ವೈಎಸ್​ಆರ್​ಸಿಪಿ ‘ರಾಜಧಾನಿ ಫೈಲ್ಸ್’ ಸಿನಿಮಾ ಬಿಡಗುಡೆ ಅವಕಾಶ ನೀಡಬಾರದು ಎಂದು ಒತ್ತಾಯ ಹೇರಿತ್ತು. ಜೊತೆಗೆ ಹೈಕೋರ್ಟ್​ಗೆ ಪಕ್ಷದವರು ಅರ್ಜಿ ಸಲ್ಲಿಸಿದ್ದರು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 15ರಂದೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಈ ಚಿತ್ರ ಕೋರ್ಟ್​ನಲ್ಲಿ ಇದ್ದಿದ್ದರಿಂದ ಸಿನಿಮಾ ಪ್ರದರ್ಶನ ಕಂಡಿರಲಿಲ್ಲ. ಈಗ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ಸಿನಿಮಾ ಎಲ್ಲ ಕಡೆಗಳಲ್ಲಿ ಪ್ರದರ್ಶನ ಕಾಣಲಿದೆ.

ಈಗಾಗಲೇ ಸಿನಿಮಾ ಸೆನ್ಸಾರ್ ಮಂಡಳಿಯಿಂದ ಎರಡು ಬಾರಿ ನೋಡಲ್ಪಟ್ಟಿದೆ. ಜೊತೆಗೆ ಸೆನ್ಸಾರ್ ಪತ್ರ ಕೂಡ ಸಿಕ್ಕಿದೆ. ಕೆಲವು ದೃಶ್ಯಗಳನ್ನು ತೆಗೆಯಲು ಸೆನ್ಸಾರ್ ಮಂಡಳಿ ಆದೇಶ ನೀಡಿತ್ತು. ಆದಾಗ್ಯೂ ಸಿನಿಮಾಗೆ ತಡೆ ನೀಡಬೇಕು ಎಂದು ಕೋರಿದ್ದು ಸಾಕಷ್ಟು ಬೇಸರ ಮೂಡಿಸಿತ್ತು. ಈಗ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದ್ದು ತಂಡದ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ‘ರಾಜಧಾನಿ ಫೈಲ್ಸ್’ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಆಂಧ್ರ ಆಡಳಿತ ಪಕ್ಷ, ಸಿನಿಮಾದಲ್ಲಿ ಅಂಥಹದ್ದೇನಿದೆ?

ಆಂಧ್ರದಲ್ಲಿ ಈಗಾಗಲೇ ರಾಜಕೀಯ ವಿಚಾರದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಜಗನ್ ಪರವಾಗಿ ‘ಯಾತ್ರಾ 2’ ಚಿತ್ರ ಬಿಡುಗಡೆ ಕಂಡಿದೆ. ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ವ್ಯೂಹಂ’ ಸಿನಿಮಾ ಬಿಡುಗಡೆ ಆಗುವುದರಲ್ಲಿದೆ. ಇದು ಕೂಡ ರಾಜಕೀಯ ಕಥೆಯನ್ನು ಆಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:23 pm, Fri, 16 February 24

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ