AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​
ಆಲಿಯಾ ಭಟ್​
ರಾಜೇಶ್ ದುಗ್ಗುಮನೆ
|

Updated on:Mar 25, 2021 | 7:38 PM

Share

ಮುಂಬೈ ಮಾಫಿಯಾ ಕ್ವೀನ್​ ಗಂಗುಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಸಿದ್ಧಗೊಂಡಿರುವ ಸಿನಿಮಾಗೆ ಈಗ ಸಂಕಷ್ಟ ಎದುರಾಗಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಇರುವ ಈ ಚಿತ್ರ ತಂಡಕ್ಕೆ ಮುಂಬೈ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ. ಇದೇ ಮೇ 21ರಂದು ಬನ್ಸಾಲಿ, ಚಿತ್ರದ ನಟಿ ಆಲಿಯಾ ಭಟ್​ಗೆ ಕೋರ್ಟ್​ಗೆ ಹಾಜರಾಗಲು ಸೂಚಿಸಲಾಗಿದೆ. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈಗ ಗಂಗೂಬಾಯಿ ಅವರ ದತ್ತುಪುತ್ರ ಬಾಬುರಾವ್​ ಶಾ ದೂರು ದಾಖಲು ಮಾಡಿದ್ದಾರೆ. ಅಲ್ಲದೆ, ಅವರು ಸಿನಿಮಾ ವಿರುದ್ಧ ಕಿಡಿಕಾರಿದ್ದಾರೆ.

ಈ ಚಿತ್ರದಲ್ಲಿ ಗಂಗೂಬಾಯಿ ಅವರನ್ನು ತಪ್ಪಾಗಿ ತೋರಿಸಲಾಗಿದೆ. ಸಿನಿಮಾದಲ್ಲಿ ತೋರಿಸಲು ಹೊರಟಿರುವ ದೃಶ್ಯಗಳು ವಾಸ್ತವಕ್ಕೆ ದೂರ ಇದ್ದಂತೆ ಕಾಣುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಕೋರ್ಟ್​ ಆಲಿಯಾ ಭಟ್​ ಹಾಗೂ ನಿರ್ದೇಶಕ ಸಂಜಯ್​ ಬನ್ಸಾಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಜುಲೈ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಸದ್ಯ, ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ಚಿತ್ರ ಒಂದಾದ ಮೇಲೆ ಒಂದು ವಿವಾದ ಸೃಷ್ಟಿಸುತ್ತಿರುವುದು ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇತ್ತೀಚೆಗೆ ಆಲಿಯಾ ಭಟ್​ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಫಸ್ಟ್​ಲುಕ್​ ಪೋಸ್ಟರ್​ ಮೂಲಕ ಆಲಿಯಾಗೆ ಆರ್​ಆರ್​ಆರ್​ ತಂಡ ಶುಭಾಶಯ ಕೋರಿತ್ತು. ಸೀರೆ ಮತ್ತು ಆಭರಣ ಧರಿಸಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಆಲಿಯಾ ಕಾಣಿಸಿಕೊಂಡಿದ್ದು ಸಿನಿರಸಿಕರೆ ಖುಷಿ ನೀಡಿತ್ತು. ಬಾಹುಬಲಿ, ಮಗಧೀರ, ಮುಂತಾದ ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳನ್ನು ಅದ್ದೂರಿಯಾಗಿ ತೋರಿಸಿದ್ದಾರೆ ರಾಜಮೌಳಿ. ಅವರು ಈಗ ಆರ್​ಆರ್​ಆರ್​ ಚಿತ್ರದಲ್ಲಿ ಆಲಿಯಾರನ್ನು ಹೇಗೆ ತೋರಿಸಬಹುದು ಎನ್ನುವುದು ಸದ್ಯದ ಕುತೂಹಲ.

ಇದನ್ನೂ ಓದಿ: ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

Published On - 7:27 pm, Thu, 25 March 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ