ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ಸ್ವತಃ ತಂದೆಯೇ ದೂರು ನೀಡಿದ್ದರು. ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ವಿರುದ್ಧ ಕೋರ್ಟ್ ಆದೇಶ ನೀಡಿದೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?
Chaithra Kundapura
Edited By:

Updated on: Dec 19, 2025 | 7:50 PM

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ವಿರುದ್ಧ ಆದೇಶ ನೀಡಿದೆ. ‘ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.

ಬಾಲಕೃಷ್ಣ ನಾಯ್ಕ್​ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ. ಇದರಿಂದ ಚೈತ್ರಾ ಕುಂದಾಪುರ ಅವರ ಬಿಗ್ ಬಾಸ್ ಆಟಕ್ಕೆ ತೊಂದರೆ ಆಗುತ್ತಾ ಎಂಬ ಪ್ರಶ್ನೆ ಉದ್ಭವ ಆಗಿದೆ.

ಈ ಮೊದಲು ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ತಾರಕಕೇರಿತ್ತು. ಚೈತ್ರಾ ಮದುವೆ ವೇಳೆ ಬಾಲಕೃಷ್ಣ ಅವರ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಸಮಯದಲ್ಲಿ ತಂದೆಯ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಪರೋಕ್ಷವಾಗಿ ಚೈತ್ರಾ ಕುಂದಾಪುರ ಅವರ ಕಿಡಿಕಾರಿದ್ದರು. ಈ ಎಲ್ಲ ಕಾರಣಗಳಿಂದ ಅವರ ಕುಟುಂಬದಲ್ಲಿ ಬಿರುಕು ಮೂಡಿತ್ತು.

ಇದನ್ನೂ ಓದಿ: ಬಾಯಿ ಬಿಟ್ಟರೆ ಬರೀ ಸುಳ್ಳು, ಮೋಸದ ಆಟ: ಚೈತ್ರಾ ಮೇಲೆ ಆರೋಪ; ದೇವರ ಮುಂದೆ ಕಣ್ಣೀರು

ಬಿಗ್ ಬಾಸ್ ಕನ್ನಡ 11ನೇ ಸೀಸನ್​ನಲ್ಲಿ ಚೈತ್ರಾ ಕುಂದಾಪುರ ಅವರು ಸ್ಪರ್ಧಿಸಿದ್ದರು. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಆಗಿದ್ದಾರೆ. ಕೋರ್ಟ್ ಆದೇಶದ ಪರಿಣಾಮದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರಬೇಕಾದ ಪ್ರಮೇಯ ಬರುತ್ತಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.