‘ದಿ ರಾಜಾ ಸಾಬ್’ಗೂ ಎದುರಾಯ್ತು ಕಂಟಕ: ಅಡಕತ್ತರಿಯಲ್ಲಿ ನಿರ್ಮಾಪಕ
The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಮುಂಚೆ ಆಂಧ್ರ ಮತ್ತು ತೆಲಂಗಾಣ ಎರಡೂ ಸರ್ಕಾರಗಳಿಂದ ಅನುಮತಿ ಪಡೆದು ಟಿಕೆಟ್ ದರಗಳನ್ನು ಸಹ ಹೆಚ್ಚಳ ಮಾಡಲಾಗಿದ್ದು, ಇದೀಗ ಹೈದರಾಬಾದ್ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಟಿಕೆಟ್ ದರ 450-550 ರೂಪಾಯಿಗಳಿದೆ. ಆದರೆ ಇದೀಗ ಸಿನಿಮಾಕ್ಕೆ ನ್ಯಾಯಾಲಯ ಶಾಕ್ ನೀಡಿದೆ.

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಭಾರಿ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ (ಜನವರಿ 08) ಸಿನಿಮಾದ ಫ್ಯಾನ್ಸ್ ಶೋ ಅನ್ನು ಸಹ ಹಲವು ಚಿತ್ರಮಂದಿರಗಳಲ್ಲಿ ಆಯೋಜನೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಮುಂಚೆ ಆಂಧ್ರ ಮತ್ತು ತೆಲಂಗಾಣ ಎರಡೂ ಸರ್ಕಾರಗಳಿಂದ ಅನುಮತಿ ಪಡೆದು ಟಿಕೆಟ್ ದರಗಳನ್ನು ಸಹ ಹೆಚ್ಚಳ ಮಾಡಲಾಗಿದ್ದು, ಇದೀಗ ಹೈದರಾಬಾದ್ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಟಿಕೆಟ್ ದರ 450-550 ರೂಪಾಯಿಗಳಿದೆ. ಆದರೆ ಇದೀಗ ಸಿನಿಮಾಕ್ಕೆ ನ್ಯಾಯಾಲಯ ಶಾಕ್ ನೀಡಿದೆ.
ನಿನ್ನೆ ಹರಿದಾಡಿದ್ದ ಸುದ್ದಿಯ ಪ್ರಕಾರ, ತೆಲಂಗಾಣ ನ್ಯಾಯಾಲಯವೇ ‘ದಿ ರಾಜಾ ಸಾಬ್’ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ ಎನ್ನಲಾಗಿತ್ತು. ಆದರೆ ಇದೀಗ ತೆಲಂಗಾಣ ಹೈಕೋರ್ಟ್, ‘ದಿ ರಾಜಾ ಸಾಬ್’ ಸಿನಿಮಾದ ಟಿಕೆಟ್ ಹೆಚ್ಚಳವನ್ನು ಟೀಕೆ ಮಾಡಿದ್ದು, ಸರ್ಕಾರಿ ಆದೇಶ 120ರ ಪ್ರಕಾರ ಸಿನಿಮಾದ ಟಿಕೆಟ್ ದರ 350ಕ್ಕೂ ಹೆಚ್ಚಿರಬಾರದು ಎಂದಿದೆ. ಅಲ್ಲದೆ, ‘ದಿ ರಾಜಾ ಸಾಬ್’ ಸಿನಿಮಾಕ್ಕೆ ನೀಡಲಾಗಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಹಿಂದೆ ‘ಅಖಂಡ 2’ ಸಿನಿಮಾದ ಬಿಡುಗಡೆ ಸಮಯದಲ್ಲಿ ತೆಲಂಗಾಣದಲ್ಲಿ ಸರ್ಕಾರವು ಟಿಕೆಟ್ ಹೆಚ್ಚಳಕ್ಕೆ ಅನುಮತಿ ನೀಡಿತ್ತು, ಅದನ್ನು ಖಂಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡುವಂತಿಲ್ಲ ಎಂದಿತ್ತು. ಒಂದೊಮ್ಮೆ ಟಿಕೆಟ್ ದರ ಹೆಚ್ಚಿಸಬೇಕಾಗಿದ್ದರೂ 350 ರೂಪಾಯಿಗಳಿಗೆ ಹೆಚ್ಚಿಲ್ಲದಂತೆ ಮಾತ್ರವೇ ಟಿಕೆಟ್ ದರ ಹೆಚ್ಚಿಸಬೇಕು ಎಂದಿತ್ತು. ಆದರೆ ಈಗ ಪ್ರಭಾಸ್ ಸಿನಿಮಾದ ಟಿಕೆಟ್ ದರ 450 ರಿಂದ 510 ರೂಪಾಯಿಗಳಿವೆ.
ಇದನ್ನೂ ಓದಿ:ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ
‘ದಿ ರಾಜಾ ಸಾಬ್’ ಸಿನಿಮಾಕ್ಕೆ ಮೊದಲ ಕೆಲವು ಶೋಗಳಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಆದರೆ ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ. ಸಿನಿಮಾ ಚೆನ್ನಾಗಿಲ್ಲವೆಂದು ಹಲವು ವಿಮರ್ಶಕರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಿನಿಮಾದ ಕಲೆಕ್ಷನ್ ನಾಳೆಯಿಂದ ಕಡಿಮೆ ಆಗುವ ಸಾಧ್ಯತೆ ಇದೆ. ಅಂಥಹುದರಲ್ಲಿ ನ್ಯಾಯಾಲಯ ಸಹ ಟಿಕೆಟ್ ದರವನ್ನು ಕಡಿಮೆಗೊಳಿಸುವಂತೆ ಆದೇಶ ನೀಡಿರುವುದು ಸಿನಿಮಾದ ನಿರ್ಮಾಪಕರಿಗೆ ಭಾರಿ ಹೊಡೆತ ನೀಡುವ ಸಾಧ್ಯತೆ ಇದೆ.
‘ದಿ ರಾಜಾ ಸಾಬ್’ ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿಧಿ ಕುಮಾರ್ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಸಂಜಯ್ ದತ್, ಬೊಮನ್ ಇರಾನಿ ಅವರುಗಳು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಮಾರುತಿ ನಿರ್ದೇಶನ ಮಾಡಿದ್ದು, ಪೀಪಲ್ಸ್ ಮೀಡಿಯಾ ಫ್ಯಾಕ್ಟರ್ ನಿರ್ಮಾಣ ಮಾಡಿದೆ. ಇದು ಹಾರರ್ ಕಾಮಿಡಿ ಜಾನರ್ನ ಸಿನಿಮಾ ಆಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




