ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ; ಹಳೆಯ ಪೋಸ್ಟ್ ವೈರಲ್

Puneeth Rajkumar: ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ಈ ಲಸಿಕೆ ಪಡೆಯಬೇಡಿ ಎಂದು ಅವರು ಪುನೀತ್ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದರು.

ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ; ಹಳೆಯ ಪೋಸ್ಟ್ ವೈರಲ್
ಪುನೀತ್

Updated on: May 03, 2024 | 10:56 AM

ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ (Corona) ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ ರಾಜ್​ಕುಮಾರ್ (Puneeth Rajkumar) ಕುರಿತ ಪೋಸ್ಟ್ ಒಂದು ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.


ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್​ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಆಸ್ಟ್ರಾಜೆನೆಕಾ ಕೋವಿಶೀಲ್ಡ್‌ ಹೆಸರಲ್ಲಿ ಲಸಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಚರ್ಚೆ ಜೋರಾಗಿದೆ. ಕೋವಿಶೀಲ್ಡ್​ಗಳಿಂದ ಬ್ಲಡ್ ಕ್ಲಾಟ್ ಆಗಲಿದ್ದು, ಇವು​ಗಳಿಂದ ಹೃದಯಸ್ಥಂಬನ ಅಥವಾ ಪಾರ್ಶವಾಯು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Fri, 3 May 24

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us