ಧ್ರುವ್ ವಿಕ್ರಮ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ಅನುಪಮಾ ಪರಮೇಶ್ವರನ್

‘ಕ್ರೇಜಿ ಕಲ್ಯಾಣಂ’ ಚಿತ್ರದ ಟೀಸರ್ ರಿಲೀಸ್ ವೇಳೆ ನಟಿ ಅನುಪಮಾ ಪರಮೇಶ್ವರನ್ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಎದುರಾದ ಪ್ರಶ್ನೆಗೂ ಉತ್ತರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಗಮನಿಸಿದರೆ ಬ್ರೇಕಪ್ ಆಗಿರುವುದು ಸ್ಪಷ್ಟವಾಗುತ್ತದೆ. ಆ ಬಗ್ಗೆ ಅವರು ವೇದಿಕೆಯಲ್ಲಿ ಪ್ರತಿಕ್ರಿಯೆ ನೀಡಿದರು.

ಧ್ರುವ್ ವಿಕ್ರಮ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ಅನುಪಮಾ ಪರಮೇಶ್ವರನ್
Anupama Parameswaran

Updated on: Aug 02, 2026 | 7:21 AM

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ತಮ್ಮ ಬ್ರೇಕಪ್ (Breakup) ವದಂತಿಗಳ ಕುರಿತು ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಅವರು, ಕಳೆದ ಒಂದು ವರ್ಷ ತಮಗೆ ಭಾವನಾತ್ಮಕವಾಗಿ ಅತ್ಯಂತ ಕಷ್ಟಕರವಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಅನುಪಮಾ ಪರಮೇಶ್ವರನ್ ಅವರು ‘ಕ್ರೇಜಿ ಕಲ್ಯಾಣಂ’ (Crazy Kalyanam) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವಾಗ ತಮ್ಮ ಕಷ್ಟದ ದಿನಗಳ ಬಗ್ಗೆ ಮಾತನಾಡಿದರು.

‘ನನಗಾಗಿ ಜೀವಿಸಲು ನಿರ್ಧರಿಸಿದ್ದೇನೆ’

ತಮ್ಮ ವೈಯಕ್ತಿಕ ಜೀವನದ ಮೇಲಿನ ವದಂತಿಗಳನ್ನು ನೇರವಾಗಿ ಖಚಿತಪಡಿಸದ ಅಥವಾ ನಿರಾಕರಿಸದ ಅನುಪಮಾ, ‘ಕಳೆದ ಒಂದು ವರ್ಷ ಬಹಳ ಸವಾಲಿನಿಂದ ಕೂಡಿತ್ತು. ಈ ಹಂತದಲ್ಲಿ ನಾನು ನನ್ನನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದೆ. ಇಷ್ಟು ದಿನ ಬೇರೆಯವರಿಗಾಗಿ ಬದುಕುತ್ತಿದ್ದ ನಾನು, ಈಗ ನನಗಾಗಿ ಜೀವಿಸಲು ಮತ್ತು ನನ್ನ ಜೀವನದ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಲು ಆರಂಭಿಸಿದ್ದೇನೆ’ ಎಂದು ಹೇಳಿದ್ದಾರೆ.

ಪ್ರಸ್ತುತ ತಾವು ನೆಮ್ಮದಿಯ ಜೀವನ ನಡೆಸುತ್ತಿದ್ದು, ಹಳೆಯ ಘಟನೆಗಳನ್ನು ನೆನಪಿಸಿಕೊಳ್ಳುವ ಬದಲು ಭವಿಷ್ಯದತ್ತ ಗಮನ ಹರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ತಮ್ಮ ವೈಯಕ್ತಿಕ ಜೀವನದ ಪ್ರತಿಯೊಂದು ವಿಚಾರವನ್ನೂ ಸಾರ್ವಜನಿಕವಾಗಿ ವಿವರಿಸಲು ಇಷ್ಟಪಡುವುದಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಅನುಪಮಾ ಅವರು ಈಗ ಖುಷಿಯಾಗಿದ್ದಾರೆ ಎಂಬ ವಿಷಯವು ಅಭಿಮಾನಿಗಳಿಗೆ ನೆಮ್ಮದಿ ತಂದಿದೆ.

ಧ್ರುವ್ ವಿಕ್ರಮ್ ಜೊತೆಗಿನ ವದಂತಿ:

‘ಬೈಸನ್’ ಸಿನಿಮಾದಲ್ಲಿ ತಮಿಳು ನಟ ಧ್ರುವ್ ವಿಕ್ರಮ್ ಅವರೊಂದಿಗೆ ಅನುಪಮಾ ನಟಿಸಿದ ನಂತರ ಇಬ್ಬರ ನಡುವೆ ಪ್ರೇಮಸಂಬಂಧವಿದೆ ಎಂಬ ವದಂತಿಗಳು ಬಲವಾಗಿದ್ದವು. ಇತ್ತೀಚೆಗೆ ಅನುಪಮಾ ಇನ್‌ಸ್ಟಾಗ್ರಾಮ್‌ನಲ್ಲಿ ಧ್ರುವ್ ಅವರನ್ನು ಅನ್‌ಫಾಲೋ ಮಾಡಿದ್ದು ಹಾಗೂ ಭಾವುಕ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು ಈ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ನೀಡಿತ್ತು. ಆದರೆ, ಈ ಜೋಡಿ ಈವರೆಗೆ ತಮ್ಮ ಸಂಬಂಧದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಇದನ್ನೂ ಓದಿ: ಅನುಪಮಾ ಪರಮೇಶ್ವರನ್​​ಗೆ ಕಿರುಕುಳ ನೀಡಿದ 20 ವರ್ಷದ ಹುಡುಗಿ; ಕೇಸ್ ಜಡಿದ ನಟಿ

ಸಿನಿಮಾ ರಂಗದಲ್ಲೂ ಸವಾಲು:

ಅನುಪಮಾ ಕಳೆದ ವರ್ಷ ತೆಲುಗಿನಲ್ಲಿ ನಟಿಸಿದ್ದ ‘ಪರದಾ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸೋಲು ಕಂಡಿತ್ತು. ಪ್ರಸ್ತುತ ಅವರು ‘ಕ್ರೇಜಿ ಕಲ್ಯಾಣಂ’ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ತರುಣ್ ಭಾಸ್ಕರ್, ನರೇಶ್, ಅಖಿಲ್ ರಾಜ್, ಕಿರೀಟಿ ಮುಂತಾದವರು ಅಭಿನಯಿಸಿದ್ದಾರೆ. ಈಗ ಬಿಡುಗಡೆ ಆಗಿರುವ ಟೀಸರ್ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us