AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟರ್​ ಶ್ರೀಶಾಂತ್​ ಈಗ ಮೊಹಮ್ಮದ್​ ಮೊಬಿ; ಹೊಸ ಜರ್ನಿಗೆ ಶುಭಕೋರಿದ ಸೆಲೆಬ್ರಿಟಿಗಳು

‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಶ್ರೀಶಾಂತ್​ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಕೌತುಕ ಅನೇಕರಿಗೆ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ.

ಕ್ರಿಕೆಟರ್​ ಶ್ರೀಶಾಂತ್​ ಈಗ ಮೊಹಮ್ಮದ್​ ಮೊಬಿ; ಹೊಸ ಜರ್ನಿಗೆ ಶುಭಕೋರಿದ ಸೆಲೆಬ್ರಿಟಿಗಳು
ಶ್ರೀಶಾಂತ್
TV9 Web
| Updated By: ಮದನ್​ ಕುಮಾರ್​|

Updated on:Feb 10, 2022 | 10:11 AM

Share

ಕ್ರಿಕೆಟ್​ ಜಗತ್ತಿನಲ್ಲಿ ಜನಪ್ರಿಯತೆ ಗಳಿಸಿದ ಶ್ರೀಶಾಂತ್​ (Sreesanth) ಅವರು ಈಗ ಬಣ್ಣದ ಲೋಕದಲ್ಲೂ ಸಕ್ರಿಯರಾಗಿದ್ದಾರೆ. ನಟನೆ ಬಗ್ಗೆ ಅವರಿಗೆ ತುಂಬ ಉತ್ಸಾಹ ಇದೆ. ಈ ಮೊದಲೇ ಅನೇಕ ಜಾಹೀರಾತುಗಳಲ್ಲಿ ನಟಿಸಿದ್ದ ಅವರು ಈಗ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಅವರಿಗೆ ಸ್ಟಾರ್​ ನಟ-ನಟಿಯರ ಜೊತೆಗೆ ಅಭಿನಯಿಸುವ ಅವಕಾಶ ಸಿಗುತ್ತಿರುವುದು ವಿಶೇಷ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಸಮಂತಾ, ನಯನತಾರಾ ಮತ್ತು ವಿಜಯ್​ ಸೇತುಪತಿ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಅದೇ ಸಿನಿಮಾದಲ್ಲಿ ಶ್ರೀಶಾಂತ್​ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಕೌತುಕ ಅನೇಕರಿಗೆ ಇತ್ತು. ಅದಕ್ಕೂ ಈಗ ಉತ್ತರ ಸಿಕ್ಕಿದೆ. ಇತ್ತೀಚೆಗೆ ಶ್ರೀಶಾಂತ್​ ಅವರು ಹುಟ್ಟುಹಬ್ಬ (ಫೆ.7) ಆಚರಿಸಿಕೊಂಡರು. ಆ ಸಲುವಾಗಿ ‘ಕಾದು ವಾಕುಲ ರೆಂಡು ಕಾದಲ್​’ (Kaathu Vaakula Rendu Kaadhal) ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಆ ಪೋಸ್ಟರ್​ನಲ್ಲಿ ಶ್ರೀಶಾಂತ್​ ಅವರ ಪಾತ್ರದ ಬಗ್ಗೆ ಮಾಹಿತಿ ನೀಡಲಾಗಿದೆ. ಮೊಹಮ್ಮದ್​ ಮೊಬಿ ಎಂಬ ಪಾತ್ರದಲ್ಲಿ ಶ್ರೀಶಾಂತ್​ ಕಾಣಿಸಿಕೊಳ್ಳಲಿದ್ದಾರೆ. ಅವರ ಸಿನಿಮಾ ಜರ್ನಿಗೆ ಅನೇಕರು ಶುಭ ಕೋರಿದ್ದಾರೆ.

‘ಕ್ರಿಕೆಟ್​ ಮೈದಾನದಲ್ಲಿ ನಿಜವಾದ ಚಾಂಪಿಯನ್​ ಆಗಿದ್ದ ಶ್ರೀಶಾಂತ್ ಅವರು ಬೆಳ್ಳಿಪರದೆಯಲ್ಲೂ ಆಳ್ವಿಕೆ ಮಾಡಲಿದ್ದಾರೆ. ಶ್ರೀಶಾಂತ್​ ಅವರನ್ನು ಮೊಹಮ್ಮದ್​ ಮೊಬಿ ಆಗಿ ಪರಿಚಯಿಸುತ್ತಿದ್ದೇವೆ’ ಎಂದು ಚಿತ್ರತಂಡದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಲಾಗಿದೆ.

ಈ ಸಿನಿಮಾದಲ್ಲಿ ಶ್ರೀಶಾಂತ್​ ಮತ್ತು ಸಮಂತಾ ಮುಖಾಮುಖಿ ಆಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಪ್ರತಿಬಾರಿಯೂ ತಮ್ಮ ಪಾತ್ರದ ಮೂಲಕ ಪ್ರೇಕ್ಷಕರಿಗೆ ಸರ್ಪ್ರೈಸ್​ ನೀಡುತ್ತಿರುವ ಸಮಂತಾ ಅವರು ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಯಾವ ರೀತಿಯ ಪಾತ್ರವನ್ನು ನಿಭಾಯಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳಲ್ಲಿ ಮನೆ ಮಾಡಿದೆ. ತಮ್ಮ ನೆಚ್ಚಿನ ನಟಿ ಯಾವ ರೀತಿ ಸರ್ಪ್ರೈಸ್​ ನೀಡುತ್ತಾರೆ ಎಂಬುದನ್ನು ತಿಳಿಯಲು ಏಪ್ರಿಲ್​ವರೆಗೂ ಕಾಯಬೇಕಿದೆ. ಫೆ.11ರಂದು ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡುವುದಾಗಿ ವಿಘ್ನೇಶ್​ ಶಿವನ್​ ಘೋಷಿಸಿದ್ದಾರೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

ಮತ್ತೆ ಹಳೆ ಚಾಳಿ ಮುಂದುವರೆಸಿದ ಶ್ರೀಶಾಂತ್.. ಇದಕ್ಕೆ 19ರ ಪೋರನ ಉತ್ತರ ಹೇಗಿತ್ತು? ವಿಡಿಯೋ ನೋಡಿ..

Published On - 9:58 am, Thu, 10 February 22

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ