The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿನ ಮಾಹಿತಿ ನಿಜ ಅಂತ ಸಾಬೀತು ಮಾಡಿದ್ರೆ 1 ಕೋಟಿ ರೂ. ಬಹುಮಾನ

Adah Sharma: ‘ದಿ ಕೇರಳ ಸ್ಟೋರಿ’ ಸಿನಿಮಾ ಕುರಿತಂತೆ ಕೇರಳದಲ್ಲಿ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಈ ಚಿತ್ರದಲ್ಲಿನ ಮಾಹಿತಿ ನಿಜವೋ ಅಥವಾ ಸುಳ್ಳೋ ಎಂಬ ಪ್ರಶ್ನೆ ಎದುರಾಗಿದೆ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿನ ಮಾಹಿತಿ ನಿಜ ಅಂತ ಸಾಬೀತು ಮಾಡಿದ್ರೆ 1 ಕೋಟಿ ರೂ. ಬಹುಮಾನ
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್​
Follow us
|

Updated on: May 02, 2023 | 3:47 PM

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅದಾ ಶರ್ಮಾ (Adah Sharma) ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದಲ್ಲಿನ ವಿಷಯಗಳು ವಿವಾದ ಹುಟ್ಟುಹಾಕಿವೆ. ಕೇರಳದಲ್ಲಿನ ಸಾವಿರಾರು ಮಹಿಳೆಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ (Conversion) ಮಾಡಿ ನಂತರ ಐಸಿಸ್​ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎಂಬ ವಿಷಯವನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ಅದೇ ಈಗ ವಿವಾದಕ್ಕೆ ಕಾರಣ ಆಗಿದೆ. ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಆ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ. ಇಷ್ಟೆಲ್ಲ ವಿವಾದ ಎಬ್ಬಿಸಿರುವ ಈ ಸಿನಿಮಾದಲ್ಲಿ ಇರುವ ಮಾಹಿತಿ ನಿಜವೋ ಸುಳ್ಳೋ ಎಂಬ ಬಗ್ಗೆ ಚರ್ಚೆ ಆಗುತ್ತಿದೆ. ಇದರಲ್ಲಿನ ಮಾಹಿತಿ ನಿಜ ಎಂದು ಸಾಬೀತು ಮಾಡಿದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮುಸ್ಲಿಂ ಯೂತ್​ ಲೀಗ್​ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಸುದೀಪ್ತೊ ಸೇನ್ ನಿರ್ದೇಶನ ಮಾಡಿದ್ದಾರೆ. ವಿಫುಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಅದಾ ಶರ್ಮಾ ಜೊತೆ ಯೋಗಿತಾ ಬಿಹಾನಿ, ಸೋನಿಯಾ ಬಲಾನಿ, ಸಿದಿ ಇದ್ನಾನಿ ಮುಂತಾದವರು ನಟಿಸಿದ್ದಾರೆ. ಮೇ 5ರಂದು ‘ದಿ ಕೇರಳ ಸ್ಟೋರಿ’ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
Image
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
Image
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
Image
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ಈ ಸಿನಿಮಾ ಕುರಿತಂತೆ ಕೇರಳದಲ್ಲಿ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಈ ಚಿತ್ರದಲ್ಲಿನ ಮಾಹಿತಿ ನಿಜ ಎಂಬುದನ್ನು ಸಾಬೀತು ಮಾಡಿದರೆ ಬರೋಬ್ಬರಿ 1 ಕೋಟಿ ರೂಪಾಯಿ ನೀಡುವುದಾಗಿ ಮುಸ್ಲಿಂ ಯೂತ್​ ಲೀಗ್​ ಕೇರಳ ರಾಜ್ಯ ಕಮಿಟಿ ಘೋಷಿಸಿದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಕೂಡ ಪ್ರತಿಕ್ರಿಯೆ ನೀಡಿವೆ. ಮಾಹಿತಿ ಸುಳ್ಳು ಎಂದು ಸಾಬೀತು ಮಾಡಿದರೆ 10 ಕೋಟಿ ರೂಪಾಯಿ ನೀಡುವುದಾಗಿ ಹಿಂದೂ ಸೇವಾ ಕೇಂದ್ರದ ಸ್ಥಾಪಕ ಪ್ರತೀಶ್​ ವಿಶ್ವನಾಥ್​ ಘೋಷಿಸಿದ್ದಾರೆ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ’ ಟ್ರೇಲರ್​ನಲ್ಲಿ ಐಸಿಸ್ ಕಥೆ; ಗಮನ ಸೆಳೆದ ನಟಿ ಅದಾ ಶರ್ಮಾ

‘ದಿ ಕೇರಳ ಸ್ಟೋರಿ’ ಸಿನಿಮಾ ನೈಜ ಘಟನೆ ಆಧಾರಿತವಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ. 2022ರಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕೂಡ ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಅದೇ ರೀತಿ ‘ದಿ ಕೇರಳ ಸ್ಟೋರಿ’ ಕೂಡ ಹೈಪ್​ ಪಡೆಯುವ ಸಾಧ್ಯತೆ ಇದೆ. ಈ ಚಿತ್ರವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ