AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್ ಸಿನಿಮಾ ‘ಮದರ್ ಪ್ರಾಮಿಸ್’ ಬಿಡುಗಡೆಗೆ ದಿನಾಂಕ ನಿಗದಿ

Daali Dhananjay movie: ಡಾಲಿಯ ‘ಮದರ್ ಪ್ರಾಮಿಸ್’ ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ ಭಿನ್ನವಾಗಿದೆ. ಹೀಗಾಗಿ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಡಾಲಿ ಧನಂಜಯ್ ಸಿನಿಮಾ ‘ಮದರ್ ಪ್ರಾಮಿಸ್’ ಬಿಡುಗಡೆಗೆ ದಿನಾಂಕ ನಿಗದಿ
Daali Dhananjay
ಮಂಜುನಾಥ ಸಿ.
|

Updated on:Jun 23, 2026 | 1:29 PM

Share

ಡಾಲಿ ಧನಂಜಯ್ (Daali Dhananjay) ಮತ್ತು ಅವರ ಹಲವು ಗೆಳೆಯರು ಒಟ್ಟಿಗೆ ಸೇರಿ ನಟಿಸಿರುವ ಸಿನಿಮಾ ‘ಮದರ್ ಪ್ರಾಮಿಸ್’ ಪೋಸ್ಟರ್, ಹಾಡು ಮತ್ತು ಹೆಸರಿನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ ಭಿನ್ನವಾಗಿದೆ. ಹೀಗಾಗಿ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

‘ಮದರ್ ಪ್ರಾಮಿಸ್’ ಸಿನಿಮಾವು ಜುಲೈ 10 ರಂದು ಬಿಡುಗಡೆ ಆಗಲಿದೆ. ಸಿನಿಮಾವು ಹಾಸ್ಯಮಯ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಸೆಂಟಿಮೆಂಟ್ ಅಂಶಗಳು ಸಹ ಇರಲಿವೆ. ಸಿನಿಮಾವನ್ನು ನಟ ಮೈಸೂರು ಪೂರ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಡಾಲಿ ಧನಂಜಯ್, ಮೈಸೂರು ಪೂರ್ಣ ಸೇರಿದಂತೆ ಹಲವಾರು ಕಲಾವಿದರಿದ್ದಾರೆ. ವಿನಯಾ ಪ್ರಸಾದ್ ಅಮ್ಮನ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಗೀತಾ ಅವರು ಸಹ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಡಾಲಿ ಧನಂಜಯ್, ‘ಡಿಸ್ಟ್ರಿಬ್ಯೂಟರ್ ಲಾಕ್ ಆಗಿದ್ದಾರೆ. ಡೇಟ್ ಫಿಕ್ಸ್ ಆಗಿದೆ. ಹತ್ತಿರದ ಥಿಯೇಟರ್​​ಗಳಲ್ಲಿ ಜುಳೈ 10 ರಿಂದ ಆಟ ಶುರು’ ಎಂದಿದ್ದಾರೆ. ಡಾಲಿ ಅವರ ಪೋಸ್ಟ್​​ಗೆ ಸಾಕಷ್ಟು ಅಭಿಮಾನಿಗಳು ಕಮೆಂಟ್ ಮಾಡಿ ಸಿನಿಮಾಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಪೋಸ್ಟರ್ ಚೆನ್ನಾಗಿದೆ ಎಂದು ಸಹ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ:ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್

‘ಮದರ್ ಪ್ರಾಮಿಸ್’ ಸಿನಿಮಾ ಹಾಸ್ಯ ಪ್ರಧಾನ ರೌಡಿಗಳ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ‘ರೋಸಿ’, ‘ದೊನ್ನೆ ಬಿರಿಯಾನಿ’, ‘ರ್ಯಾಂಡಿ’, ‘ಕ್ಯಾಂಡಿ’, ‘ಮ್ಯಾಗಿ’, ‘7 ಅಪ್’, ‘ಜಿಲೇಬಿ’, ‘ಬ್ಯಾಂಡೆಡ್’ ಇನ್ನೂ ಹಲವು ಭಿನ್ನ ಹಾಗೂ ವಿಚಿತ್ರ ಹೆಸರುಗಳ ಪಾತ್ರಗಳು ಸಿನಿಮಾನಲ್ಲಿವೆ. ಸೀಮಿತ ಅವಧಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾ ಬಿಡುಗಡೆ ಆದ ಬಳಿಕವಷ್ಟೆ ಎಲ್ಲದಕ್ಕೂ ಉತ್ತರ ಸಿಗಲಿದೆ. ‘ಮದರ್ ಪ್ರಾಮಿಸ್’ ಸಿನಿಮಾ ಅನ್ನು ಮೈಸೂರು ಪೂರ್ಣ ನಿರ್ದೇಶಿಸಿದ್ದು, ಸಿನಿಮಾಕ್ಕೆ ನವನೀತ್ ಶ್ಯಾಮ್ ಸಂಗೀತ ನೀಡಿದ್ದಾರೆ. ಧನಂಜಯ್ ಜೊತೆಗೆ ಹರ್ಷ್ ಅವರು ಸಹ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಪ್ರದೀಪ್ ರಾವ್ ಸಂಕಲನವಿದೆ.

ಡಾಲಿ ಧನಂಜಯ್ ಹಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹಲಗಲಿ’, ‘ಉತ್ತರಕಾಂಡ’, ‘ಅಣ್ಣಾ ಫ್ರಂ ಮೆಕ್ಸಿಕೊ’ ಸೇರಿದಂತೆ ಒಂದು ಪರಭಾಷೆ ಸಿನಿಮಾನಲ್ಲಿಯೂ ಡಾಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಒಟ್ಟಿಗೆ ಮೂರು ಸಿನಿಮಾಗಳ ಮೇಲೆ ಹೂಡಿಕೆಯನ್ನು ಸಹ ಡಾಲಿ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Tue, 23 June 26

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್