AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್ ಪ್ಯಾನ್ ಇಂಡಿಯಾ ಸಿನಿಮಾ, ‘ಜೀಬ್ರಾ’ ಲುಕ್ ಬಿಡುಗಡೆ

Daali Dhananjay: ಡಾಲಿ ಧನಂಜಯ್ ಇಂದು (ಆಗಸ್ಟ್ 23) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಹುಟ್ಟುಹಬ್ಬದ ಪ್ರಯುಕ್ತ ಡಾಲಿ ನಟನೆಯ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ 'ಜೀಬ್ರಾ'ದ ಪೋಸ್ಟರ್ ಬಿಡುಗಡೆ ಆಗಿದೆ.

ಡಾಲಿ ಧನಂಜಯ್ ಪ್ಯಾನ್ ಇಂಡಿಯಾ ಸಿನಿಮಾ, 'ಜೀಬ್ರಾ' ಲುಕ್ ಬಿಡುಗಡೆ
ಜೀಬ್ರಾ-ಡಾಲಿ
ಮಂಜುನಾಥ ಸಿ.
|

Updated on:Aug 23, 2023 | 6:09 PM

Share

ಡಾಲಿ ಧನಂಜಯ್ (Daali Dhananjay) ಇಂದು (ಆಗಸ್ಟ್ 23) ತಮ್ಮ ಹುಟ್ಟುಹಬ್ಬವನ್ನು (Birthday) ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ನಾಲ್ಕು ವರ್ಷಗಳಿಂದ ವಿವಿಧ ಕಾರಣಕ್ಕೆ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ದ ನಟ ಡಾಲಿ ಧನಂಜಯ್ ಈ ಬಾರಿ ಬಹು ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಅದಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದ್ದು ರಾಜ್ಯದ ಹಲವು ಜಿಲ್ಲೆಗಳಿಂದ ಡಾಲಿ ಅಭಿಮಾನಿಗಳು ಆಗಮಿಸಿ ಮೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.

ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಅವರ ಸಿನಿಮಾಗಳ ಅಪ್​ಡೇಟ್​ಗಳು, ಹೊಸ ಸಿನಿಮಾ ಪೋಸ್ಟರ್​ಗಳು ಸಹ ಬಿಡುಗಡೆ ಆಗಿವೆ. ಡಾಲಿ ನಟನೆಯ ‘ಉತ್ತರಕಾಂಡ’ ಸಿನಿಮಾ ಟೀಸರ್ ನಿನ್ನೆಯೇ ಬಿಡುಗಡೆ ಆಗಿದೆ. ಇಂದು ಡಾಲಿಯ ಹೊಸ ಸಿನಿಮಾ ‘ಅಣ್ಣಾ ಫ್ರಮ್ ಮೆಕ್ಸಿಕೋ’ದ ಪೋಸ್ಟರ್ ಬಿಡುಗಡೆ ಆಗಿದೆ. ಇದರ ಜೊತೆಗೆ ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ.

ಡಾಲಿ ಧನಂಜಯ್ ನಟಿಸಿರುವ ‘ಜೀಬ್ರಾ’ ಸಿನಿಮಾದ ಡಾಲಿಯ ಪೋಸ್ಟರ್ ಅನ್ನು ಅವರ ಹುಟ್ಟುಹಬ್ಬದ ಸಂದರ್ಭ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ‘ಜೀಬ್ರಾ’ ಸಿನಿಮಾವು ಆರ್ಥಿಕ ಅಪರಾಧದ ಕತೆಯನ್ನು ಒಳಗೊಂಡಿದೆ. ಡಾಲಿ ಧನಂಜಯ್ ಅವರದ್ದು ಡಾರ್ಕ್ ಶೇಡ್ ಇರುವ ಮುಖ್ಯ ಪಾತ್ರ ಎನ್ನಲಾಗುತ್ತಿದೆ.

ಇದನ್ನೂ ಓದಿ:ಅದ್ದೂರಿಯಾಗಿ ನಡೆಯುತ್ತಿದೆ ಡಾಲಿ ಧನಂಜಯ್​ ಬರ್ತ್​ಡೇ ಸೆಲೆಬ್ರೇಷನ್​; ಅಭಿಮಾನಿಗಳಿಗೆ ಭರ್ಜರಿ ಊಟ

‘ಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.

ಡಾಲಿ ಧನಂಜಯ್ ನಟಿಸುತ್ತಿರುವ ಎರಡನೇ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಈ ಹಿಂದೆ ಡಾಲಿ ನಟಿಸಿರುವ ‘ಪುಷ್ಪ’ ತೆಲುಗು ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿತ್ತು. ಇದೀಗ ‘ಜೀಬ್ರಾ’ ಸಿನಿಮಾ ಸಹ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಈ ಸಿನಿಮಾ ಸಹ ಬಾಕ್ಸ್ ಆಫೀಸ್​ನಲ್ಲಿ ಮ್ಯಾಜಿಕ್ ಮಾಡುವ ವಿಶ್ವಾಸವಿದೆ. ಜೊತೆಗೆ ಈ ಸಿನಿಮಾ ಮೂಲಕ ಡಾಲಿಯ ಪ್ರತಿಭೆಯ ಅನಾವರಣ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಆಗಲಿದೆ.

‘ಜೀಬ್ರಾ’ ಹೊರತುಪಡಿಸಿ ಡಾಲಿ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ‘ಉತ್ತರಕಾಂಡ’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಕೆಲವೇ ದಿನಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ‘ಪುಷ್ಪ 2’ ಸಿನಿಮಾದಲ್ಲಿಯೂ ಡಾಲಿ ಇರಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Wed, 23 August 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!