ತೆರೆಗೆ ಬರುತ್ತಿದೆ ‘ದಾದಾ’ನ ದಾದಾಗಿರಿ, ಬಿಡುಗಡೆ ದಿನಾಂಕ ಘೋಷಣೆ

Dada The Saurav Ganguly story: ಕ್ರಿಕೆಟ್ ತಂಡಕ್ಕೆ ‘ವಿನ್ನಿಂಗ್ ಮೈಂಡ್​​ಸೆಟ್’ ತೋರಿಸಿಕೊಟ್ಟ ನಾಯಕ. ವಿಶ್ವಕಪ್ ಗೆದ್ದಿಲ್ಲವಾದರೂ ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಮೊದಲಿಗರು ಎನ್ನಬಹುದು ಸೌರವ್ ಗಂಗೂಲಿ ಅವರನ್ನು. ಇದೀಗ ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕನ ಜೀವನ ಕುರಿತಾದ ಕತೆ ಸಿನಿಮಾ ಆಗಿದೆ. ಮಾತ್ರವಲ್ಲದೆ ಇಂದು (ಜುಲೈ 8) ಸೌರವ್ ಗಂಗೂಲಿ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

ತೆರೆಗೆ ಬರುತ್ತಿದೆ ‘ದಾದಾ’ನ ದಾದಾಗಿರಿ, ಬಿಡುಗಡೆ ದಿನಾಂಕ ಘೋಷಣೆ
Saurav Ganguly

Updated on: Jul 08, 2026 | 12:07 PM

ಸೌರವ್ ಗಂಗೂಲಿ (Saurav Ganguly), ಭಾರತ ಕ್ರಿಕೆಟ್​​ನ ನಂಬರ್ 1 ನಾಯಕ. ಭಾರತ ಕ್ರಿಕೆಟ್ ಚಹರೆಯನ್ನೇ ಬದಲಾಯಿಸಿದ ವ್ಯಕ್ತಿ. ಅದ್ಭುತ ಬ್ಯಾಟ್ಸ್​​ಮನ್ ಆಗಿದ್ದ ಜೊತೆಗೆ ಭಾರತ ಕ್ರಿಕೆಟ್ ತಂಡಕ್ಕೆ ‘ವಿನ್ನಿಂಗ್ ಮೈಂಡ್​​ಸೆಟ್’ ತೋರಿಸಿಕೊಟ್ಟ ನಾಯಕ. ವಿಶ್ವಕಪ್ ಗೆದ್ದಿಲ್ಲವಾದರೂ ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಮೊದಲಿಗರು ಎನ್ನಬಹುದು ಸೌರವ್ ಗಂಗೂಲಿ ಅವರನ್ನು. ಇದೀಗ ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕನ ಜೀವನ ಕುರಿತಾದ ಕತೆ ಸಿನಿಮಾ ಆಗಿದೆ. ಮಾತ್ರವಲ್ಲದೆ ಇಂದು (ಜುಲೈ 8) ಸೌರವ್ ಗಂಗೂಲಿ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

ಸೌರವ್ ಗಂಗೂಲಿ ಅವರನ್ನು ಅವರ ಗೆಳೆಯರು, ಕ್ರಿಕೆಟ್ ಸಹವರ್ತಿಗಳು ‘ದಾದಾ’ ಎಂದು ಕರೆಯುತ್ತಿದ್ದರು. ಹಾಗಾಗಿ ಸೌರವ್ ಜೀವನ ಆಧರಿಸಿದ ಸಿನಿಮಾಕ್ಕೆ ಸಹ ಅದೇ ಹೆಸರು ಇಡಲಾಗಿದೆ. ‘ದಾದಾ – ದಿ ಸೌರವ್ ಗಂಗೂಲಿ ಸ್ಟೋರಿ’ ಸಿನಿಮಾನಲ್ಲಿ ಸೌರವ್ ಗಂಗೂಲಿ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​​ಕುಮಾರ್ ರಾವ್ ನಟಿಸಿದ್ದಾರೆ. ಚಿತ್ರದ ಫಸ್ಟ್-ಲುಕ್ ಪೋಸ್ಟರ್ ಇಂದು ಬಿಡುಗಡೆ ಆಗಿದ್ದು, ಚಿತ್ರವು 2027ರ ಮೇ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ .

ಈಗ ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ 2002ರಲ್ಲಿ ಇಂಗ್ಲೆಂಡ್ ವಿರುದ್ಧದ ನಾಟ್‌ವೆಸ್ಟ್ ಟ್ರೋಫಿ ಗೆದ್ದ ನಂತರ ಲಾರ್ಡ್ಸ್ ಬಾಲ್ಕನಿಯಲ್ಲಿ ಗಂಗೂಲಿ ಅವರು ಶರ್ಟ್ ಬಿಚ್ಚಿ ಸಂಭ್ರಮಿಸಿದ ಆ ಸುಪ್ರಸಿದ್ಧ ಕ್ಷಣವನ್ನು ಮರುಸೃಷ್ಟಿಸಲಾಗಿದೆ. ಈ ಸಿನಿಮಾನಲ್ಲಿ ಗಂಗೂಲಿ ಅವರ ಯುವ ಕ್ರಿಕೆಟಿಗನಾಗಿದ್ದ ದಿನಗಳಿಂದ ಹಿಡಿದು ಭಾರತದ ಅತ್ಯಂತ ಪ್ರಭಾವಶಾಲಿ ನಾಯಕನಾಗಿ ಬೆಳೆದ ಪ್ರಯಾಣದ ಕತೆ ಇರಲಿದೆ. ಭಾರತ ಕ್ರಿಕೆಟ್ ಮೇಲೆ ಸೌರವ್ ಅವರ ಪ್ರಭಾವ, ತಂದ ಬದಲಾವಣೆಗಳ ಮೇಲೆ ಸಿನಿಮಾದ ಕತೆ ಕೇಂದ್ರೀಕೃತವಾಗಿರಲಿದೆ.

ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಶೂಟಿಂಗ್ ಶುರು; ‘ದಾದಾ’ ಆಟಕ್ಕೆ ಮೈದಾನ ಸಜ್ಜು

‘ದಾದಾ – ದಿ ಸೌರವ್ ಗಂಗೂಲಿ ಸ್ಟೋರಿ’ ಚಿತ್ರವನ್ನು ವಿಕ್ರಮಾದಿತ್ಯ ಮೊಟ್ವಾನಿ ನಿರ್ದೇಶಿಸುತ್ತಿದ್ದು, ಲವ್ ರಂಜನ್ ಮತ್ತು ಅಂಕೂರ್ ಗಾರ್ಗ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗುಲ್ಶನ್ ಕುಮಾರ್, ಭೂಷಣ್ ಕುಮಾರ್, ಟಿ-ಸೀರೀಸ್ ಮತ್ತು ಡಿಬಿಎಲ್ ಪ್ರಸ್ತುತಪಡಿಸುತ್ತಿದ್ದು, ಇದು ಲವ್ ಫಿಲ್ಮ್ಸ್ ನಿರ್ಮಾಣದ ಅಡಿಯಲ್ಲಿ ಬರುತ್ತಿದೆ. ಸಿನಿಮಾನಲ್ಲಿ ರಾಜ್​​ಕುಮಾರ್ ರಾವ್ ಸೌರವ್ ಗಂಗೂಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖುದ್ದು ಗಂಗೂಲಿ ಅವರೇ ಇಂದು ಸಿನಿಮಾದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us