AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ನಟಿಸಲ್ಲ; ಕಠಿಣ ನಿರ್ಧಾರಕ್ಕೆ ಕಾರಣ ತಿಳಿಸಿದ ಅನಂತ್ ನಾಗ್

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಅನಂತ್ ನಾಗ್ ಇನ್ಮುಂದೆ ನಟಿಸದಿರಲು ನಿರ್ಧರಿಸಿದ್ದಾರೆ. ಇತ್ತೀಚಿನ ಕಥೆಗಳ ಗುಣಮಟ್ಟ ಕುಸಿಯುತ್ತಿದ್ದು, ಸಿನಿಮಾಗಳು ಕೇವಲ ಬಾಕ್ಸ್ ಆಫೀಸ್ ಗಳಿಕೆಗೆ ಸೀಮಿತವಾಗಿರುವುದೇ ತಮ್ಮ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. ಅವರಿಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಇತ್ತು. ಅದನ್ನು ಅವರು ಅಲ್ಲಗಳೆದಿದ್ದಾರೆ. 

ಇನ್ಮುಂದೆ ನಟಿಸಲ್ಲ; ಕಠಿಣ ನಿರ್ಧಾರಕ್ಕೆ ಕಾರಣ ತಿಳಿಸಿದ ಅನಂತ್ ನಾಗ್
ಅನಂತ್ ನಾಗ್
ರಾಜೇಶ್ ದುಗ್ಗುಮನೆ
|

Updated on:Sep 18, 2026 | 1:14 PM

Share

ಮುಖ್ಯಾಂಶಗಳು

  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದರೂ ನಟನೆಯಿಂದ ದೂರ
  • ಅನಂತ್ ನಾಗ್ ಅವರ ದಿಢೀರ್ ನಿರ್ಧಾರ
  • ಇಂದಿನ ಸಿನಿಮಾ ಸಂಸ್ಕೃತಿಯ ವಿರುದ್ಧ ಹಿರಿಯ ನಟ ಗರಂ

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಹಿರಿಯ ನಟ ಅನಂತ್ ನಾಗ್, ತಾವು ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶಸ್ತಿ ಬಂದ ಖುಷಿಯ ನಡುವೆಯೇ, ಇಂದಿನ ಸಿನಿಮಾ ರಂಗದ ಬದಲಾದ ಆದ್ಯತೆಗಳು ಮತ್ತು ಕಥೆಗಳ ಕಳಪೆ ಗುಣಮಟ್ಟದ ಬಗ್ಗೆ ಅವರು ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ.

ಚಿತ್ರರಂಗದಲ್ಲಿ ಕಥೆ ಮತ್ತು ವಿಷಯ ಆಧಾರಿತ ಸಿನಿಮಾಗಳಿಗಿಂತ ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಹಾಗೂ ಹಣಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಅನಂತ್ ನಾಗ್ ವಿಮರ್ಶಿಸಿದ್ದಾರೆ. ಇತ್ತೀಚೆಗೆ ಕಥೆಗಳ ಗುಣಮಟ್ಟ ಸಂಪೂರ್ಣವಾಗಿ ಕುಸಿಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯ ಅವರಿಗೆ ತೀವ್ರ ಬೇಸರ ಮೂಡಿಸಿದೆ.

‘ನಾನು ಒಪ್ಪಿಕೊಂಡ ಕೊನೆಯ ಐದೂ ಸಿನಿಮಾಗಳು ಸೋತವು. ಆ ಕ್ಷಣವೇ ನನಗೆ ಅನಿಸಿತು – ಇಷ್ಟಕ್ಕೇ ಸಾಕು, ಇದನ್ನೆಲ್ಲಾ ಬಿಟ್ಟುಬಿಡಬೇಕು. ನಾನು ಇನ್ಮುಂದೆ ನಟಿಸಬಾರದು ಎಂದು ನಿರ್ಧರಿಸಿದೆ’ ಎಂದು ತಮ್ಮ ನಿವೃತ್ತಿಯ ಹಿಂದಿನ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ

ಅಲ್ಲದೆ, ತಾವು ನಟನೆಯಿಂದ ದೂರವುಳಿಯಲು ಯಾವುದೇ ಆರೋಗ್ಯ ಸಮಸ್ಯೆ ಕಾರಣವಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಪೀಳಿಗೆಯ ಯಾವುದೇ ಸಮಕಾಲೀನ ನಿರ್ದೇಶಕರ ಜೊತೆ ಕೆಲಸ ಮಾಡಲು ತಮಗೆ ಆಸಕ್ತಿ ಇಲ್ಲ ಎಂದಿರುವ ಅವರು, ಉತ್ತಮ ವಿಷಯ ಮತ್ತು ಪ್ರೇಕ್ಷಕರನ್ನು ಕಡೆಗಣಿಸಿ ಬರೀ ಕಲೆಕ್ಷನ್ ಬೆನ್ನತ್ತಿರುವ ಇಂದಿನ ಸಿನಿಮಾ ಸಂಸ್ಕೃತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅನಂತ್ ನಾಗ್ ಅವರು ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಅವರು ಇಷ್ಟು ಕಠಿಣ ನಿರ್ಧರ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಚಿತ್ರರಂಗಕ್ಕೆ ಮರಳಬೇಕು ಎಂಬುದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:02 pm, Fri, 18 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ