AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​ ಆರೋಗ್ಯದ ದೃಷ್ಟಿಯಿಂದ ‘ನಾರಪ್ಪ’ ಸಿನಿಮಾ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ವೆಂಕಟೇಶ್​

ಸದ್ಯಕ್ಕಂತೂ ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿಲ್ಲ. ಈಗಲೂ ಅಲ್ಲಿ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಹಾಗಿದ್ದರೂ ಕೂಡ ನಾರಪ್ಪ ಚಿತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡದಿರಲು ವೆಂಕಟೇಶ್​​ ನಿರ್ಧರಿಸಿದ್ದಾರೆ.

ಫ್ಯಾನ್ಸ್​ ಆರೋಗ್ಯದ ದೃಷ್ಟಿಯಿಂದ ‘ನಾರಪ್ಪ’ ಸಿನಿಮಾ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ವೆಂಕಟೇಶ್​
ನಾರಪ್ಪ ಚಿತ್ರದಲ್ಲಿ ದಗ್ಗುಬಾಟಿ ವೆಂಕಟೇಶ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Apr 29, 2021 | 4:01 PM

Share

ಕೊರೊನಾ ಹೊಡೆತಕ್ಕೆ ಎಲ್ಲ ಉದ್ಯಮಗಳು ನೆಲಕಚ್ಚುತ್ತಿವೆ. ಕೊವಿಡ್ 19 ಎರಡನೇ ಅಲೆಯ ಭೀಕರತೆಗೆ ಅನೇಕ ರಾಜ್ಯಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಯಾಗಿದೆ. ಈ ಸಂದರ್ಭದಲ್ಲಿ ಸಿನಿಮಾ ಕ್ಷೇತ್ರ ಕೂಡ ತೀವ್ರ ನಷ್ಟ ಅನುಭವಿಸುತ್ತಿದೆ. ಬಹುನಿರೀಕ್ಷಿತ ಸಿನಿಮಾಗಳೆಲ್ಲವೂ ಬಿಡುಗಡೆ ದಿನಾಂಕ ಮುಂದೂಡಿಕೊಂಡಿವೆ. ಈಗ ಟಾಲಿವುಡ್​ ಸ್ಟಾರ್​ ನಟ ದಗ್ಗುಬಾಟಿ ವೆಂಕಟೇಶ್​ ಅವರ ‘ನಾರಪ್ಪ’ ಚಿತ್ರ ಕೂಡ ರಿಲೀಸ್​ ಆಗಲು ಹಿಂದೇಟು ಹಾಕಿದೆ.

ಸದ್ಯಕ್ಕಂತೂ ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿಲ್ಲ. ಈಗಲೂ ಅಲ್ಲಿ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಹಾಗಿದ್ದರೂ ಕೂಡ ನಾರಪ್ಪ ಚಿತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡದಿರಲು ವೆಂಕಟೇಶ್​​ ನಿರ್ಧರಿಸಿದ್ದಾರೆ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಮೇ 14ರಂದು ಈ ಚಿತ್ರ ಬಿಡುಗಡೆ ಆಗುವುದರಲ್ಲಿತ್ತು. ಆದರೆ ಈಗ ಚಿತ್ರತಂಡ ಹೊಸ ಮಾಹಿತಿ ಹಂಚಿಕೊಂಡಿದೆ.

‘ತುಂಬ ಪರಿಶ್ರಮ ಮತ್ತು ಶ್ರದ್ಧೆಯಿಂದ ನಾವು ನಾರಪ್ಪ ಸಿನಿಮಾ ಮಾಡಿದ್ದೇವೆ. ಈ ಸಿನಿಮಾ ಬಗ್ಗೆ ನೀವು ತೋರಿಸುತ್ತಿರುವ ಪ್ರೀತಿ ಕೂಡ ಅಪಾರವಾಗಿದೆ. ಆದರೆ ಸಾಂಕ್ರಮಿಕದ ಕಾರಣದಿಂದ ಎಲ್ಲರೂ ಕಷ್ಟಪಡಬೇಕಾದ ಪರಿಸ್ಥಿತಿ ಬಂದಿರುವಾಗ ಎಲ್ಲ ಪ್ರೇಕ್ಷಕರ ಮತ್ತು ಪ್ರೀತಿಪಾತ್ರರ ಆರೋಗ್ಯದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಈ ಚಿತ್ರವನ್ನು ಮುಂದೂಡಲು ನಿರ್ಧರಿಸಿದ್ದೇವೆ. ಪರಿಸ್ಥಿತಿ ಸರಿಯಾದ ಬಳಿಕ ನಾವು ಈ ಸಿನಿಮಾವನ್ನು ನಿಮಗೆ ತೋರಿಸುತ್ತೇವೆ. ಅಲ್ಲಿಯವರೆಗೂ ನಿಮ್ಮ ಸುರಕ್ಷತೆಯನ್ನು ನೀವು ಕಾಪಾಡಿಕೊಳ್ಳಿ. ಇದನ್ನೆಲ್ಲ ಒಟ್ಟಿಗೆ ಎದುರಿಸೋಣ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ವೆಂಟೇಶ್​ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಟ ಧನುಶ್​ಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಸಿನಿಮಾ ಅಸುರನ್​. ಆ ಚಿತ್ರದ ತೆಲುಗು ರಿಮೇಕ್ ಆಗಿ ‘ನಾರಪ್ಪ’ ಸಿದ್ಧವಾಗಿದೆ. ಕೊರೊನಾ ಹೆಚ್ಚುತ್ತಿರುವುದರಿಂದ ಈ ಚಿತ್ರ ಓಟಿಟಿಯಲ್ಲಿ ತೆರೆಕಾಣಬಹುದು ಎಂಬ ಗಾಸಿಪ್​ ಕೂಡ ಕೇಳಿಬಂದಿತ್ತು. ಆದರೆ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿರುವ ಚಿತ್ರತಂಡ ಓಟಿಟಿ ರಿಲೀಸ್​ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ. ಆ ಮೂಲಕ ಈ ಸಿನಿಮಾ ಓಟಿಟಿಯಲ್ಲಿ ಬಿಡುಗಡೆ ಆಗುವ ಸಾಧ್ಯತೆ ಕಡಿಮೆ ಎಂಬುದು ಗೊತ್ತಾಗಿದೆ.

ಈ ಚಿತ್ರದಲ್ಲಿ ದಗ್ಗುಬಾಟಿ ವೆಂಕಟೇಶ್​ ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಭಾರಿ ಕೌತುಕ ಮೂಡಿಸಿವೆ. ಶ್ರೀಕಾಂತ್​ ಅಡ್ಡಲ ನಿರ್ದೇಶನ ಮಾಡಿದ್ದು, ಪ್ರಿಯಾಮಣಿ, ಪ್ರಕಾಶ್​ ರಾಜ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ

ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ಕೋಟಿ ರಾಮು ಕೊವಿಡ್​ಗೆ ಬಲಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ