‘ದರ್ಶನಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ’; ನಾಗ ಶೌರ್ಯ
ದರ್ಶನ್ ಮಾಡಿರೋ ಆರೋಪ ಸಾಬೀತಾದರೆ ಅವರಿಗೆ ಗರಿಷ್ಠ ಜೈಲು ಶಿಕ್ಷೆ ಇರಲಿ ಎಂದು ಕೆಲವರು ಆಗ್ರಹಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಕೊಲೆಯಾದ ವ್ಯಕ್ತಿಗೆ ಯಾವ ರೀತಿಯಲ್ಲಿ ಟಾರ್ಚರ್ ನೀಡಲಾಗಿತ್ತು ಎನ್ನುವ ಫೋಟೋಗಳು ವೈರಲ್ ಆಗಿವೆ. ಈಗ ನಾಗ ಶೌರ್ಯ ಅವರು ದರ್ಶನ್ ಪರ ನಿಂತಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಗೌಡ, ವಿನಯ್ ಸೇರಿ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ಎಲ್ಲರೂ ಈಗ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ಮಧ್ಯೆ ಅನೇಕರು ದರ್ಶನ್ ಅವರನ್ನು ಬೆಂಬಲಿಸಿದರೆ ಇನ್ನೂ ಕೆಲವರು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ತೆಲುಗು ನಟ ನಾಗ ಶೌರ್ಯ ಅವರು ದರ್ಶನ್ ಬೆಂಬಲಿಸಿದ್ದಾರೆ.
ದರ್ಶನ್ ಅವರು ಮಾಡಿರೋ ಆರೋಪ ಸಾಬೀತಾದರೆ ಅವರಿಗೆ ಗರಿಷ್ಠ ಜೈಲು ಶಿಕ್ಷೆ ಇರಲಿ ಎಂದು ಕೆಲವರು ಆಗ್ರಹಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಕೊಲೆಯಾದ ವ್ಯಕ್ತಿಗೆ ಯಾವ ರೀತಿಯಲ್ಲಿ ಟಾರ್ಚರ್ ನೀಡಲಾಗಿತ್ತು ಎನ್ನುವ ಫೋಟೋಗಳು ವೈರಲ್ ಆಗಿವೆ. ಈಗ ನಾಗ ಶೌರ್ಯ ಅವರು ದರ್ಶನ್ನ ಬೆಂಬಲಿಸಿದ್ದಾರೆ. ದರ್ಶನ್ ಪರ ನಿಂತ ಮೊದಲ ತೆಲುಗು ಹೀರೋ ನಾಗ ಶೌರ್ಯ ಆಗಿದ್ದಾರೆ.
‘ಮೃತರ ಕುಟುಂಬದ ಬಗ್ಗೆ ಕೇಳಿದಾಗ ನನ್ನ ಹೃದಯವು ಮರುಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ಸಿಗಲಿ ಎಂದು ನಾನು ಬಯಸುತ್ತೇನೆ. ಈ ವಿಷಯದಲ್ಲಿ ಜನರು ಈಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ’ ಎಂದಿದ್ದಾರೆ ನಾಗ ಶೌರ್ಯ.
View this post on Instagram
‘ದರ್ಶನ್ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಗುಣ ದರ್ಶನ್ಗೆ ಇದೆ. ಅವರು ಯಾವಾಗಲೂ ಅಗತ್ಯವಿರುವವರ ಸಹಾಯಕ್ಕೆ ಧಾವಿಸುತ್ತಾರೆ. ಅವರು ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆ’ ಎಂದು ನಾಗ ಶೌರ್ಯ ಬರೆದಿದ್ದಾರೆ.
ಇದನ್ನೂ ಓದಿ: ‘ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಬಂಧನದಿಂದ ಚಿತ್ರರಂಗ ಮಂಕಾಗಿದೆ’: ಶ್ರುತಿ
‘ನನ್ನ ಕರಾಳ ಭಯದಲ್ಲಿಯೂ ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಈ ಸವಾಲಿನ ಅವಧಿಯಲ್ಲಿ ಅವರು ಗೌಪ್ಯತೆ ಮತ್ತು ಗೌರವಕ್ಕೆ ಅರ್ಹರಾಗಿದ್ದಾರೆ. ಸಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.