ತೆಲುಗು ನಟನಿಗೆ ಶುಭ ಕೋರಿದ ದರ್ಶನ್, ಕಿಚ್ಚ ಸುದೀಪ್, ಯಾರು ಈ ‘ರಾಕಿಂಗ್ ಸ್ಟಾರ್’
ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ತೆಲುಗು ನಟನೊಬ್ಬರಿಗೆ ಶುಭ ಹಾರೈಸಿದ್ದಾರೆ. ಈ ನಟ ಬರೋಬ್ಬರಿ ಎಂಟು ವರ್ಷಗಳ ಬಳಿಕ ಚಿತ್ರರಂಗಕ್ಕೆ ಪುನರ್ಪ್ರವೇಶ ಮಾಡುತ್ತಿದ್ದಾರೆ.
ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಹೆಚ್ಚಾದ ಬಳಿಕ ಬೇರೆ ಬೇರೆ ಚಿತ್ರರಂಗದ ನಟ-ನಟಿಯರ ಅಂತರ ಕಡಿಮೆಯಾಗಿದೆ. ಬೇರೆ ಬೇರೆ ಭಾಷೆಯ ನಟರುಗಳು ಪರಸ್ಪರರ ಸಿನಿಮಾಗಳಿಗೆ ಬೆಂಬಲಿಸುತ್ತಿದ್ದಾರೆ. ಪರಸ್ಪರ ಶುಭ ಹಾರೈಸಿಕೊಳ್ಳುತ್ತಿದ್ದಾರೆ. ನಟ ದರ್ಶನ್, ಸಾಮಾನ್ಯವಾಗಿ ಪರಭಾಷೆಯ ನಟರಿಗೆ ಶುಭ ಹಾರೈಸುವುದು, ಸಿನಿಮಾಗಳಿಗೆ ಶುಭ ಕೋರುವುದು ಅಪರೂಪ, ಆದರೆ ಇದೀಗ ತೆಲುಗು ಸಿನಿಮಾ ನಟರೊಬ್ಬರಿಗೆ ಶುಭ ಹಾರೈಸಿದ್ದಾರೆ. ಅದೇ ನಟನಿಗೆ ನಟ ಕಿಚ್ಚ ಸುದೀಪ್ ಸಹ ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಯಾರು ಈ ನಟ?
ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಎರಡು ದಿನದ ಹಿಂದೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಕಳೆದ ಎಂಟು ವರ್ಷದಿಂದ ಸಿನಿಮಾಗಳಿಂದ ದೂರವಿದ್ದ ಮಂಚು ಮನೋಜ್, ಇದೀಗ ಮತ್ತೆ ಬಣ್ಣ ಹಚ್ಚಿದ್ದು, ಅವರಿಗೆ ದರ್ಶನ್ ಹಾಗೂ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ‘ಹನುಮಾನ್’ ಸಿನಿಮಾ ಖ್ಯಾತಿಯ ತೇಜ್ ಸಜ್ಜಾ ನಾಯಕನಾಗಿ ನಟಿಸುತ್ತಿರುವ ‘ಮಿರಾಯ್’ ಸಿನಿಮಾ ಮೂಲಕ ರಾಕಿಂಗ್ ಸ್ಟಾರ್ ಮನೋಜ್ ಬೆಳ್ಳಿತೆರೆಗೆ ಮತ್ತೆ ಕಂಬ್ಯಾಕ್ ಮಾಡುತ್ತಿದ್ದಾರೆ.
ಮಂಚು ಮನೋಜ್ ಜನ್ಮದಿನದ ವಿಶೇಷವಾಗಿ ‘ಮಿರಾಯ್’ ಚಿತ್ರತಂಡ ವಿಶೇಷ ವಿಡಿಯೋ ಬಿಡುಗಡೆ ಮಾಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಮನೋಜ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಪ್ರೀತಿಯ ಸಹೋದರನಿಗೆ ಶುಭಾಷಯ ಕೋರಿದ್ದಾರೆ. ‘ದಿ ಬ್ಲ್ಯಾಕ್ ಸ್ವೋರ್ಡ್’ ಟೈಟಲ್ ನಡಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಮನೋಜ್ ಉದ್ದ ಕೂದಲು ಬಿಟ್ಟು ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಭರ್ಜರಿ ಆಕ್ಷನ್ಸ್ ಮೂಲಕ ಗಮನಸೆಳೆಯುವ ಮಂಚು ಮನೋಜ್ ಡಬಲ್ ಶೇಡ್ ನಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ
‘ಮಿರಾಯ್’ ಸಿನಿಮಾಗೆ ಕಾರ್ತಿಕ್ ಗಟ್ಟಿಮನೇನಿ ನಿರ್ದೇಶನ ಮಾಡಿದ್ದಾರೆ. ‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯ ಕಥೆಗಳನ್ನು ಬಿಚ್ಚಿಡುವ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿ ಟಿಜಿ ವಿಶ್ವಪ್ರಸಾದ್ ‘ಮಿರಾಯ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಕಾರ್ತಿಕ್ ಗಟ್ಟಮ್ನೇನಿ ‘ಮಿರಾಯ್’ ಸಿನಿಮಾಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮಣಿಬಾಬು ಕರಣಂ ಸಿನಿಮಾಕ್ಕೆ ಸಂಭಾಷಣೆ ಬರೆದಿದ್ದಾರೆ. ನಾಗೇಂದ್ರ ತಂಗಳ ಕಲಾ ನಿರ್ದೇಶಕನ ಮಾಡಿದ್ದಾರೆ. ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ‘ಮಿರಾಯ್’ ಸಿನಿಮಾವನ್ನು 2 ಡಿ ಹಾಗೂ 3 ಡಿ ವರ್ಷನ್ ನಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮುಂದಿನ ವರ್ಷದ ಏಪ್ರಿಲ್ 18ರಂದು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ