AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಕೂಡ ಸಾಕ್ಷಿಯಾಗಿದ್ದಾರೆ. ಅಕ್ಟೋಬರ್ 15ರಂದು 59ನೇ ಸಿಎಸ್‌ಎಚ್‌ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವಂತೆ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಕೋರ್ಟ್‌ ಸಮನ್ಸ್ ನೀಡಿದೆ. ದರ್ಶನ್ ಆಪ್ತ ವಲಯದಲ್ಲಿ ಈ ನಟರು ಗುರುತಿಸಿಕೊಂಡಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್
Chikkanna, Darshan, Yashas Surya
ಮದನ್​ ಕುಮಾರ್​
|

Updated on: Oct 08, 2026 | 7:07 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ಗ್ಯಾಂಗ್ ಮೇಲಿನ ವಿಚಾರಣೆ ತೀವ್ರಗೊಂಡಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 59ನೇ ಸಿಎಸ್‌ಎಚ್‌ ನ್ಯಾಯಾಲಯವು ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಅಕ್ಟೋಬರ್ 15ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಇಬ್ಬರೂ ನಟರಿಗೆ ಕೋರ್ಟ್‌ ನಿರ್ದೇಶನ ನೀಡಿದೆ.

ರೇಣುಕಾಸ್ವಾಮಿ ಹತ್ಯೆ ನಡೆದ ದಿನದಂದು (ಜೂನ್ 8, 2024) ನಟ ದರ್ಶನ್ ಅವರು ಆರ್‌ಆರ್ ನಗರದ ‘ಸ್ಟೋನಿಬ್ರೂಕ್’ ರೆಸ್ಟೋರೆಂಟ್‌ನಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಉಪಸ್ಥಿತರಿದ್ದರು. ತನಿಖಾಧಿಕಾರಿಗಳು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ನಟ ಚಿಕ್ಕಣ್ಣ ಅವರನ್ನು ದರ್ಶನ್ ವಿರುದ್ಧದ ಪ್ರಮುಖ ಸಾಕ್ಷಿಯನ್ನಾಗಿ ಸೇರಿಸಲಾಗಿದೆ.

ಹತ್ಯೆ ನಡೆಯುವ ಕೆಲವೇ ಗಂಟೆಗಳ ಮೊದಲು ನಟ ದರ್ಶನ್ ಎಲ್ಲಿದ್ದರು, ಯಾರ ಜೊತೆಗಿದ್ದರು ಹಾಗೂ ಅವರ ನಡವಳಿಕೆ ಹೇಗಿತ್ತು ಎಂಬುದನ್ನು ದೃಢೀಕರಿಸಲು ಚಿಕ್ಕಣ್ಣ ಅವರ ಸಾಕ್ಷ್ಯ ಹಾಗೂ ವಿಚಾರಣೆ ಅತ್ಯಂತ ನಿರ್ಣಾಯಕವಾಗಿದೆ. ನ್ಯಾಯಾಲಯದಲ್ಲಿ ಚಿಕ್ಕಣ್ಣ ಅವರು ಯಾವ ರೀತಿಯ ಹೇಳಿಕೆ ನೀಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಇದೆ.

ಈ ಮೊದಲು ತನಿಖಾ ಹಂತದಲ್ಲಿ ಪೊಲೀಸರ ಮುಂದೆ ಹಾಜರಾಗಿದ್ದ ಚಿಕ್ಕಣ್ಣ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿಯೂ ಸಿಆರ್‌ಪಿಸಿ 164ರ ಅಡಿಯಲ್ಲಿ ತಮ್ಮ ಸ್ವಯಂಪ್ರೇರಿತ ಹೇಳಿಕೆಯನ್ನು ದಾಖಲಿಸಿದ್ದರು. ಇದೀಗ ವಿಚಾರಣೆ ಪ್ರಕ್ರಿಯೆ ಆರಂಭವಾಗಿರುವುದರಿಂದ, ಕೋರ್ಟ್‌ನಲ್ಲಿ ಪ್ರತ್ಯಕ್ಷ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗಾಗಿ ಅವರಿಗೆ ಸಮನ್ಸ್ ನೀಡಲಾಗಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​​ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ದರ್ಶನ್ ಜೊತೆ ಅವರಿಗೆ ಆಪ್ತ ಒಡನಾಟ ಇದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಪ್ರಮುಖ ಆರೋಪಿ ಆಗಿದ್ದಾರೆ. ಪ್ರಕರಣದಲ್ಲಿ ಚಿಕ್ಕಣ್ಣ ಸಾಕ್ಷಿಯಾಗಿದ್ದಾರೆ. ಆದ್ದರಿಂದ ತಮ್ಮ ಮದುವೆಗೆ ದರ್ಶನ್ ಅವರನ್ನು ಚಿಕ್ಕಣ್ಣ ಆಹ್ವಾನಿಸಿರಲಿಲ್ಲ. ದರ್ಶನ್ ಆಪ್ತ ಪ್ರದೋಷ್ ಕೂಡ ಈ ಪ್ರಕರಣದಲ್ಲಿ ಮಾಫಿ ಸಾಕ್ಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ