AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬರ್ತಿದ್ದೀನಿ ಚಿನ್ನ’ ಆರು ತಿಂಗಳ ಬಳಿಕ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ದರ್ಶನ್

Darshan Thoogudeepa: ರೇಣುಕಾ ಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಒಟ್ಟಾರೆಯಾಗಿ ಈಗಾಗಲೇ ವರ್ಷಕ್ಕೂ ಅಧಿಕ ಸಮಯ ಜೈಲು ವಾಸ ಅನುಭವಿಸಿದ್ದಾರೆ. ಇನ್ನೂ ಒಂದು ವರ್ಷ ದರ್ಶನ್ ಜೈಲಿನಲ್ಲಿಯೇ ಇರಬೇಕಿದೆ. ಆದರೆ ಇದೀಗ ದರ್ಶನ್ ಅಭಿಮಾನಿಗಳಿಗೆ ಸಣ್ಣ ಖುಷಿಯ ಸುದ್ದಿಯೊಂದು ದೊರೆತಿದೆ. ನಟ ದರ್ಶನ್ ಅವರ ಸಿನಿಮಾ ಇದೀಗ ಒಟಿಟಿ ಹಾಗೂ ಟಿವಿಗೆ ಬರಲು ಸಜ್ಜಾಗಿದೆ.

‘ಬರ್ತಿದ್ದೀನಿ ಚಿನ್ನ’ ಆರು ತಿಂಗಳ ಬಳಿಕ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ದರ್ಶನ್
Devil Movie
ಮಂಜುನಾಥ ಸಿ.
|

Updated on:Jun 20, 2026 | 4:46 PM

Share

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಕನಿಷ್ಟ ಇನ್ನೊಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಲ್ಲಿಸದಂತಾಗಿದೆ. ಪ್ರಕರಣದಲ್ಲಿ ನಟ ದರ್ಶನ್ ಒಟ್ಟಾರೆಯಾಗಿ ಈಗಾಗಲೇ ವರ್ಷಕ್ಕೂ ಅಧಿಕ ಸಮಯ ಜೈಲು ವಾಸ ಅನುಭವಿಸಿದ್ದಾರೆ. ಇನ್ನೂ ಒಂದು ವರ್ಷ ದರ್ಶನ್ ಜೈಲಿನಲ್ಲಿಯೇ ಇರಬೇಕಿದೆ. ಆದರೆ ಇದೀಗ ದರ್ಶನ್ ಅಭಿಮಾನಿಗಳಿಗೆ ಸಣ್ಣ ಖುಷಿಯ ಸುದ್ದಿಯೊಂದು ದೊರೆತಿದೆ. ನಟ ದರ್ಶನ್ ಅವರ ಸಿನಿಮಾ ಇದೀಗ ಒಟಿಟಿ ಹಾಗೂ ಟಿವಿಗೆ ಬರಲು ಸಜ್ಜಾಗಿದೆ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗುವಷ್ಟರಲ್ಲಿ ದರ್ಶನ್ ಅವರ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿ ತಿಂಗಳುಗಳಾಗಿತ್ತು. ದರ್ಶನ್ ಜೈಲಿನಲ್ಲಿದ್ದಾಗಲೇ ಬಿಡುಗಡೆ ಆದ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ ಆರು ತಿಂಗಳಾದರು ಈ ಸಿನಿಮಾ ಯಾವುದೇ ಒಟಿಟಿ ಅಥವಾ ಟಿವಿಗಳಲ್ಲಿ ಪ್ರಸಾರ ಆಗಿರಲಿಲ್ಲ. ಆದರೆ ಇದೀಗ ಕೊನೆಗೂ ‘ಡೆವಿಲ್’ ಸಿನಿಮಾ ಒಟಿಟಿ ಮತ್ತು ಟಿವಿಗೆ ಬರಲು ಸಜ್ಜಾಗಿದೆ.

ಜೀ5 ಇದೀಗ ‘ಡೆವಿಲ್’ ಸಿನಿಮಾದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕು ಖರೀದಿ ಮಾಡಿದ್ದು, ಸಿನಿಮಾವನ್ನು ಅದ್ಧೂರಿಯಾಗಿ ಒಟಿಟಿಯಲ್ಲಿ ಹಾಗೂ ಟಿವಿಯಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿಕೊಂಡಿದೆ. ಈ ಸಂಬಂಧ ಜೀ5 ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಪೋಸ್ಟ್​​ನಲ್ಲಿ ನಟ ದರ್ಶನ್ ಅವರ ‘ಸೂರ್ಯಂಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ, ಬರ್ತಾ ಇದೀನಿ ಚಿನ್ನ’ ಎಂಬ ಡೈಲಾಗ್ ಅನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ’; ದರ್ಶನ್​​ಗೆ ಬಾಸ್ ನಿರ್ದೇಶಕನ ಮನವಿ

2024ರಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವಾಗಲೇ ರೇಣುಕಾ ಸ್ವಾಮಿ ಕೊಲೆ ನಡೆದು ನಟ ದರ್ಶನ್ ಬಂಧನವಾಗಿತ್ತು. ಹಾಗಾಗಿ ಸಿನಿಮಾದ ಚಿತ್ರೀಕರಣ ವಿಳಂಬವಾಗಿತ್ತು. ಬಳಿಕ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದಾಗ ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮತ್ತು ಡಬ್ಬಿಂಗ್ ಮುಗಿಸಿದರು. ಬಳಿಕ ಸುಪ್ರೀಂಕೋರ್ಟ್​​ನಲ್ಲಿ ದರ್ಶನ್ ಜಾಮೀನು ರದ್ದಾಯಿತು. ದರ್ಶನ್ ಜೈಲಿನಲ್ಲಿರುವಾಗಲೇ ಸಿನಿಮಾ ಬಿಡುಗಡೆ ಆಯ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಕೆಲವು ಗೆಳೆಯರು ಮುಂದೆ ನಿಂತು ಸಿನಿಮಾದ ಪ್ರಚಾರ ಮಾಡಿದರು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿತು. ಸಿನಿಮಾ ಅನ್ನು ಮಿಲನ ಪ್ರಕಾಶ್ ನಿರ್ದೇಶನ ಮಾಡಿದ್ದರು. ಸಿನಿಮಾನಲ್ಲಿ ನಾಯಕಿಯಾಗಿ ರಚನಾ ರೈ ನಟಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 20 June 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ