ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಸದ್ಯ ಕೇಂದ್ರ ಕಾರಾಗೃಹದಲ್ಲಿ ಇವರು ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಜೈಲು ಸೇರಿ ಇವರು ತಿಂಗಳ ಮೇಲಾಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಜುಲೈ 18ರಂದು ದರ್ಶನ್ ಹಾಗೂ ಅವರ ಗುಂಪಿನ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಅವರನ್ನು ಪೊಲೀಸರು ಮತ್ತೆ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಈ ವೇಳೆ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಏಕೆ ಜಾಮೀನು ನೀಡಬಾರದು ಎಂಬುದಕ್ಕೆ ಪೊಲೀಸರು ದೊಡ್ಡ ಪಟ್ಟಿ ಸಿದ್ಧಪಡಿಸಿದ್ದಾರೆ. ಗುರುವಾರ (ಜುಲೈ 18) ಪೊಲೀಸರು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ.
ಆರೋಪಿಗಳಿಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕೆಲವು ಪ್ರಮುಖ ಕಾರಣಗಳನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಕೊಲೆ ಬಳಿಕ ಸಾಕ್ಷ್ಯ ನಾಶಕ್ಕೆ ದರ್ಶನ್ ಗ್ಯಾಂಗ್ ಮುಂದಾಗಿತ್ತು. ಇದನ್ನು ಪ್ರಮುಖವಾಗಿ ಪೊಲೀಸರು ಮುಂದಿಟ್ಟುಕೊಂಡಿದ್ದಾರೆ. ಜೊತೆಗೆ ದರ್ಶನ್ ಅವರಿಗೆ ಸಖತ್ ಪ್ರಭಾವ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ: ದೈಹಿಕ, ಮಾನಸಿಕ ಆರೋಗ್ಯಕ್ಕೆ ಜೈಲಿನಲ್ಲಿ ಯೋಗದ ಮೊರೆ ಹೋದ ದರ್ಶನ್
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.