ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ: ದರ್ಶನ್
Darshan: ಚಿತ್ರರಂಗದಲ್ಲಿ 25 ವರ್ಷದ ಪೂರೈಸಿದ್ದಕ್ಕಾಗಿ ಆಯೋಜಿಸಲಾಗಿದ್ದ ‘ಬೆಳ್ಳಿಪರ್ವ ಡಿ-25’ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್, ವಿವಾದಗಳ ಬಗ್ಗೆ ಪರೋಕ್ಷವಾಗಿ ಮಾತನಾಡಿದರು.
‘ಬೆಳ್ಳಿಪರ್ವ ಡಿ-25’ ಕಾರ್ಯಕ್ರಮದಲ್ಲಿ ಮಾತನಾಡದ ನಟ ದರ್ಶನ್ (Darshan), ‘ಚಿತ್ರರಂಗ, ರಾಜಕೀಯ, ಬ್ಯುಸಿನೆಸ್ ಯಾವುದೇ ಆಗಿರಲಿ ಶ್ರಮ ಇರಲೇ ಬೇಕು. ಶ್ರದ್ಧೆ ಬೇಕೇಬೇಕು. ಆರಂಭದಲ್ಲಿ ಅವಮಾನಗಳನ್ನು ಎದುರಿಸಲೇ ಬೇಕು. ಅವಮಾನಗಳು ಆದರೇನೆ ಸನ್ಮಾನ. ಚಪ್ಪಲಿಯಲ್ಲಿ ಹೊಡೆದರೆ ಹೊಡೀರಿ, ಹಾರ ಹಾಕಿಸಿಕೊಳ್ಳುವುದಕ್ಕೆ ಮಾತ್ರ ರೆಡಿ ಇದ್ದರೆ ಸಾಲದು, ಚಪ್ಪಲಿ ಬಿದ್ದಾಗ ಅದನ್ನೂ ಸ್ವೀಕರಿಸಬೇಕು. ನನ್ನಷ್ಟು ವಿವಾದ ಯಾರಿಗೂ ಸುತ್ತಿಕೊಳ್ಳಲ್ಲ. ಹೌದು ನಾನು ಬ್ಯಾಡ್ ಬಾಯ್. ಕಷ್ಟಪಟ್ಟಾಗ ಮಾತುಗಳು ಕಹಿಯಾಗಿರುತ್ತೆ. ಅದು ಕೆಲವರಿಗೆ ಹಿಡಿಸಲ್ಲ. ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಬದಿಗಿಡುತ್ತೀನಿ. ನನ್ನ ಸೆಲೆಬ್ರಿಟಿಗಳು, ನನ್ನ ಕೆಲಸ ಮುಖ್ಯ, ಬೇರೆಯದಕ್ಕೆ ತಲೆಕೆಡಿಸಿಕೊಳ್ಳಲ್ಲ. ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ’ ಎಂದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ