AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲೀಲಾ ನಟನೆಯ ಸಿನಿಮಾದಲ್ಲಿ ಡೇವಿಡ್ ವಾರ್ನರ್; ಹೊರಬಿತ್ತು ಬಿಸಿಬಿಸಿ ಸುದ್ದಿ

ಆಸ್ಟ್ರೇಲಿಯಾದ ಕ್ರಿಕೆಟರ್ ಡೇವಿಡ್ ವಾರ್ನರ್ ತೆಲುಗು ಚಲನಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. 'ರಾಬಿನ್ ಹುಡ್' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ ಮತ್ತು ಜಾಹೀರಾತುಗಳಲ್ಲಿ ಗುರುತಿಸಿಕೊಂಡಿರುವ ವಾರ್ನರ್ ಅವರ ಈ ಹೊಸ ಅವತಾರ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ. ಮಾರ್ಚ್ 28ರಂದು ಚಿತ್ರ ತೆರೆಗೆ ಬರಲಿದೆ. ವಾರ್ನರ್ 2025ರ ಐಪಿಎಲ್‌ನಲ್ಲಿ ಅನ್‌ಸೋಲ್ಡ್ ಆಗಿದ್ದಾರೆ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೊಂದಿದ್ದಾರೆ ಎಂಬುದು ಗಮನಾರ್ಹ.

ಶ್ರೀಲೀಲಾ ನಟನೆಯ ಸಿನಿಮಾದಲ್ಲಿ ಡೇವಿಡ್ ವಾರ್ನರ್; ಹೊರಬಿತ್ತು ಬಿಸಿಬಿಸಿ ಸುದ್ದಿ
ವಾರ್ನರ್-ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on:Mar 04, 2025 | 8:34 AM

Share

ಆಸ್ಟ್ರೇಲಿಯಾ ಕ್ರಿಕೆಟರ್ ಡೇವಿಡ್ ವಾರ್ನರ್ ಬಗ್ಗೆ ಅನೇಕರಿಗೆ ಗೊತ್ತು. ಐಪಿಎಲ್​ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಇದ್ದಾಗ ಅವರು ತೆಲುಗು ಹಾಡುಗಳಿಗೆ ಡ್ಯಾನ್ಸ್ ಮಾಡಿ, ರೀಲ್ಸ್ ಮಾಡಿ ಗಮನ ಸೆಳೆದರು. ಅವರು ಈ ಮೊದಲು ವಿವಿಧ ರೀತಿಯ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದರು. ಈಗ ಅವರು ತೆಲುಗು ಸಿನಿಮಾದಲ್ಲಿ ನಟಿಸೋದು ಪಕ್ಕಾ ಆಗಿದೆ. ಈ ಬಗ್ಗೆ ವೇದಿಕೆ ಮೇಲೆ ಮಾಹಿತಿ ರಿವೀಲ್ ಆಗಿದೆ.

ಮೈತ್ರಿ ಮೂವೀ ಮೇಕರ್ಸ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ. ಇವರು ಈಗ ಡೇವಿಡ್ ವಾರ್ನರ್​​ನ ಕರೆತಂದಿದ್ದಾರೆ. ಈ ಸಂಸ್ಥೆಯ ನಿರ್ಮಾಪಕರಲ್ಲಿ ಒಬ್ಬರಾದ ರವಿ ಶಂಕರ್ ಅವರು ಪ್ರೆಸ್​ಮೀಟ್ ಒಂದರಲ್ಲಿ ಈ ಮಾತನ್ನು ಹೇಳಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡುತ್ತಿರುವ ‘ರಾಬಿನ್ ಹುಡ್’ ಚಿತ್ರದಲ್ಲಿ ಡೇವಿಡ್ ವಾರ್ನರ್ ಅತಿಥಿ ಪಾತ್ರ ಮಾಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಚರ್ಚೆ ಶುರುವಾಗಿದೆ. ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಅವರನ್ನು ದೊಡ್ಡ ಪರದೆಯಮೇಲೆ ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಡೇವಿಡ್ ವಾರ್ನರ್ ಅವರ ಪರ್ಸನಾಲಿಟಿ ಭಿನ್ನವಾಗಿದೆ. ತೆಲುಗು ಪ್ರೇಕ್ಷಕರ ಜೊತೆ ಅವರು ಒಳ್ಳೆಯ ನಂಟು ಹೊಂದಿರುವುದರಿಂದ ಮತ್ತಷ್ಟು ಇಷ್ಟ ಆಗುವ ಸಾಧ್ಯತೆ ಹೆಚ್ಚು.

‘ರಾಬಿನ್ ಹುಡ್’ ಚಿತ್ರ ಮಾರ್ಚ್ 28ರಂದು ತೆರೆಮೇಲೆ ಬರಲಿದೆ. ಅಂದರೆ, ಈಗಾಗಲೇ ಚಿತ್ರದ ಶೂಟ್ ಕೂಡ ಪೂರ್ಣಗೊಂಡಿದೆ. ಡೇವಿಡ್ ವಾರ್ನರ್ ಭಾಗದ ಶೂಟ್​ನ ಗುಟ್ಟಾಗಿ ಮಾಡಲಾಗಿದೆ. ಇಷ್ಟು ದಿನ ತಂಡ ಈ ಬಗ್ಗೆ ಗೌಪ್ಯತೆ ಕಾದುಕೊಂಡು ಬಂದಿತ್ತು. ನಿತಿನ್, ಶ್ರೀಲೀಲಾ ಮೊದಲಾದವರು ನಟಿಸಿದ್ದಾರೆ. ವೆಂಕಿ ಕುಡುಮುಲಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕ್ರಿಕೆಟಿಗ ಡೇವಿಡ್ ವಾರ್ನರ್

ಡೇವಿಡ್ ವಾರ್ನರ್ 2025ರ ಐಪಿಎಲ್​ನಲ್ಲಿ ಅನ್​ಸೋಲ್ಡ್ ಆಗಿದ್ದಾರೆ. ಅವರ ಬೇಸ್ ಬೆಲೆ 2 ಕೋಟಿ ರೂಪಾಯಿ ಆಗಿತ್ತು. 2024ರ ಟಿ20 ವರ್ಲ್ಡ್​​ಕಪ್​ನಿಂದ ಹೊರಬಿದ್ದ ಬಳಿಕ ವಾರ್ನರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:32 am, Tue, 4 March 25

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್