ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್​ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಇಂದು (ಸೆಪ್ಟೆಂಬರ್ 08) ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್​ ಫೌಂಡೇಶನ್​ನ ಆಸ್ಪತ್ರೆಗೆ ದಾಖಲಾಗಿದ್ದರು. ರಣ್​ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ಇದೀಗ ಮೊದಲ ಬಾರಿಗೆ ಪೋಷಕರಾಗಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ
Follow us
|

Updated on:Sep 08, 2024 | 5:28 PM

ಬಾಲಿವುಡ್​ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಇಂದು (ಸೆಪ್ಟೆಂಬರ್ 08) ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್​ ಫೌಂಡೇಶನ್​ನ ಆಸ್ಪತ್ರೆಗೆ ದಾಖಲಾಗಿದ್ದರು. ರಣ್​ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ಇದೀಗ ಮೊದಲ ಬಾರಿಗೆ ಪೋಷಕರಾಗಿದ್ದಾರೆ. ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್ 28 ಗೆ ಹೆರಿಗೆ ದಿನಾಂಕ ನೀಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಸೆಪ್ಟೆಂಬರ್ 08 ರಂದು ಈ ಜೋಡಿಗೆ ಮಗುವಾಗಿದೆ. ಕಳೆದ ವರ್ಷ ಆಲಿಯಾ ಭಟ್-ರಣ್​ಬೀರ್ ಕಪೂರ್ ಸಹ ಹೆಣ್ಣು ಮಗುವಿನ ಪೋಷಕರಾದರು.

ದೀಪಿಕಾ ಪಡುಕೋಣೆ ‘ಕಲ್ಕಿ’ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ತಾವು ಗರ್ಭಿಣಿ ಆಗಿರುವ ವಿಷಯ ಬಹಿರಂಗಪಡಿಸಿದ್ದರು. ಗರ್ಭಿಣಿ ಆಗಿರುವ ಸಂದರ್ಭದಲ್ಲಿಯೇ ಅವರು ‘ಕಲ್ಕಿ 2898’ ಸಿನಿಮಾದಲ್ಲಿ ನಟಿಸಿದ್ದರು. ಆದರೆ ಅದಾದ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಲಿಲ್ಲ. ರಣ್​ವೀರ್ ಸಿಂಗ್ ಸಹ ದೀಪಿಕಾ ಗರ್ಭಿಣಿ ಆದ ಬಳಿಕ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿ ಪತ್ನಿಯೊಟ್ಟಿಗೆ ಹೆಚ್ಚು ಸಮಯ ಕಳೆಯಲು ತೊಡಗಿದರು.

ರಣ್​ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಹಲವು ಪ್ರದೇಶಗಳಿಗೆ ಪ್ರವಾಸ ತೆರಳಿದರು. ದೀಪಿಕಾ, ತಮ್ಮ ತವರವರಾದ ಬೆಂಗಳೂರಿನಲ್ಲಿ ಸಹ ಸಾಕಷ್ಟು ಸಮಯ ಕಳೆದಿದ್ದರು. ದೀಪಿಕಾರ ಹೆರಿಗೆ ಲಂಡನ್​ನಲ್ಲಿ ಆಗಲಿದೆ. ಅಲ್ಲಿಯೇ ದೀಪಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ ಮುಂಬೈನಲ್ಲಿಯೇ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನಿನ್ನೆ ಗಣೇಶ ಚತುರ್ಥಿಯಂದು ಮುಂಜಾನೆ ರಣ್​ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ಗಣೇಶ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದರು. ಅದೇ ದಿನ ಸಂಜೆ ವೇಳೆಗೆ ರಣ್​ವೀರ್ ಸಿಂಗ್ ದೀಪಿಕಾ ಮತ್ತು ಇಬ್ಬರ ಕುಟುಂಬದವರು ಮುಂಬೈನ ಎಚ್​ಎನ್​ ರಿಲಯನ್ಸ್​ ಫೌಂಡೇಶನ್​ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆಯೇ ದೀಪಿಕಾಗೆ ಮಗು ಜನನವಾಗಲಿದೆ ಎನ್ನಲಾಗಿತ್ತು. ಆದರೆ ಇಂದು ಮಗುವಿಗೆ ಜನ್ಮ ನೀಡಿದ್ದಾರೆ ದೀಪಿಕಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Sun, 8 September 24

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು