ದೀಪಿಕಾ ಪಡುಕೋಣೆ ತಂದೆ ಪ್ರಕಾಶ್​ ಪಡುಕೋಣೆಗೆ ಕೊರೊನಾ​; ಸ್ನೇಹಿತರಿಂದ ಮಾಹಿತಿ ಬಹಿರಂಗ

Deepika Padukone | Prakash Padukone: ಪ್ರಕಾಶ್​ ಪಡುಕೋಣೆ ಅವರಿಗೆ ಈಗ 65ರ ಪ್ರಾಯ. ಹಾಗಾಗಿ ಅವರ ಅಭಿಮಾನಿಗಳಿಗೆ ಕೊಂಚ ಆತಂಕ ಆಗುವುದು ಸಹಜ. ಆದರೆ ಚಿಂತೆಗೊಳಪಡುವ ಅವಶ್ಯಕತೆ ಇಲ್ಲ ಎಂದು ಅವರ ಸ್ನೇಹಿತ ವಿಮಲ್​ ಕುಮಾರ್​ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆ ತಂದೆ ಪ್ರಕಾಶ್​ ಪಡುಕೋಣೆಗೆ ಕೊರೊನಾ​; ಸ್ನೇಹಿತರಿಂದ ಮಾಹಿತಿ ಬಹಿರಂಗ
ತಂದೆ ಪ್ರಕಾಶ್​ ಪಡುಕೋಣೆ ಮತ್ತು ಕುಟುಂಬದವರ ಜೊತೆ ದೀಪಿಕಾ
Follow us
ಮದನ್​ ಕುಮಾರ್​
|

Updated on: May 04, 2021 | 4:27 PM

ಜನಸಾಮಾನ್ಯರಿಗೆ ಮಾತ್ರವಲ್ಲದೆ ಸೆಲೆಬ್ರಿಟಿಗಳ ವಲಯದಲ್ಲೂ ಕೊರೊನಾ ಭೀತಿ ಹೆಚ್ಚಿದೆ. ಈಗ ನಟಿ ದೀಪಿಕಾ ಪಡುಕೋಣೆ ಅವರ ತಂದೆ, ಖ್ಯಾತ ಬ್ಯಾಡ್ಮಿಂಟನ್​ ಆಟಗಾರ ಪ್ರಕಾಶ್​ ಪಡುಕೋಣೆ ಅವರಿಗೆ ಕೊವಿಡ್​ 19 ಪಾಸಿಟಿವ್​ ಆಗಿದೆ. ಈ ಕುರಿತು ಅವರ ಆಪ್ತ ಸ್ನೇಹಿತರು ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಪ್ರಕಾಶ್​ ಪಡುಕೋಣೆ ಅವರು ಕೊವಿಡ್​ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ಈಗ ತಿಳಿದುಬಂದಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಪ್ರಕಾಶ್​ ಪಡುಕೋಣೆ ಅವರಿಗೆ ಈಗ 65ರ ಪ್ರಾಯ. ಹಾಗಾಗಿ ಅವರ ಅಭಿಮಾನಿಗಳಿಗೆ ಕೊಂಚ ಆತಂಕ ಆಗುವುದು ಸಹಜ. ಆದರೆ ಚಿಂತೆಗೊಳಪಡುವ ಅವಶ್ಯಕತೆ ಇಲ್ಲ ಎಂದು ಅವರ ಸ್ನೇಹಿತ ವಿಮಲ್​ ಕುಮಾರ್​ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಕಾಶ್​ ಪಡುಕೋಣೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಒಂದು ವಾರವಾದರೂ ಜ್ವರ ಕಡಿಮೆ ಆಗದ ಕಾರಣ ಅವರು ಐಸೊಲೇಟ್​ ಆದರು. ನಂತರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅವರು ದಾಖಲಾದರು ಎಂದು ವಿಮಲ್​ ಹೇಳಿದ್ದಾರೆ.

ಮುಂಬೈನಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚುತ್ತಿದ್ದಂತೆಯೇ ದೀಪಿಕಾ ಪಡುಕೋಣೆ ಮತ್ತು ಅವರ ಪತಿ ರಣವೀರ್​ ಸಿಂಗ್​ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಅದಾಗಿ ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲೂ ಪರಿಸ್ಥಿತಿ ಹದಗೆಟ್ಟಿತು. ಈಗ ಪ್ರಕಾಶ್​ ಪಡುಕೋಣೆಗೆ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ದೀಪಿಕಾ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಕಾಶ್​ ಪಡುಕೋಣೆ ಅವರ ಪತ್ನಿ ಉಜ್ಜಲ ಹಾಗೂ ಎರಡನೇ ಮಗಳಿಗೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡವು. ಅವರಿಗೂ ಪಾಸಿಟಿವ್​ ವರದಿ ಬಂದಿದೆ. ಆದರೆ ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕಾಶ್​ ಪಡುಕೋಣೆ ಈ ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ ಎಂದು ವಿಮಲ್​ ಕುಮಾರ್​ ಹೇಳಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅಲ್ಲು ಅರ್ಜುನ್​, ಪೂಜಾ ಹೆಗ್ಡೆ ಮುಂತಾದವರಿಗೆ ಇತ್ತೀಚೆಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ತಾವು ಚೇತರಿಸಿಕೊಳ್ಳುತ್ತಿರುವುದಾಗಿ ಅಲ್ಲು ಅರ್ಜುನ್​ ಮಾಹಿತಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ನರಕ ಸದೃಶ್ಯ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ:

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್